ತಾಲೂಕು ಕೇಂದ್ರದಲ್ಲಿ ಡಯಾಲಿಸಿಸ್‌ ಕೇಂದ್ರ 


Team Udayavani, Apr 28, 2017, 4:53 PM IST

23-Kalavihara.5.jpg

ಗೌರಿಬಿದನೂರು: ಮುಂದಿನ ಎರಡು ತಿಂಗಳ ಒಳಗೆ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಕೇಂದ್ರಗಳನ್ನು ಆರಂಭಿಸಲಾಗುವುದೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್‌.ರಮೇಶ್‌ ಕುಮಾರ್‌ ತಿಳಿಸಿದರು.

ತಾಲೂಕಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 24×7 ಮಾದರಿ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆ ಮತ್ತು ಆ್ಯಂಬುಲೆನ್ಸ್‌ ಹಾಗೂ ವೈದ್ಯಕೀಯ ಉಪಕರಣಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ತಜ್ಞ ಡಾ.ಎಚ್‌.ನರಸಿಂಹಯ್ಯನವರ ಹುಟ್ಟೂರಾದ ಹೊಸೂರಿನಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಿಸುತ್ತಿರುವ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೈಟೆಕ್‌ ಸ್ಪರ್ಶ ನೀಡುವ ಮೂಲಕ ಅನೇಕ ಸವಲತ್ತುಗಳನ್ನು ಮಂಜೂರು ಮಾಡಲಾಗುತ್ತಿದೆ. ನಾಗರಿಕರು ಇದರ ಸದುಪಯೋಗ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಕರೆ ನೀಡಿದರು.

ಆರೋಗ್ಯ ಕೇಂದ್ರದ ದುರಸ್ತಿಗೆ ಹಣ: ಹೊಸೂರು ಜಿಪಂ ಕ್ಷೇತ್ರದ ಸದಸ್ಯ ಮಂಜುನಾಥ್‌ ಸಲ್ಲಿಸಿರುವ ಮನವಿ ಮೇರೆಗೆ ಹೊಸೂರು ಹೋಬಳಿಗೆ ಸೇರಿದ ರಮಾಪುರ ಗ್ರಾಮಗಳ ಶಿಥಿಲಗೊಂಡಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ದುರಸ್ತಿಗಾಗಿ ಹಣ ಮಂಜೂರು ಮಾಡಲಾಗುವುದು. ಗೆದೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತರಿದಾಳು ಗ್ರಾಮಕ್ಕೆ ವಿಸ್ತರಣಾ ಆಸ್ಪತ್ರೆ ನಿರ್ಮಿಸಲು ಮತ್ತು ಬಚ್ಚರೆಡ್ಡಿ ಹಳ್ಳಿ ಗ್ರಾಮಕ್ಕೆ ವಿಸ್ತರಣಾ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ಮಾಣ ಮಾಡುವುದಾಗಿ ಆಶ್ವಾಸನೆ ನೀಡಿದರು.

ಜೆನೆರಿಕ್‌ ಔಷಧ ಮಳಿಗೆ: ರಾಜ್ಯದ ಗಡಿ ಭಾಗದಲ್ಲಿರುವ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಿಗೆ  ಆರೋಗ್ಯ ಇಲಾಖೆಯಿಂದ ಹಲವಾರು ಯೋಜನೆಗಳಡಿ ಬಹಳಷ್ಟು ಸೌಲತ್ತುಗಳನ್ನು  ಬಿಡುಗಡೆ ಮಾಡಲು ಸರ್ಕಾರ ಸಿದ್ಧವಾಗಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇಂದ್ರ ಸರ್ಕಾರದ ಸಹಕಾರದಿಂದ ಬಡ ರೋಗಿಗಳ ಅನುಕೂಲಕ್ಕಾಗಿ ಜೆನೆರಿಕ್‌ ಔಷಧ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಖಾಸಗಿ ಔಷಧ ಅಂಗಡಿಗಳಲ್ಲಿ ದುಬಾರಿ ಬೆಲೆ ತೆತ್ತು ಔಷಧ ಕೊಳ್ಳುವುದಕ್ಕೆ ಕಡಿವಾಣ ಹಾಕಿದಂತಾಗುತ್ತದೆ ಎಂದರು.

