ದಿಲ್ಲಿ: ಕೇಜ್ರಿವಾಲ್ ಬಿರುಕು
Team Udayavani, Apr 27, 2017, 11:22 AM IST
ಹೊಸದಿಲ್ಲಿ: ಹಳ್ಳಿಯಿಂದ ದಿಲ್ಲಿವರೆಗೆ ಬಿಜೆಪಿಯ ಹೆಜ್ಜೆ ಕಾಣಬೇಕು ಎಂಬ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಸೆಗೆ ಮತ್ತೂಂದು ಗರಿ ಸಿಕ್ಕಿದೆ. ದಿಲ್ಲಿಯ 3 ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಭಾರೀ ಗೆಲುವು ಸಾಧಿಸಿದೆ. ಪ್ರಧಾನಿ ಮೋದಿ ಹೆಸರು ಹೇಳಿಕೊಂಡು ಚುನಾವಣೆಗಿಳಿದಿದ್ದ ಪಕ್ಷಕ್ಕೆ ಮತದಾರ ಜೈ ಎಂದಿದ್ದಾನೆ. ಎರಡು ವರ್ಷಗಳ ಹಿಂದಷ್ಟೇ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಆರ್ಭಟಕ್ಕೆ ತತ್ತರಿಸಿದ್ದ ಬಿಜೆಪಿಗೆ ಈ ಗೆಲುವು ಸಮಾಧಾನ ತಂದಿದೆ. ಹತ್ತು ವರ್ಷಗಳಿಂದ ಮೂರು ಪಾಲಿಕೆಗಳಲ್ಲೂ ಬಿಜೆಪಿಯದ್ದೇ ಪಾರಮ್ಯ. ಆದರೆ ಈ ಬಾರಿ ಆಡಳಿತಾರೂಢ ಆಪ್ ಕಡೆ ಈ ಪಾಲಿಕೆಗಳು ಹೊರಳಬಹುದು ಎಂಬ ಮಾತುಗಳಿದ್ದವು. 2 ವರ್ಷಗಳ ಹಿಂದಿನ ವಿಧಾನಸಭೆ ಚುನಾವಣಾ ಫಲಿತಾಂಶ ಇದಕ್ಕೆ ಪುಷ್ಟಿ ನೀಡಿತ್ತು. ಆದರೆ, ಈ ಮೂರು ಪಾಲಿಕೆಗಳ ಮತದಾರ ಆಪ್ಗೆ ಮಣಿದಿಲ್ಲ. ಬದಲಾಗಿ ಕಳೆದೆರಡು ಬಾರಿ ಅಧಿಕಾರದಲ್ಲಿದ್ದ ಬಿಜೆಪಿಯತ್ತಲೇ ವಾಲಿದ್ದಾನೆ.
ಬಿಜೆಪಿ ಪಾಲಿಗೆ ಈ ಜಯ ಮತ್ತಷ್ಟು ಶಕ್ತಿ ತಂದು ಕೊಟ್ಟಿದೆ. ಆದರೆ ಕೇಜ್ರಿವಾಲ್ಗೆ ಈ ಫಲಿತಾಂಶ ದೊಡ್ಡ ಮಟ್ಟದ ಹೊಡೆತ ನೀಡಿದೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ಮಾಕನ್ ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಸೋಲೊಪ್ಪಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕಾರ್ಯಕರ್ತರೆಲ್ಲರಿಗೂ ಅಭಿನಂದನೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.