ಬರ ಹಿನ್ನೆಲೆ: ಇನ್ಮುಂದೆ ಬೋರ್‌ವೆಲ್‌ ನೀರೇ ಗತಿ


Team Udayavani, Apr 26, 2017, 3:21 PM IST

dvg3.jpg

ದಾವಣಗೆರೆ: ಬರದ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಇದೀಗ ನಗರದ ನಾಗರಿಕರಿಗೆ ಬೋರ್‌ವೆಲ್‌ಗ‌ಳಿಂದ ಕುಡಿಯುವ ನೀರು ಸರಬರಾಜು ಮಾಡಬೇಕಿರುವುದರಿಂದ ಮಿತವಾಗಿ ನೀರು ಬಳಸುವಂತೆ ಶಾಸಕ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ. 

ಹವಾಮಾನ ವೈಪರೀತ್ಯದಿಂದಾಗಿ ಮಳೆ ಬಾರದೇ ರಾಜ್ಯಾದ್ಯಂತ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಇದಕ್ಕೆ ದಾವಣಗೆರೆಯೂ ಹೊರತಲ್ಲ. ನಗರದದಲ್ಲಿ ಇದುವರೆಗೂ ನೀರಿನ ಸಮಸ್ಯೆ ಎದುರಾಗದಂತೆ ಮಹಾನಗರ ಪಾಲಿಕೆ ಕ್ರಮ ವಹಿಸಿದೆ. ಆದರೆ, ಪ್ರಸ್ತುತ ನೀರಿನ ಸಮಸ್ಯೆ ಅಧಿಕವಾಗಿದೆ. 

ತುಂಗಭದ್ರಾ ನದಿ, ಕುಂದವಾಡ ಕೆರೆ ಹಾಗೂ ಟಿ.ವಿ. ಸ್ಟೇಷನ್‌ ಕೆರೆಯಲ್ಲಿ ನೀರಿನ ಕೊರತೆ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ. ಮಹಾನಗರಪಾಲಿಕೆ ವ್ಯಾಪ್ತಿಯ ಶೇ.60ರಷ್ಟು ಭಾಗಕ್ಕೆ ತುಂಗಭದ್ರಾ ನದಿಯಿಂದ ಸರಬರಾಜು ಆಗುತ್ತಿತ್ತು.

ಇದೀಗ ಎರಡನೇ ಹಂತದ ನೀರು ಸರಬರಾಜು ಕೇಂದ್ರದ ರಾಜನಹಳ್ಳಿ ಜಾಕ್‌ವೆಲ್‌ನಲ್ಲಿ ನೀರು ಸಂಪೂರ್ಣ ಬತ್ತಿಹೋಗಿದ್ದು ಈ ಭಾಗದಿಂದ ಸರಬರಾಜು ಆಗುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಇದುವರೆಗೂ ಟ್ಯಾಂಕರ್‌ಗಳಿಂದ ಪ್ರತಿದಿನ ನೀರು ಪೂರೈಸಲಾಗುತ್ತಿತ್ತು. 

ಇನ್ನು ಮುಂದೆ ಅದು ಸಹ ಸ್ಥಗಿತಗೊಳ್ಳಲಿದೆ ಅವರು ಹೇಳಿದ್ದಾರೆ. ಸದ್ಯ ಕುಂದವಾಡ ಕೆರೆಯಲ್ಲಿ 1.5 ಮೀಟರ್‌ ಹಾಗೂ ಟಿ.ವಿ.ಸ್ಟೇಷನ್‌ ಕೆರೆಯಲ್ಲಿ ಕೇವಲ 2 ಮೀಟರ್‌ ನೀರು ಮಾತ್ರ ಇದ್ದು, ಈ ನೀರನ್ನು ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಬಳಕೆಗೆ ಸೂಚಿಸಲಾಗಿದೆ. ಈಗಾಗಲೇ ನಗರದಲ್ಲಿ 41 ವಾರ್ಡ್‌ಗಳಲ್ಲಿ 571 ಸಬ್‌ಮರ್ಸಿಬಲ್‌ ಮೋಟರ್‌ ಅಳವಡಿಸಿದ್ದು, ಬೋರ್‌ವೆರ್‌ಗಳಿಂದ ನೀರು ಕೊಡಬೇಕಿದೆ. 

ಚಾಲನೆಯಲ್ಲಿರುವ 395 ಹ್ಯಾಂಡ್‌ಪಂಪ್‌ ಬೋರ್‌ವೆಲ್‌ ಗಳ ನೀರು ವ್ಯವಸ್ಥೆಗೆ ಸೂಚನೆ ನೀಡಿದ್ದು, ನಾಗರೀಕರು ನೀರನ್ನು ಮಿತವಾಗಿ ಬಳಸಬೇಕೆಂದು ಶಾಸಕರು ಕೋರಿದ್ದಾರೆ. ಖಾಸಗಿ ಬೋರ್‌ವೆಲ್‌ಗ‌ಳ ಮಾಲೀಕರು ತಮ್ಮ ಮನೆ ಅಥವಾ ಅಂಗಡಿ ಸುತ್ತಮುತ್ತಲಿನ ನಿವಾಸಿಗಳಿಗೆ ನೀರು ನೀಡಿ ಸಮಸ್ಯೆಯನ್ನು ನೀಗಿಸಲು ಸಹಕರಿಸುವಂತೆ ವಿನಂತಿಸಿಕೊಂಡಿರುವ ಅವರು,

ನೀರಿನ ಸಮಸ್ಯೆಯನ್ನು ಕೆಲವು ಖಾಸಗಿ ಟ್ಯಾಂಕರ್‌ಗಳ ಮಾಲೀಕರು ದುರುಪಯೋಗ ಪಡಿಸಿಕೊಂಡು ಹೆಚ್ಚಿನ ದರ ವಸೂಲು ಮಾಡುವ ಬಗ್ಗೆ ಈಗಾಗಲೇ ಸಾರ್ವಜನಿಕರ ದೂರು ಬಂದಿದೆ. ಇಂತಹ ಬರ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗುವ ಮಂದಿಗೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲೀಸ್‌ ವರಿಷ್ಠಾಧಿಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.  

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.