ಗೃಹ ಸಾಲದ ಬೇಡಿಕೆ ಪರಿಶೀಲನೆ:  ಖಾದರ್‌


Team Udayavani, Apr 25, 2017, 2:21 PM IST

25-MNG-2.jpg

ಪುರಭವನ: ಸರಕಾರಿ ನೌಕರರಿಗೆ ಮನೆ ನಿರ್ಮಾಣದ ಉದ್ದೇಶಕ್ಕಾಗಿ ಶೇ.3 ಬಡ್ಡಿದರದಲ್ಲಿ ಗೃಹ ಸಾಲ ನೀಡಬೇಕು ಎಂಬ ಬೇಡಿಕೆಯನ್ನು ಸರಕಾರದ ಗಮನಕ್ಕೆ ತರಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್‌ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ಕಂದಾಯ ಇಲಾಖೆ ನೌಕರರ ಸಂಘ ಬೆಂಗಳೂರು ಹಾಗೂ ಜಿಲ್ಲಾ ಘಟಕದ ಆಶ್ರಯದಲ್ಲಿ ಪುರಭವನದಲ್ಲಿ ಜರಗಿದ “ಕಂದಾಯ ದಿನಾಚರಣೆ-2017′ ಸಮಾರೋಪ ಸಮಾರಂಭದಲ್ಲಿ  ಅವರು ಮಾತನಾಡಿದರು. ರೈತರನ್ನು  ದೇಶದ ಬೆನ್ನೆಲುಬು ಎಂದು ನಾವು ಕರೆಯುತ್ತೇವೆ.  ಸರಕಾರಿ ನೌಕರರನ್ನು ಕೂಡ ಅದೇ ರೀತಿ ಕರೆಯಬೇಕಿದೆ. ಕಂದಾಯ ಇಲಾಖೆ ಸಹಿತ ಸರಕಾರದ ಎಲ್ಲ ಇಲಾಖೆಗಳ ನೌಕರರ ಭವಿಷ್ಯದ ದೃಷ್ಟಿಯಿಂದ ಅವರಿಗೆ ಮನೆ ನಿರ್ಮಾಣಕ್ಕೆ ಸಹಕಾರ ಹಾಗೂ ಅವರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕೆಲಸ ಆದರೆ ಸರಕಾರಿ ನೌಕರರು ಯಾವುದೇ ಸಮಸ್ಯೆ ಇಲ್ಲದೆ ಕರ್ತವ್ಯ ನಿರ್ವಹಿಸುತ್ತಾರೆ. ಈ ಹಿಂದೆ ಶಾಸಕನಾಗಿದ್ದ ಸಂದರ್ಭದಲ್ಲಿ ಈ ವಿಚಾರವನ್ನು ನಾನು ಸರಕಾರದ ಗಮನಕ್ಕೆ ತಂದಿದ್ದೆ. ಈಗ ಮತ್ತೆ   ಪ್ರಸ್ತಾವಿಸಲಾಗುವುದು ಎಂದರು.

ಒಗ್ಗಟ್ಟಿಗೆ ಪೂರಕ: ಕುಮಾರ್‌
ಅಪರ ಜಿಲ್ಲಾಧಿಕಾರಿ ಕುಮಾರ್‌ ಮಾತನಾಡಿ, ಕಂದಾಯ ಇಲಾಖೆಯ   ನೌಕರರು ಜತೆಯಾಗಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಪೂರಕ. ಕಾರ್ಯದ ಒತ್ತಡದ ಮಧ್ಯೆ ನಮ್ಮೊಳಗಿರುವ ಪ್ರತಿಭೆ ಅನಾವರಣಕ್ಕೆ ಅವಕಾಶ ದೊರಕಿರುವುದು ಶ್ಲಾಘನೀಯ. ಕಂದಾಯ ಇಲಾಖೆ ಸಿಬಂದಿ  ತಮ್ಮ ಸೇವಾ ಕಾರ್ಯವ್ಯಾಪ್ತಿಯಲ್ಲಿ ವಿಶಿಷ್ಟ ಹಾಗೂ ವಿಭಿನ್ನವಾಗಿ ಕಾಣುತ್ತಾರೆ. ಸರಕಾರಿ ವ್ಯವಸ್ಥೆಯ ಮಾದರಿಯಲ್ಲಿ ಕಂದಾಯ ಇಲಾಖೆ  ಮೇಲೆ ಸರ್ವರೂ ಕೂಡ ಹೆಚ್ಚಿನ ನಂಬಿಕೆ ಇಟ್ಟಿದ್ದಾರೆ. ಇದನ್ನು ಕಾಪಾಡಿಕೊಂಡು ಹೋಗುವ ಕೆಲಸವಾಗಬೇಕಿದೆ ಎಂದರು.

ಉಡುಪಿ ಜಿ.ಪಂ. ನಿವೃತ್ತ ಕಾರ್ಯ ನಿರ್ವಹಣಾಧಿಕಾರಿ ಎಸ್‌.ಎ.ಪ್ರಭಾಕರ ಶರ್ಮ ಮಾತನಾಡಿದರು. ಕರ್ನಾಟಕ ರಾಜ್ಯ ಸರಕಾರಿ ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ವಿಜಯ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಕಂದಾಯ ಇಲಾಖೆಯ ಹಿರಿಯ ನೌಕರರನ್ನು  ಸಮ್ಮಾನಿಸಲಾಯಿತು.

ಮಂಗಳೂರು ಉಪವಿಭಾಗ ಸಹಾ ಯಕ ಆಯುಕ್ತ ಎ.ಸಿ.ರೇಣುಕಾ ಪ್ರಸಾದ್‌,  ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ವಿ.ಎಲ್‌. ಶಿವಪ್ರಸಾದ್‌,  ಜಿಲ್ಲಾ ಸರ ಕಾರಿ ನೌಕ ರರ ಸಂಘದ ಅಧ್ಯಕ್ಷ ಪ್ರಕಾಶ್‌ ನಾಯಕ್‌ ಸಹಿತ  ಗಣ್ಯರು  ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

9

Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.