ಹುಬ್ಬಳ್ಳಿ-ದಾವಣಗೆರೆ ಇಎಸ್‌ಐ ಆಸ್ಪತ್ರೆ ಮೇಲ್ದರ್ಜೆಗೆ


Team Udayavani, Apr 29, 2017, 12:41 PM IST

hub1.jpg

ಹುಬ್ಬಳ್ಳಿ: ಹುಬ್ಬಳ್ಳಿ ಹಾಗೂ ದಾವಣಗೆರೆಯ ಇಎಸ್‌ಐ ಆಸ್ಪತ್ರೆಗಳನ್ನು 100 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ಆಸ್ಪತ್ರೆಗಳಾಗಿ ಅಭಿವೃದ್ಧಿಪಡಿಸಲಾಗುವುದು. ಸದ್ಯ 50 ಹಾಸಿಗೆಗಳ ಆಸ್ಪತ್ರೆಗಳನ್ನು ಆರಂಭಿಸಲಾಗಿದ್ದು, ಇನ್ನು 18 ತಿಂಗಳುಗಳಲ್ಲಿ 100 ಬೆಡ್‌ಗಳ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಬಂಡಾರು ದತ್ತಾತ್ರೇಯ ಹೇಳಿದರು. 

ನೌಕರರ ರಾಜ್ಯ ವಿಮಾ ನಿಗಮದ ವತಿಯಿಂದ ಹುಬ್ಬಳ್ಳಿ ಹಾಗೂ ದಾವಣಗೆರೆಯ ಅತ್ಯಾಧುನಿಕ 50 ಹಾಸಿಗೆಗಳ ಆಸ್ಪತ್ರೆಗಳನ್ನು ಲೋಕಾರ್ಪಣೆ ಮಾಡಿ ಸಚಿವರು ಮಾತನಾಡಿದರು. ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿರುವುದನ್ನು ಪರಿಗಣಿಸಿ ಆಸ್ಪತ್ರೆಗಳಲ್ಲಿ ಬೆಡ್‌ಗಳ ಸಂಖ್ಯೆ ಹೆಚ್ಚಿಸುವುದು ಅಗತ್ಯವಿದೆ.

ಹುಬ್ಬಳ್ಳಿಯಲ್ಲಿ 33.17 ಕೋಟಿ ವೆಚ್ಚದಲ್ಲಿ 50 ಬೆಡ್‌ ಆಸ್ಪತ್ರೆ ನಿರ್ಮಿಸಲಾಗಿದ್ದರೆ, ದಾವಣಗೆರೆಯಲ್ಲಿ 31.98 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ ಎಂದು ವಿವರಿಸಿದರು. ಇಎಸ್‌ಐ ಆಸ್ಪತ್ರೆಗಳಲ್ಲಿ ಸೂಪರ್‌ ಸ್ಪೆಷಾಲಿಟಿ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗುವುದು. ಸಾರ್ವಜನಿಕ- ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ (ಪಿಪಿಪಿ ಮಾಡೆಲ್‌) ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು.

ಆಸ್ಪತ್ರೆಗಳಲ್ಲಿ ನೂತನ ತಂತ್ರಜ್ಞಾನದ ಚಿಕಿತ್ಸಾ ಸೌಕರ್ಯಗಳು, ಡಯಾಲಿಸಿಸ್‌ ಮತ್ತಿತರ ಚಿಕಿತ್ಸೆಗಳನ್ನು ಒದಗಿಸಲಾಗುವುದು ಎಂದರು. ಇಎಸ್‌ಐ ಆಸ್ಪತ್ರೆಗಳನ್ನು ಹಸ್ತಾಂತರಿಸಿದರೆ ಅವುಗಳ ವ್ಯವಸ್ಥಿತ ನಿರ್ವಹಣೆಗೆ ಕೇಂದ್ರ ಸರ್ಕಾರ ಸಿದ್ಧವಿದೆ. ಇಎಸ್‌ಐ ಆಸ್ಪತ್ರೆಗಳಿಗಾಗಿ ನೀಡುವ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಕೆಯಾಗುವುದನ್ನು ತಡೆದು, ಕಾರ್ಮಿಕರ ಒಳಿತಿಗಾಗಿ ಬಳಸಬೇಕು.

ಇಎಸ್‌ಐ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದೆಡೆ ಹೊರಗುತ್ತಿಗೆ ಮೂಲಕ ತಜ್ಞರ ಸೇವೆ ಬಳಸಿಕೊಳ್ಳಲು ಸೂಚಿಸಲಾಗಿದೆ. ಆಸ್ಪತ್ರೆಗಳಲ್ಲಿ ಔಷಧಗಳ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.  

