ರಾಮ ಮಂದಿರಕ್ಕೆ ಸಿಮೆಂಟ್; ಅಯೋಧ್ಯೆಯತ್ತ ಕೊಪ್ಪಳದ ಮುಸ್ಲಿಂ ಯುವಕ!
Team Udayavani, Apr 27, 2017, 11:40 AM IST
ಕೊಪ್ಪಳ:ದ್ವೇಷ ಭಾವನೆಗೆ ಬೇಸತ್ತ ಮುಸ್ಲಿಂ ಯುವಕನೊಬ್ಬ ಭಾವೈಕ್ಯ ಸಾರಲು ಶ್ರೀರಾಮನ ಜನ್ಮಭೂಮಿ ಅಯೋಧ್ಯೆಗೆ ತೆರಳಲು ಸಿದ್ಧತೆ ನಡೆಸಿದ್ದಾನೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದ ಮುಸ್ಲಿಂ ಯುವಕ ಶಂಶುದ್ದೀನ್ ನದಾಫ್ ಬುಧವಾರ ಕೊಪ್ಪಳ ಗವಿಸಿದ್ದೇಶ್ವರ ಸ್ವಾಮಿಗಳಿಂದ ಆಶೀರ್ವಾದ ಪಡೆದು ಪ್ರಯಾಣ ಆರಂಭಿಸಿದ್ದಾನೆ.
ಮಾನವ ಕುಲ ಒಂದೇ. ಯಾರೂ ಮೇಲಲ್ಲ-ಕೀಳಲ್ಲ. ಜಾತಿ-ಮತ, ಭೇದ ಭಾವವಿಲ್ಲ. ಪ್ರಸ್ತುತ ದಿನದಲ್ಲಿ ಎಲ್ಲೆಡೆ ಹಿಂದೂ-ಮುಸ್ಲಿಂ ಜನರ ನಡುವೆ ಧಾರ್ಮಿಕ ಹಬ್ಬ ಆಚರಣೆ ವೇಳೆ ಯಾರೋ ಒಂದಿಬ್ಬರು ಕಿಡಿಗೇಡಿಗಳು ಮಾಡುವ ಗಲಾಟೆಗೆ ಇಡೀ ವ್ಯವಸ್ಥೆಯೇ ವಿನಾಕಾರಣ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಒಂದೇ ಓಣಿ, ವಠಾರದಲ್ಲಿ ವಾಸ ಮಾಡಿದ್ದರೂ ಒಬ್ಬರನ್ನೊಬ್ಬರು ಮುಖ ನೋಡದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ಸಂಘರ್ಷ ಏಕೆ ಎನ್ನುವ ಚಿಂತನೆಗೆ ಒಳಗಾಗಿ ಶಂಶುದ್ದೀನ್ ಈ ನಿರ್ಧಾರಕ್ಕೆ ಮುಂದಾಗಿದ್ದಾನೆ.
ಇಂದು ಪಯಣ
ಶಂಶುದ್ದೀನ್ ಈಗಾಗಲೇ ಟಿಕೆಟ್ ಬುಕ್ ಮಾಡಿಸಿದ್ದು, ಏ.27ರಂದು ಕೊಪ್ಪಳ ರೈಲ್ವೆ ಮೂಲಕ ಅಯೋಧ್ಯೆಗೆ ತೆರಳಲಿದ್ದು, ಏ.29ರಂದು ಅಯೋಧ್ಯೆ ತಲುಪಿ ಅಲ್ಲಿ ಶ್ರೀರಾಮನ ಜನ್ಮಭೂಮಿ ದರ್ಶನ ಪಡೆದು ಮೇ.1ಕ್ಕೆ ಅಲ್ಲಿಂದ ಕೊಪ್ಪಳಕ್ಕೆ ಮರಳಲಿದ್ದಾನೆ. ಅಯೋಧ್ಯೆ ದೇವಸ್ಥಾನ ಕಟ್ಟಡಕ್ಕಾಗಿ ಒಂದು ಚೀಲ ಸಿಮೆಂಟ್ ಕೊಡುವ ಕುರಿತು ಹರಕೆ ಹೊತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.