9300ರ ಗಡಿ ದಾಟಿ ಇತಿಹಾಸ ಬರೆದ ನಿಫ್ಟಿ
Team Udayavani, Apr 26, 2017, 9:53 AM IST
ಮುಂಬಯಿ: ಷೇರುಪೇಟೆಗೆ ಮಂಗಳವಾರ “ಮಂಗಳ’ ತಂದಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಿಫ್ಟಿ 9,300ರ ಗಡಿ ದಾಟಿ ದಾಖಲೆ ಬರೆದಿದೆ. ಸೆನ್ಸೆಕ್ಸ್ 30 ಸಾವಿರದ ಅಂಚಿಗೆ ತಲುಪಿದೆ.
ರಿಲಯನ್ಸ್ ಸೇರಿದಂತೆ ಪ್ರಮುಖ ಕಂಪೆನಿಗಳ ತ್ತೈಮಾಸಿಕ ಆದಾಯದಲ್ಲಾಗಿರುವ ಹೆಚ್ಚಳ, ರೂಪಾಯಿ ಮೌಲ್ಯದ ಏರಿಕೆ ಹಾಗೂ ಜಾಗತಿಕ ಮಟ್ಟದಲ್ಲಾಗುತ್ತಿರುವ ವಿದ್ಯಮಾನ ಗಳು ಷೇರುಪೇಟೆಯಲ್ಲಿ ಹೊಸ ಸಂಚಲನ ಮೂಡಿಸಿದೆ.
ಹೂಡಿಕೆದಾರರು ಷೇರು ಖರೀದಿಯಲ್ಲಿ ಭಾರೀ ಆಸಕ್ತಿ ತೋರಿದ ಪರಿಣಾಮ, ಮಂಗಳವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 287 ಅಂಕಗಳ ಏರಿಕೆ ಕಂಡು, ದಿನದ ಅಂತ್ಯಕ್ಕೆ 29,943ರಲ್ಲಿ ವಹಿವಾಟು ಅಂತ್ಯಗೊಳಿಸಿತು. ಇದು ಕಳೆದ 3 ವಾರಗಳಲ್ಲೇ ಸೆನ್ಸೆಕ್ಸ್ನ ಅತ್ಯಧಿಕ ಏರಿಕೆಯಾಗಿದೆ. ಅಚ್ಚರಿಯ ಸಂಗತಿಯೆಂದರೆ, ನಿಫ್ಟಿ 88 ಅಂಕಗಳಷ್ಟು ಏರಿಕೆಯಾಗಿ, ಇದೇ ಮೊದಲ ಬಾರಿ 9,306ರಲ್ಲಿ ವಹಿವಾಟು ಅಂತ್ಯಗೊಳಿಸಿ ದಾಖಲೆ ಸೃಷ್ಟಿಸಿದೆ. ಈ ಮೂಲಕ, ಎಪ್ರಿಲ್ 5ರಂದು 9,265ರಲ್ಲಿ ವಹಿವಾಟು ಕೊನೆಗೊಳಿಸಿ ತಾನೇ ಸೃಷ್ಟಿಸಿದ್ದ ದಾಖಲೆಯನ್ನು ನಿಫ್ಟಿ ಮುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.