ಉಡಾನ್ ಹಾರಾಟಕ್ಕೆ ಮೋದಿ ಚಾಲನೆ:ದಿಲ್ಲಿ-ಶಿಮ್ಲಾ ದರ ಕೇವಲ 2,500 ರೂ.
Team Udayavani, Apr 27, 2017, 12:15 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಶಿಮ್ಲಾ – ಹೊಸದಿಲ್ಲಿ ಪ್ರಯಾಣದ ಪ್ರಪ್ರಥಮ ಉಡಾನ್ ವಿಮಾನ ಹಾರಾಟಕ್ಕೆ ಹಸಿರು ನಿಶಾನೆ ತೋರಿದರು. ಇದರೊಂದಿಗೆ ದಿಲ್ಲಿ – ಶಿಮ್ಲಾ ವಿಮಾನ ಹಾರಾಟವನ್ನು ಪ್ರಯಾಣಿಕರಿನ್ನು ಕೇವಲ 2,500 ರೂ. ವೆಚ್ಚದಲ್ಲಿ ಕೈಗೊಳ್ಳಬಹುದಾಗಿದೆ.
ಪ್ರಾದೇಶಿಕ ವಿಮಾನ ಸಂಪರ್ಕವನ್ನು ಅತ್ಯಂತ ಅಗ್ಗದ ದರದಲ್ಲಿ ಜನಸಾಮಾನ್ಯರಿಗೆ ಕಲ್ಪಿಸಿಸುವ ಕೇಂದ್ರ ಸರಕಾರದ ಉಡಾನ್ ಯೋಜನೆಯ ಉದ್ಘಾಟನೆಯ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ರಾಜ್ಯಪಾಲ ಆಚಾರ್ಯ ದೇವವ್ರತ, ಮುಖ್ಯಮಂತ್ರಿ ವೀರಭದ್ರ ಸಿಂಗ್, ಕೇಂದ್ರ ಸಚಿವರಾದ ಪಿ ಅಶೋಕ್ ಗಜಪತಿ ಆಜು, ಜಯಂತ್ ಸಿನ್ಹಾ ಮತ್ತು ಜೆ ಪಿ ನಡ್ಡಾ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕಡಪಾ – ಹೈದರಾಬಾದ್ ಮತ್ತು ನಾಂದೇಡ್ – ಹೈದರಾಬಾದ್ ಉಡಾನ್ ಉದ್ಘಾಟನಾ ಹಾರಾಟಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು.
ಮಾರುಕಟ್ಟೆ ಆಧಾರಿತ ವ್ಯವಸ್ಥೆಯ ಮೂಲಕ ಪ್ರಾದೇಶಿಕ ವಿಮಾನ ಯಾನ ಸಂಪರ್ಕವನ್ನು ಕಲ್ಪಿಸುವ ಜಾಗತಿಕ ಯೋಜನೆಯಾಗಿರುವ ಉಡಾನ್ ಈ ಬಗೆಯ ಪ್ರಪ್ರಥಮ ಯೋಜನೆಯಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.