ಪರಿಹಾರ ವಿಳಂಬ: ಕೆಐಎಡಿಬಿ ಕಚೇರಿ ಪೀಠೊಪಕರಣ ಜಪ್ತಿ

Team Udayavani, Apr 26, 2017, 1:34 PM IST

hub3.jpg

ಧಾರವಾಡ: ಧಾರವಾಡ ಹಾಲು ಉತ್ಪಾದನಾ ಒಕ್ಕೂಟಕ್ಕಾಗಿ ಕೆಐಎಡಿಬಿ ವಶಪಡಿಸಿಕೊಂಡಿದ್ದ ಭೂಮಿಗೆ ಪರಿಹಾರ ನೀಡುವಲ್ಲಿ ಆಗಿರುವ ವಿಳಂಬಕ್ಕಾಗಿ ನ್ಯಾಯಾಲಯದ ಆದೇಶದಂತೆ ಕೆಐಎಡಿಬಿ ಕಚೇರಿಯನ್ನು ಜಪ್ತಿ ಮಾಡಿದ ಘಟನೆ ಮಂಗಳವಾರ ನಡೆದಿದೆ. 

1987ರಲ್ಲಿ ಧಾರವಾಡ ಹಾಲು ಉತ್ಪಾದನಾ ಒಕ್ಕೂಟಕ್ಕಾಗಿ ಹೊಸಯಲ್ಲಾಪುರ ನಿವಾಸಿ ನಾಗವೇಣಿ ಕಾನಕುಬj ಎಂಬವರಿಂದ 4.18 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಭೂಮಿಗೆ ನೀಡಿರುವ ಎಕರೆಗೆ 6,500 ರೂ. ಬೆಲೆ ಕಡಿಮೆ ಇದೆ ಎಂದು ಭೂ ಮಾಲೀಕರಾದ ನಾಗವೇಣಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 

ಈ ಪ್ರಕರಣದ ವಿಚಾರಣೆ ನಡೆಸಿದ 2ನೇ ಅಧಿಕ ದಿವಾಣಿ ನ್ಯಾಯಾಲಯದ ನ್ಯಾಯಾಧೀಶರು, ಪ್ರತಿ ಎಕರೆಗೆ 71,874  ರೂ. ನೀಡುವಂತೆ ಆದೇಶ ನೀಡಿದ್ದರು. ಆದರೆ ಕೆಐಎಡಿಬಿ ಅವರು 2ನೇ ಅಧಿಕ ದಿವಾಣಿ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು. 

ನಂತರದಲ್ಲಿ ಸುಪ್ರೀಂ ಕೋರ್ಟ್‌ಗೆ ಸಹ ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಡಿಕ್ರಿಹೋಲ್ಡರ್‌ ನಾಗವೇಣಿ ಪರ ಆದೇಶ ನೀಡಿತ್ತು. ಇಷ್ಟಾದರೂ ಸಹ ಕೆಐಎಡಿಬಿ ಹಣ ನೀಡದ ಕಾರಣ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. 

ಆಗ 2ನೇ ಅಧಿಕ ದಿವಾಣಿ ನ್ಯಾಯಾಲಯ, ನಾಗವೇಣಿ ಅವರಿಗೆ 17.63 ಲಕ್ಷ ರೂ. ನೀಡುವಂತೆ ಆದೇಶ ನೀಡಿದೆ. ಆದರೆ, ಈವರೆಗೆ ಭೂಮಿಗೆ ಸೂಕ್ತ ಪರಿಹಾರ ನೀಡದ ಕಾರಣ ಮಂಗಳವಾರ  ಕಚೇರಿಯ ಪೀಠೊಪಕರಣಗಳನ್ನು ಜಪ್ತಿ ಮಾಡಲಾಯಿತು.

ಕೆಐಎಡಿಬಿ ಕಚೇರಿಗೆ ಆಗಮಿಸಿದ ಕಕ್ಷಿದಾರರ ಪರ ವಕೀಲರು ಕಚೇರಿಯಲ್ಲಿದ್ದ 4 ಕಂಪ್ಯೂಟರ್‌, 8 ಕುರ್ಚಿ, 2 ವಿಐಪಿ  ಕುರ್ಚಿ, 2 ಪ್ರಿಂಟರ್‌ ಹಾಗೂ ಒಂದು ಫ್ಯಾನ್‌ ಕುರ್ಚಿ ಪಡೆದುಕೊಂಡರು. ಕಕ್ಷಿದಾರರ ಪರ ಆಶೀಷ ಮಗದೂಮ್‌ ವಕಾಲತ್ತು ವಹಿಸಿದ್ದರು. ಕೋರ್ಟಿನ ಸಿಬ್ಬಂದಿಗಳಾದ ಎಫ್‌.ಸಿ. ಭಾವಿಕಟ್ಟಿ ಹಾಗೂ ಜಿ.ಟಿ.ಗೊಲ್ಲರ ಇದ್ದರು.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.