ಹುಬ್ಬಳ್ಳಿಯಲ್ಲಿ ವಲಯ ಕಚೇರಿ: ಹುಬ್ಬಳ್ಳಿಯಲ್ಲಿ ಇಎಸ್‌ಐ ವಲಯ ಕಚೇರಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇಲ್ಲಿ ಉಪ ವಲಯ ಕಚೇರಿಯಿದ್ದು,  ಇಲ್ಲಿನ ಕಾರ್ಮಿಕರು ವಲಯ ಕಚೇರಿಗಾಗಿ 400 ಕಿ.ಮೀ. ದೂರದ ಗುಲ್ಬರ್ಗಕ್ಕೆ ಹೋಗಬೇಕಿದೆ. ಈ ಭಾಗದಲ್ಲಿ 6,000 ಕಾರ್ಖಾನೆಗಳಿದ್ದು, 6 ಲಕ್ಷ ಕಾರ್ಮಿಕರಿದ್ದಾರೆ. 

ಉಪ ವಲಯ ಕಚೇರಿ 5 ಜಿಲ್ಲೆಗಳ ವ್ಯಾಪ್ತಿ ಹೊಂದಿದ್ದು, ನೌಕರರಿಗೆ ಅನುಕೂಲತೆ ಕಲ್ಪಿಸಲು ಪೂರಕ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.  ರಾಜ್ಯದಲ್ಲಿ 81,285 ಕೈಗಾರಿಕಾ ಘಟಕಗಳಿದ್ದು, ಇಎಸ್‌ಐ ಸೌಲಭ್ಯ ಪಡೆಯುವ 23 ಲಕ್ಷ ಕಾರ್ಮಿಕರಿದ್ದಾರೆ. ದೇಶದಲ್ಲಿ ಸುಮಾರು 35 ಕೋಟಿ ಅಸಂಘಟಿತ ಕಾರ್ಮಿಕರಿದ್ದು, ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕರ ಒಳಿತಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ.

ಕಟ್ಟಡ ಕಾರ್ಮಿಕರಿಗೆ ಇಎಸ್‌ಐ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ನೀಡಲಾಗುತ್ತಿದೆ. ಆಶಾ – ಅಂಗನವಾಡಿ ಕಾರ್ಯಕರ್ತೆಯರು, ಮಧ್ಯಾಹ್ನ ಬಿಸಿಯೂಟ ಕಾರ್ಯಕರ್ತೆಯರನ್ನು ಇಎಸ್‌ಐ ವ್ಯಾಪ್ತಿಗೆ ತರಲು ಪ್ರಯತ್ನಿಸಲಾಗುವುದು. ನೂತನ ಕಾರ್ಮಿಕರ ನೋಂದಣಿ ಕಾರ್ಯ ನಡೆದಿದೆ ಎಂದು ಹೇಳಿದರು. 

ಬೀಡಿ ಕಾರ್ಮಿಕರಿಗೆ ಮನೆ: ಬೀಡಿ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ 40 ಸಾವಿರ ರೂ. ನೆರವು ನೀಡಲಾಗುತ್ತಿತ್ತು, ಈಗ ಈ ಪ್ರಮಾಣವನ್ನು 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅವಳಿ ನಗರದಲ್ಲಿ ಸಾಕಷ್ಟು ಬೀಡಿ ಕಾರ್ಮಿಕರು ವಸತಿ ರಹಿತರಿದ್ದು, ಸೂರು ಕಲ್ಪಿಸುವಂತೆ ಮನವಿ ಮಾಡಲಾಗಿದೆ. 

2000 ಜನರ ಪಟ್ಟಿ ನೀಡಿದರೆ ಅವರಿಗೆ ಮನೆ ನಿರ್ಮಿಸಲು ಅಗತ್ಯ ಅನುದಾನ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಸ್ವತ್ಛ ಭಾರತ ಅಭಿಯಾನದ ದಿಸೆಯಲ್ಲಿ ಎಲ್ಲ ಇಎಸ್‌ಐ ಆಸ್ಪತ್ರೆಗಳಲ್ಲಿ ಸ್ವತ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ. ಪ್ರತಿ ದಿನ ಹಾಸಿಗೆಗಳ ಬೆಡ್‌ ಶೀಟ್‌ ಬದಲಿಸುವಂತೆ ಆದೇಶಿಸಿದ್ದು, ಸ್ವತ್ಛತೆಗೆ ಆದ್ಯತೆ ನೀಡದ ಆಸ್ಪತ್ರೆ ಕುರಿತು ಸಾಮಾಜಿಕ ಜಾಲತಾಣದ ಮೂಲಕ ನನ್ನ ಗಮನಕ್ಕೆ ತಂದರೆ ಕೂಡಲೇ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಚಿವ ವಿನಯ ಕುಲಕರ್ಣಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ, ಸಂಸದ ಪ್ರಹ್ಲಾದ ಜೋಶಿ, ಶಾಸಕ ಪ್ರಸಾದ ಅಬ್ಬಯ್ಯ, ಮಹಾಪೌರ ಡಿ.ಕೆ.ಚವ್ಹಾಣ, ಉಪಮಹಾಪೌರ ಲಕ್ಷ್ಮಿ ಬಿಜವಾಡ, ಎ.ಕೆ.ಸಿನ್ಹಾ, ಅರುಣಕುಮಾರ ಗುಪ್ತಾ, ಜೆ.ಎಚ್‌. ನಾಯಕ ಮೊದಲಾದವರಿದ್ದರು.  

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಸಮುದ್ರದ ಮಧ್ಯೆ ಮೀನುಗಾರ ನಾಪತ್ತೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.