ಪುತ್ತೂರು: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನೆ
Team Udayavani, Apr 26, 2017, 6:02 PM IST
ಪುತ್ತೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾ| ಸಮಿತಿ ವತಿಯಿಂದ ಶಿಕ್ಷಕರ ವಿವಿಧ ಬೇಡಿಕೆ ಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಮಂಗಳವಾರ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
7ನೇ ವೇತನ ಆಯೋಗದ ಶಿಫಾ ರಸ್ಸುಗಳನ್ನು ಎಲ್ಲ ರಾಜ್ಯಗಳಲ್ಲಿ ತತ್‌ಕ್ಷಣ ಜಾರಿಗೊಳಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನೇ ಜಾರಿ ಗೊಳಿ ಸಬೇಕು. ಪ್ರಾಥಮಿಕ ಶಿಕ್ಷಣದ ಅಭಿ ವೃದ್ಧಿಗಾಗಿ ಪ್ರಾಥಮಿಕ ಶಿಕ್ಷಣ ಮಂಡಳಿ ಸ್ಥಾಪಿಸಬೇಕು. ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ಆರಂಭಿಸಬೇಕು. ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಕನಿಷ್ಠ ವರ್ಷಕ್ಕೆ ಒಬ್ಬ ಶಿಕ್ಷಕರು (ಶಿಕ್ಷಕ/ವಿದ್ಯಾರ್ಥಿ ಅನುಪಾತ 1:30) ಶಾಲೆಗೆ ಒಬ್ಬ ಮುಖ್ಯಶಿಕ್ಷಕರನ್ನು ನಿಯುಕ್ತಿಗೊಳಿಸಬೇಕು ಮೊದಲಾದ ಬೇಡಿಕೆಗಳನ್ನಿಟ್ಟು ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಹಂತಗಳು
ಪ್ರಾ. ಶಾಲಾ ಶಿಕ್ಷಕರ ಸಂಘ ಪುತ್ತೂರು ತಾ| ಸಮಿತಿ ಪ್ರಧಾನ ಕಾರ್ಯದರ್ಶಿ ಎಂ. ಮಾಮಚ್ಚನ್ ಮಾತನಾಡಿ, ಶಿಕ್ಷಕರ ಬೇಡಿಕೆಗಳ ಕುರಿತಂತೆ ಮಾ. 17ರಂದು ರಾಜ್ಯದ ಎಲ್ಲ ಶಿಕ್ಷಕರಿಗೆ ಮನವಿ ನೀಡುವ ಅಭಿಯಾನ ಕೈಗೊಳ್ಳಲಾಗಿತ್ತು. ಮಾ. 31ಕ್ಕೆ ಗಡುವು ನೀಡಲಾಗಿತ್ತಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದೆ ಆ. 5ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿ ಧರಣಿ, ಸೆ. 5ರಂದು ರಾಜ್ಯದೆಲ್ಲೆಡೆ ಧರಣಿ ನಡೆಸಲಿದ್ದೇವೆ. ಅಕ್ಟೋಬರ್‌ನಲ್ಲಿ ದಿಲ್ಲಿ ಯಲ್ಲಿ ಎಲ್ಲ ಸಂಘದವರು ಸೇರಿ ಉಗ್ರ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಮನವಿ ಸಲ್ಲಿಕೆ
ಸಾಂಕೇತಿಕ ಪ್ರತಿಭಟನೆಯ ಬಳಿಕ ಬೇಡಿ ಕೆಗಳ ಈಡೇರಿಕೆಗಾಗಿ ಪ್ರಧಾನ ಮಂತ್ರಿ, ರಾಷ್ಟ್ರಪತಿ, ರಾಜ್ಯದ ಮುಖ್ಯಮಂತ್ರಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್. ಅವರು, ಮನವಿಯನ್ನು ಉನ್ನತ ಅಧಿಕಾರಿಗಳಿಗೆ, ಸಂಬಂಧಿಸಿದವರಿಗೆ ತಲುಪಿಸುವ ಭರವಸೆ ನೀಡಿದರು. ಎಪಿಎಂಸಿ ಚುನಾವಣೆ ಕರ್ತವ್ಯ ಹಾಗೂ ಎಸ್ಸೆಸೆಲ್ಸಿ ಮೌಲ್ಯಮಾಪನದ ಹಿನ್ನೆಲೆಯಲ್ಲಿ ಅಂದಾಜು 30 ಶಿಕ್ಷಕರಷ್ಟೇ ಸಂಘದ ಎಂ. ಮಾಮಚ್ಚನ್ ನೇತೃತ್ವದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.