ಬಿಜೆಪಿ ಬಿಕ್ಕಟ್ಟಿಗೆ ಈಶ್ವರಪ್ಪ, ಸಂತೋಷ್ ಕಾರಣ: ಬಿಎಸ್‌ವೈ ನೇರ ಆರೋಪ
Team Udayavani, Apr 28, 2017, 10:00 AM IST
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉಲ್ಬಣಿಸುತ್ತಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿ ಮೌನ ಮುರಿದಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇದಕ್ಕೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಪಕ್ಷದ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರೇ ಕಾರಣ ಎಂದು ನೇರ ಆರೋಪ ಮಾಡಿದ್ದಾರೆ.
ಈಶ್ವರಪ್ಪನವರ ಈ ತರಹದ ವರ್ತನೆಗೆ ಹಿಂದಿರುವ ಮೆದುಳು ಯಾವುದು ಎಂಬುದನ್ನು ಬಿಜೆಪಿ ಹೈಕಮಾಂಡ್ ನಿರ್ಧರಿಸುತ್ತದೆ ಎನ್ನುವ ಮೂಲಕ ಇದರ ಹಿಂದೆ ರಾಷ್ಟ್ರ ಮಟ್ಟದ ಇನ್ನೂ ಕೆಲವು ನಾಯಕರ ಕೈವಾಡವಿದೆ ಎಂಬುದನ್ನೂ ಪರೋಕ್ಷವಾಗಿ ಹೇಳಿದ್ದಾರೆ. ಪಕ್ಷದಲ್ಲಿ ಗೊಂದಲ ಉಂಟುಮಾಡುವ ಮೂಲಕ ಈಶ್ವರಪ್ಪ ಮತ್ತವರ ಗುಂಪು ಕಾಂಗ್ರೆಸ್‌ಗೆ ಸಹಾಯವಾಗುವಂತೆ ನಡೆದುಕೊಳ್ಳುತ್ತಿದೆ. ಎಲ್ಲವನ್ನೂ ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ ಎಂದಿದ್ದಾರೆ.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ನನ್ನ ಕೆಲಸ ಆರಂಭಿಸುತ್ತೇನೆ ಎನ್ನುವ ಮೂಲಕ ತಮಗೆ ಸೆಡ್ಡು ಹೊಡೆದಿರುವ ಮುಖಂಡರಿಗೆ ತಿರುಗೇಟು ನೀಡುವ ಮುನ್ಸೂಚನೆ ನೀಡಿದ್ದಾರೆ.
ಬ್ರಿಗೇಡ್ ಬೇಡ ಎಂದು ವರಿಷ್ಠರು ಹೇಳಿದ್ದರೂ ಈಶ್ವರಪ್ಪ ಅದನ್ನು ಮುಂದುವರಿಸಿದ್ದು, ಅವರು ಒಂದೋ ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಬೇಕು ಇಲ್ಲವೇ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೆಲಸ ಮಾಡಬೇಕು. ಈಶ್ವರಪ್ಪ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನ ಪಡೆಡಿದ್ದರು ಎಂಬುದನ್ನೂ ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.
ಬಿ.ಎಲ್.ಸಂತೋಷ್ ಅವರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಯಡಿಯೂರಪ್ಪ, ಭಿನ್ನಮತೀಯರ ಗುಂಪಿನಲ್ಲಿರುವ ನಿರ್ಮಲ್ ಕುಮಾರ್ ಸುರಾನಾ ಮತ್ತು ಭಾನುಪ್ರಕಾಶ್ ಅವರು ಸಂತೋಷ್‌ಜಿ ಅವರ ಬಲಗೈ ಭಂಟರು. ಅವರ ಪ್ರೇರಣೆಯಿಂದಲೇ ಇದೆಲ್ಲಾ ಆಗುತ್ತಿದೆ. ಎಲ್ಲವನ್ನೂ ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗುತ್ತಿದ್ದು, ಅವರು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಈಗಿನ ಪಕ್ಷ ವಿರೋಧಿ ಚಟುವಟಿಕೆಗೆ ಸಂತೋಷ್ ಅವರೇ ಕಾರಣ. ಇವತ್ತಿನ ಸಭೆಯ ಕರಡು (ಡ್ರಾಫ್ಟ್) ಸಿದ್ಧವಾಗಿದ್ದೇ ಬಿಜೆಪಿ ಕಚೇರಿಯಲ್ಲಿ. ಸಂತೋಷ್ ಅವರ ಬೆಂಬಲವಿಲ್ಲದೆ ಇದು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಸಂದೇಶ ಆಧರಿಸಿ ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರರರಾವ್ ನೀಡಿದ ಸೂಚನೆ ಮೇಲೆ ಗುರುವಾರದ ಸಭೆಗೆ ಯಾರೂ ಹಾಜರಾಗದಂತೆ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದರು. ಆದರೂ ಕೆಲವರು ಸಭೆಯಲ್ಲಿ ಭಾಗವಹಿಸಿದ್ದು, ಇದನ್ನು ಪಕ್ಷದ ರಾಷ್ಟ್ರೀಯ ನಾಯಕರೂ ಗಮನಿಸಿದ್ದಾರೆ ಎಂದರು.
ಗುರುವಾರದ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್ ಸದಸ್ಯರು. ಅದರಲ್ಲೂ ಕೇವಲ 20 ಮಂದಿ ಮಾತ್ರ ಇದ್ದಾರೆ. ನಂಜನಗೂಡು, ಗುಂಡ್ಲುಪೇಟೆ ಚುನಾವಣೆ ಸೋಲಿಗೆ ಪಕ್ಷ ಸಂಘಟನೆ ಜವಾಬ್ದಾರಿ ಎಂದು ಹೇಳಿದ್ದು, ಆ ಮೂಲಕ ನಿಜವಾದ ಪಕ್ಷ$ವಿರೋಧಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಮ್ಮ ಕೆಲವು ನಾಯಕರ ಬೆಂಬಲವಿರುವುದು ವಿಷಾದನೀಯ ಎಂದು ಹೇಳಿದರು.
ಪಕ್ಷದಲ್ಲಿ ಉದ್ಭವಿಸಿದ್ದ ಅಸಮಾಧಾನ ಬಗೆಹರಿಸುವ ನಿಟ್ಟಿನಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದೇವೆ. ಇನ್ನೂ ಸಮಸ್ಯೆ ಇದೆ ಎಂದಾದರೆ ಈಶ್ವರಪ್ಪ ಅವರು ನಾಲ್ಕು ಗೋಡೆ ಮಧ್ಯೆ ಚರ್ಚಿಸಬಹುದಿತ್ತು. ಆದರೆ, ಅದರ ಬದಲು ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದೇವೆ ಎಂಬುದು ಎಷ್ಟು ಸರಿ. ನಿಜ ಅರ್ಥದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿರುವುದು ಈಶ್ವರಪ್ಪ ಎಂದು ಕಿಡಿ ಕಾರಿದರು.
ಪಕ್ಷದ ಬಿಕ್ಕಟ್ಟು ಬಗೆಹರಿಸಲು ಅಮಿತ್ ಶಾ ನೇಮಿಸಿದ ಸಮಿತಿ ಇನ್ನೂ ಸಭೆ ಸೇರದ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಅಸಮಾಧಾನದ ಬಗ್ಗೆ ಚರ್ಚೆ ಮಾಡಲು ಸಮಯ ಹಿಡಿಯುತ್ತದೆ. ಅಲ್ಲದೆ, ಪಕ್ಷದ ನಾಯಕರ ಜತೆ ಚರ್ಚಿಸದೆ ಸಭೆ ಕರೆಯಲೂ ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.