ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ: ಜೈನ ಕಾಶಿ ಮೂಡಬಿದಿರೆಗೆ 1 ಕೋಟಿ ರೂ.
Team Udayavani, Apr 28, 2017, 2:11 PM IST
ಮೂಡಬಿದಿರೆ: ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾ ಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಜೈನ ಕಾಶಿ ಮೂಡಬಿದಿರೆಯ ಸಾವಿರ ಕಂಬದ ಬಸದಿ ಹಾಗೂ ಜೈನಮಠಕ್ಕೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾಧಿಕಾರಿ ಡಾ| ಜಗದೀಶ್ ಅವರು ವಿವಿಧ ಅಧಿಕಾರಿಗಳೊಂದಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾವಿರ ಕಂಬ ಬಸದಿಯ ಪ್ರಾಂಗಣಕ್ಕೆ ಶಿಲಾಹಾಸು, ಆಧುನಿಕ ತಂತ್ರಜ್ಞಾನದ ವಿದ್ಯುದ್ದೀಪ ಅಳವಡಿಕೆ, ಸೋಲಾರ್ ದೀಪ, ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಜಿಲ್ಲಾಧಿಕಾರಿ ಅವರು ಜೈನಮಠದ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಮತ್ತು ಶಾಸಕ ಅಭಯಚಂದ್ರ ಜತೆ ಚರ್ಚಿಸಿದರು. ಶೌಚಾಲಯ ಮತ್ತು ವಾಹನ ನಿಲುಗಡೆಗೆ ಸ್ಥಳ ನೀಡುವುದಾಗಿ ಸ್ವಾಮೀಜಿ ತಿಳಿಸಿದರು.
15 ದಿನಗಳೊಳಗೆ ತನಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈ ಎಲ್ಲ ಮೂಲ ಸೌಕರ್ಯಗಳಿಗೆ ಸರಕಾರದಿಂದ 1 ಕೋಟಿ ರೂ. ವೆಚ್ಚದ ಅನುದಾನ ಬಿಡುಗಡೆಗೆ ಪ್ರಯತ್ನಿಸುವುದಾಗಿ ಅವರು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.