ಗಿರಿಜನರ ನಿರ್ಲಕ್ಷ್ಯ: ಐಟಿಡಿಪಿ ಅಧಿಕಾರಿಯ ಅಮಾನತಿಗೆ ಆಗ್ರಹ
Team Udayavani, Apr 28, 2017, 2:13 PM IST
ಮಡಿಕೇರಿ: ಜಿಲ್ಲೆಯ ವಿವಿಧ ಹಾಡಿಗಳಲ್ಲಿ ನೆಲೆಸಿರುವ ಗಿರಿಜನರಿಗೆ ಅರಣ್ಯ ಹಕ್ಕು ಕಾಯ್ದೆಯನ್ವಯ ಜಾಗಕ್ಕೆ ಹಕ್ಕುಪತ್ರ ಮತ್ತು ಮೂಲಭೂತ ಸೌಲಭ್ಯಗಳನ್ನು ನೀಡದೆ ಐಟಿಡಿಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿಗಳ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಜೆ.ಕೆ. ಪ್ರಕಾಶ್ ಆರೋಪಿಸಿದ್ದಾರೆ. ವಾರದ ಒಳಗಾಗಿ ಅಧಿಕಾರಿಯನ್ನು ವರ್ಗಾವಣೆ ಮಾಡದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಿರಿಜನರ ಸಂಕಷ್ಟಗಳ ಬಗ್ಗೆ ಐಟಿಡಿಪಿ ಅಧಿಕಾರಿ ಗಮನ ಹರಿಸುತ್ತಿಲ್ಲ. ಸರಕಾರದಿಂದ ಗಿರಿಜನರ ಅಭ್ಯುದಯಕ್ಕೆ ಪೂರಕವಾಗಿ ಬರುವ ಅನುದಾನದ ಸದ್ಬಳಕೆ ಮಾಡುತ್ತಿಲ್ಲವೆಂದು ಆರೋಪಿಸಿದರು.ಬಾಳೆಗುಂಡಿ ಹಾಡಿಯ 150 ಗಿರಿಜನ ಕುಟುಂಬಗಳಿಗೆ ಹಕ್ಕುಪತ್ರವನ್ನು ಒದಗಿಸ ಲಾಗಿದ್ದು, ಆ ಜಾಗ ತಮಗೆ ಸೇರಿದ್ದೆಂದು ದೇವರ ಬನ ಟ್ರಸ್ಟ್ ನ್ಯಾಯಾಲಯದ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ ಹಾಡಿಯಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕಾರ್ಯ ಗಳಾವುವು ನಡೆಯುತ್ತಿಲ್ಲ. ಸಮಸ್ಯೆಯನ್ನು ಬಗೆಹರಿಸುವಲ್ಲಿ ಐಟಿಡಿಪಿ ಇಲಾಖೆ ಹೆಚ್ಚಿನ ಆಸಕ್ತಿ ತೋರುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಯಡವನಾಡು ಹಾಡಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳು ಅಲ್ಲಿನ 21 ಗಿರಿಜನ ಕುಟುಂಬಗಳಿಗೆ ಸಂಬಂಧಿಸಿದಂತೆ ತಲಾ 3.80 ಎಕರೆ ಜಾಗದಂತೆ ಜಂಟಿ ಸರ್ವೇ ಕಾರ್ಯವನ್ನು ನಡೆಸಿದ್ದರೂ ಇಲ್ಲಿಯವರೆಗೆ ಅಲ್ಲಿನ ನಿವಾಸಿಗಳ ಅರ್ಜಿಗಳನ್ನು ಇತ್ಯರ್ಥಪಡಿಸಿಲ್ಲ. ಈ ವಿಷಯಗಳ ಬಗ್ಗೆ ಐಟಿಡಿಪಿ ಅಧಿಕಾರಿಯನ್ನು ಸಂಪರ್ಕಿಸಿದಾಗ ನ್ಯಾಯಾಲಯಕ್ಕೆ ಹೋಗುವಂತೆ ಹೇಳುತ್ತಾರೆ. ಬಡವರ್ಗದ ಗಿರಿಜನರು ನ್ಯಾಯಾಲಯದ ಮೊರೆ ಹೊಕ್ಕು ನ್ಯಾಯ ಪಡೆದುಕೊಳ್ಳುವಷ್ಟು ಶಿಕ್ಷಣ ಮತ್ತು ಜ್ಞಾನವನ್ನು ಹೊಂದಿದ್ದಾರೆಯೇ ಎಂದು ಜೆ.ಕೆ. ಪ್ರಕಾಶ್ ಪ್ರಶ್ನಿಸಿದರು.
ಹಿತ್ಲುಮನೆ ಹಾಡಿಯಲ್ಲಿ ಏಳು ಕುಟುಂಬಗಳಿಗೆ ಸಂಬಂಧಿಸಿದಂತೆ 7 ಏಕರೆ ಭೂಮಿ ಸರ್ವೇ ಕಾರ್ಯ ನಡೆದಿದೆ. ಆದರೆ, ಪ್ರಸ್ತುತ ಪ್ರತಿ ಕುಟುಂಬಕ್ಕೆ 3 ಸೆಂಟ್ ಜಾಗದ ಹಕ್ಕು ಪತ್ರವನ್ನಷ್ಟೆ ನೀಡಲು ಸಿದ್ಧತೆ ನಡೆಸಲಾಗಿದೆ ಎಂದ ಅವರು, ಐಟಿಡಿಪಿ ಇಲಾಖಾ ಅಧಿಕಾರಿಗಳು ಇಂತಹ ಪ್ರಕರಣಗಳಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದು ಟೀಕಿಸಿದರು.
ವೇದಿಕೆಯ ಸಂಚಾಲಕ ಸುಬ್ರಮಣಿ ಮಾತನಾಡಿ, ಹೇರೂರು ಹಾಡಿಯಲ್ಲಿ 93 ಗಿರಿಜನ ಕುಟುಂಬಗಳಿದ್ದು, ಕಳೆೆದ ಒಂದು ದಶಕದ ಅವಧಿಯಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಏಳು ಬಾರಿ ಜಾಗದ ಜಂಟಿ ಸರ್ವೇ ಕಾರ್ಯ ನಡೆದಿದೆ. ಆದರೆ ಇಲ್ಲಿಯವರೆಗೆ ಜಾಗದ ಹಕ್ಕುಪತ್ರವನ್ನು ನೀಡಿಲ್ಲವೆಂದು ಆರೋಪಿಸಿದರು. ಮುಂಬರುವ ದಿನಗಳಲ್ಲಿ ನಾವಿರುವ ಜಾಗದಲ್ಲಿ ಮನೆಗಳನ್ನು ನಾವೇ ನಿರ್ಮಿಸಿಕೊಳ್ಳುತ್ತೇವೆ. ಇದಕ್ಕೆ ಅಡ್ಡಿಪಡಿಸುವ ಪ್ರಯತ್ನ ನಡೆದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು ಕರ್ತವ್ಯ ಲೋಪ ಎಸಗುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ರವಿ, ಸದಸ್ಯರುಗಳಾದ ಜೆ.ಎಚ್. ರವಿ, ಗಣೇಶ್ ಹಾಗೂ ರಮೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.