ಎ. 30ರಂದು 2ನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ
Team Udayavani, Apr 28, 2017, 2:06 PM IST
ಮಡಿಕೇರಿ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಅನುಷ್ಠಾನದ ಎರಡನೇ ಸುತ್ತಿನ ಪಲ್ಸ್ ಪೋಲಿಯೋ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮವು ಎ. 30ರಂದು ನಡೆಯಲಿದೆ.
ಈ ದಿನದಂದು ನಿಗದಿಪಡಿಸಿದ ಬೂತ್‌ಗಳಲ್ಲಿ ಜಿಲ್ಲೆಯ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕಲಾಗುವುದು. ಇದಕ್ಕಾಗಿ ಜಿಲ್ಲೆಯಲ್ಲಿ 462 ಬೂತ್‌ಗಳು, 1,900 ಲಸಿಕೆ ಹಾಕುವವರು, 90 ಮೇಲ್ವಿಚಾರಕರು, 20 ಟ್ರಾಂಸಿಟ್ ಬೂತ್ ಹಾಗೂ 6 ಸಂಚಾರಿ ತಂಡಗಳನ್ನು ವ್ಯವಸ್ಥೆ ಮಾಡಲಾಗಿದೆ.
ಪೋಲಿಯೊ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ದೃಷ್ಟಿಯಿಂದ ಈ ವರ್ಷದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ 0-5 ವರ್ಷದ ಮಕ್ಕಳಿಗೆ ಪೋಲಿಯೊ ಹನಿಗಳನ್ನು ಹಾಕಿಸಲು ಪೋಷಕರು, ಸಾರ್ವಜನಿಕರು, ಸಂಘ ಸಂಸ್ಥೆಗಳು ಮತ್ತು ಧಾರ್ಮಿಕ ಮುಖಂಡರುಗಳು ಪ್ರೋತ್ಸಾಹ ಮತ್ತು ಉತ್ತೇಜನ ನೀಡಿ ಯಶಸ್ವಿಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.