ಆ್ಯಂಬುಲೆನ್ಸ್‌ ಸೌಲಭ್ಯ: ಬಡ ರೋಗಿಗಳ ಜೀವ ಸಂರಕ್ಷಿಸುವ ಯೋಜನೆಯಡಿ ಪ್ರಾಥಮಿಕ ಆರೊಗ್ಯ ಕೇಂದ್ರಗಳಿಗೆ ಆ್ಯಂಬುಲೆನ್ಸ್‌ ವಾಹನ ಮುಂದಿನ ದಿನಗಳಲ್ಲಿ ನೀಡುವುದಾಗಿ ತಿಳಿಸಿದ ಸಚಿವರು, ಪ್ರತಿ 15 ಕಿ.ಮೀ. ದೂರದ ವರೆಗೆ ಇದರ ಸೇವೆ ದೊರೆಯುವಂತೆ ಮಾಡಲಾಗುವುದು. ಹೊಸೂರಿಗೆ ಸಮುದಾಯ ಆಸ್ಪತ್ರೆಯ ಅಂಗವಾಗಿ 10 ಹಾಸಿಗೆಗಳ ತಾಯಿ-ಮಗುವಿನ ಆಸ್ಪತ್ರೆಯನ್ನು ಇನ್ನು 1 ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ವಿಧಾನಸಭೆ ಉಪಾಧ್ಯಕ್ಷ ಎನ್‌.ಎಚ್‌.ಶಿವಶಂಕರರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಪಂ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ, ಉಪಾದ್ಯಕ್ಷೆ  ನಿರ್ಮಲಾ, ಜಿಪಂ ಸಿಇಒ ಮಂಜುನಾಥ್‌, ಜಿಪಂ ಸದಸ್ಯರಾದ ಡಿ.ನರಸಿಂಹಮೂರ್ತಿ, ಭವ್ಯಾ, ಅರುಂಧತಿ, ಪಿ.ಎನ್‌ ಪ್ರಕಾಶ್‌, ಪ್ರಮೀಳಾ, ತಾಪಂ ಅಧ್ಯಕ್ಷ ನಾರಪ್ಪ ರೆಡ್ಡಿ,  ತಾಪಂ ಸದಸ್ಯ ಲೋಕೇಶ್‌, ಹೊಸೂರು ಗ್ರಾಪಂ ಅಧ್ಯಕ್ಷ ಅಶ್ವತ್ಥನಾರಾಯಣ ರಾವ್‌,ಎಪಿಎಂಸಿ ಅಧ್ಯಕ್ಷ  ಬೊಮ್ಮಣ್ಣ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮರಳೂರು ಹನುಮಂತರೆಡ್ಡಿ, ಪುರಸಭೆ ಅಧ್ಯಕ್ಷ ಕಲೀಂವುಲ್ಲಾ, ಡಿಎಚ್‌ಒ ಡಾ.ರವಿಶಂಕರ್‌, ಡಾ.ಎನ್‌.ಅರುಂಧತಿ ಮುಂತಾದವರಿದ್ದರು.

ಟಾಪ್ ನ್ಯೂಸ್

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Naa Ninna Bidalare Movie Review

Naa Ninna Bidalare Review: ಬಿಟ್ಟೆನೆಂದರೂ ಬಿಡದೀ ಮಾಯೆ!

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

sanjeev-ramya

Ramya: ಗೆಳೆಯನ ಜತೆಗಿನ ರಮ್ಯಾ ಫೋಟೋ ವೈರಲ್‌

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.