ಬಿಜೆಪಿ ಸಚ್ಚಿದಾನಂದ ಶೆಟ್ಟಿಗೆ ಅತ್ಯುತ್ತಮ ಸ್ವಯಂ ಸೇವಕ ಪುರಸ್ಕಾರ


Team Udayavani, Apr 27, 2017, 3:40 PM IST

25-Mum02.jpg

ಮುಂಬಯಿ: ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಹಾಗೂ ದಿಲ್ಲಿಯ ಬಿಬಿಪಿಐ ಸಹಯೋಗದೊಂದಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಭಾರತೀಯ ಜನೌಷಧ ಪರಿಯೋಜನೆಯ ಮಾಹಿತಿ ಕಾರ್ಯಾಗಾರ ಹಾಗೂ ಜನೌಷಧ ಕೇಂದ್ರಗಳ ಲೋಕಾರ್ಪಣೆ ಕಾರ್ಯಕ್ರಮವು ಎ. 22ರಂದು ಮಂಗಳೂರಿನ ಕನ್ವೆಷನ್‌ ಸೆಂಟರ್‌ನಲ್ಲಿ ನಡೆಯಿತು.

ಇದೇ ಸಂದರ್ಭದಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಲು ವಿಶೇಷವಾಗಿ ಸಹಕರಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದ ಮುಂಬಯಿ ಉದ್ಯಮಿ, ಯುವ ಬಿಜೆಪಿ ನೇತಾರ, ಸಮಾಜ ಸೇವಕ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿಗುತ್ತು ಅವರನ್ನು ಅತ್ಯುತ್ತಮ ಸ್ವಯಂ ಸೇವಕ ಪುರಸ್ಕಾರವನ್ನಿತ್ತು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್‌ ಕುಮಾರ್‌ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲು ಅವರು  ಗೌರವಿಸಿದರು.

ಸಮಾರಂಭದ ವೇದಿಕೆಯಲ್ಲಿ ಕುಡಿಯುವ ನೀರು ಹಾಗೂ ನೈರ್ಮಲ್ಯ ಖಾತೆ ಕೇಂದ್ರ ಸಚಿವ ರಮೇಶ್‌ ಜಿಗಜಿಣಗಿ, ವಿಧಾನ ಪರಿಷತ್‌ ವಿಪಕ್ಷ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌, ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಪಿಪಿಐ ಮಹಾನಿರ್ದೇಶಕ ರೋಹಿತ್‌ ಮೆಹ್ರಾ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಉಪಾಧ್ಯಕ್ಷ ಯು. ರಾಜೀವ್‌ ಅವರು ಉಪಸ್ಥಿತರಿದ್ದರು.

ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಭಾಸ್ಕರ್‌ ದೇವಸ್ಯ ಸ್ವಾಗತಿಸಿದರು. ಉಪಾಧ್ಯಕ್ಷ ಕೆ. ಟಿ. ಸುವರ್ಣ, ಕೃಷ್ಣ ಕೊಂಪದವು, ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. ಕದ್ರಿ ನವನೀತ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 100 ಜನೌಷಧ ಕೇಂದ್ರಗಳನ್ನು ಆರಂಭಿಸಲು ದಿಲ್ಲಿಯ ಬಿಪಿಪಿಐಯೊಂದಿಗೆ ಮಾತೃಭೂಮಿ ಸೌಹಾರ್ದ ಸಹಕಾರಿ ಸಂಸ್ಥೆ ಒಡಂಬಡಿಕೆ ಮಾಡಿಕೊಂಡಿದೆ.

ಕೇಂದ್ರಗಳು ಈಗಾಗಲೇ ಆರಂಭಗೊಂಡಿವೆ. ಜನೌಷಧ ಕೇಂದ್ರಗಳ ಮೂಲಕ ಎಲ್ಲ ಕಾಯಿಲೆಗಳಿಗೆ ಅವಶ್ಯ ಔಷಧಗಳು ಅತ್ಯಂತ ಅಗ್ಗದ ದರದಲ್ಲಿ ಜನರಿಗೆ ದೊರೆಯುತ್ತವೆ. ರಕ್ತದೊತ್ತಡ, ಕರುಳು ಸಂಬಂಧಿ ರೋಗ, ಆ್ಯಂಟಿ ಬಯೋಟಿಕ್ಸ್‌ ಸೇರಿದಂತೆ 500ಕ್ಕೂ ಹೆಚ್ಚು ಔಷಧಗಳು ಇಲ್ಲಿ ಲಭ್ಯವಿವೆ ಎಂದು ಇದೇ ಸಂದರ್ಭದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ತಿಳಿಸಿದರು.

ಟಾಪ್ ನ್ಯೂಸ್

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.