ದುಬೈನಿಂದ ಬಂದು ವಿಶ್ವನಾಥ್ ಜತೆ ಮಾತಾಡ್ತೀನಿ: ಸಿದ್ದರಾಮಯ್ಯ
Team Udayavani, Apr 28, 2017, 10:24 AM IST
ಮೈಸೂರು: ಪಕ್ಷದಲ್ಲಿ ತಮ್ಮನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡು ಕಾಂಗ್ರೆಸ್ ತೊರೆಯಲು ಮುಂದಾಗಿರುವ ಮಾಜಿ ಸಂಸದ ಎಚ್.ವಿಶ್ವನಾಥ್ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿದ್ದಾರೆ.
ದುಬೈ ಪ್ರವಾಸದಿಂದ ವಾಪಸ್ಸಾದ ಬಳಿಕ ದೂರವಾಣಿಯಲ್ಲಿ ವಿಶ್ವನಾಥ್ ಜತೆಗೆ ಮಾತನಾಡುವುದಾಗಿ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಗೃಹಕಚೇರಿ ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಪ್ರದೇಶ ಕುರುಬರ ಸಂಘದ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ವಿಶ್ವನಾಥ್ ನನ್ನ ಬಗ್ಗೆ ಮಾಧ್ಯಮಗಳಿಗೆ ಸಲ್ಲದ ಹೇಳಿಕೆಗಳನ್ನು ಕೊಡುತ್ತಲೇ ಬಂದಿದ್ದಾರೆ. ನನ್ನ ವಿರುದ್ಧ ಇಷ್ಟೆಲ್ಲಾ ಮಾತನಾಡಿದರೂ ನಾನು ಯಾವತ್ತಾದರೂ ವಿಶ್ವನಾಥ್ ಬಗ್ಗೆ ಮಾತನಾಡಿದ್ದೇನಾ ಎಂದು ನಿಯೋಗದಲ್ಲಿದ್ದ ಮುಖಂಡರನ್ನು ಪ್ರಶ್ನಿಸಿದರು. ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಹಾಗೂ ಶಾಸಕ ವರ್ತೂರ್ ಪ್ರಕಾಶ್ ಈಗಾಗಲೇ ಎಚ್.ವಿಶ್ವನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಆಗ ಮೂರು ವರ್ಷಗಳಿಂದ ಪಕ್ಷದೊಳಗೆ ತಾವು ಅನುಭವಿಸುತ್ತಿರುವ ನೋವು, ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆ ವೇಳೆ ಪಕ್ಷ ತಮ್ಮನ್ನು ನಡೆಸಿಕೊಂಡ ರೀತಿ ಬಗ್ಗೆ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.