ಕೇಂದ್ರಕ್ಕೆ ಇಎಸ್‌ಐ ಆಸ್ಪತ್ರೆ ಹಸ್ತಾಂತರಿಸಲು ಕ್ರಮ
Team Udayavani, Apr 29, 2017, 12:43 PM IST
ಹುಬ್ಬಳ್ಳಿ: ಇಎಸ್‌ಐ ಆಸ್ಪತ್ರೆಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವ ಕುರಿತು ಸಚಿವರೊಂದಿಗೆ ಚರ್ಚಿಸಿ ಇನ್ನೊಂದು ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ಅವರು ನಗರದ ಇಎಸ್‌ಐ ಸುಸಜ್ಜಿತ 50 ಹಾಸಿಗೆಗಳ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಇಎಸ್‌ಐ ಆಸ್ಪತ್ರೆ ನಿರ್ವಹಣೆಯನ್ನು ರಾಜ್ಯ ಸರ್ಕಾರ ಮಾಡಬೇಕೋ ಅಥವಾ ಕೇಂದ್ರ ಸರ್ಕಾರ ವಹಿಸಿಕೊಳ್ಳಬೇಕೋ ಎಂಬ ಬಗ್ಗೆ ಗೊಂದಲವಿದೆ. ಕಾರ್ಮಿಕ ಸಚಿವ ಹಾಗೂ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಎಸ್‌ಐ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿಸಲು ನಿರ್ಧರಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
100 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಿ: ಹೆಚ್ಚುತ್ತಿರುವ ಕಾರ್ಮಿಕರ ಸಂಖ್ಯೆಯನ್ನು ಪರಿಗಣಿಸಿ ಇಎಸ್‌ಐ ಆಸ್ಪತ್ರೆಯನ್ನು 100 ಬೆಡ್ ಆಸ್ಪತ್ರೆಯನ್ನಾಗಿ ನಿರ್ಮಿಸಬೇಕು. ಇದಕ್ಕಾಗಿ 50 ಕೋಟಿ ರೂ. ಅನುದಾನ ನೀಡಬೇಕು. 7 ವರ್ಷಗಳ ಹಿಂದೆ ಅಂದಿನ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆ ಸುಸಜ್ಜಿತಗೊಳಿಸಲು 25 ಕೋಟಿ ರೂ. ಅನುದಾನ ನೀಡಿದ್ದರು.
ಆಸ್ಪತ್ರೆಯಲ್ಲಿ ಸಮರ್ಪಕವಾಗಿ ಔಷಧಗಳು ಸಿಗುವಂತಾಗಬೇಕು ಅಲ್ಲದೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಕಾರ್ಮಿಕರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಲಭ್ಯವಾಗಬೇಕು. ಇಎಸ್‌ಐ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರ ಶೇ.93ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಶೇ.7ರಷ್ಟು ರಾಜ್ಯ ಸರ್ಕಾರ ಅನುದಾನ ನೀಡುತ್ತಿದೆ ಎಂದರು.
ಹುಬ್ಬಳ್ಳಿಯಲ್ಲಿ ಇಎಸ್‌ಐ ಉಪವಲಯ ಕಚೇರಿಯಿದ್ದು, ವಲಯ ಕಚೇರಿಗಾಗಿ 400 ಕಿ.ಮೀ. ದೂರದ ಗುಲ್ಬರ್ಗಕ್ಕೆ ಹೋಗಬೇಕಿದೆ. ಆದ್ದರಿಂದ ಹುಬ್ಬಳ್ಳಿಯಲ್ಲಿ ವಲಯ ಕಚೇರಿ ಆರಂಭಿಸಿದರೆ ಈ ಭಾಗದ ಕಾರ್ಮಿಕರಿಗೆ ಅನುಕೂಲವಾಗುತ್ತದೆ ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದರು.
ಕೇಂದ್ರಕ್ಕೆ ಹಸ್ತಾಂತರವಾಗಲಿ: ಇಎಸ್‌ಐ ಆಸ್ಪತ್ರೆಗಳನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದರೆ ನಿರ್ವಹಣೆಗೆ ಹಾಗೂ ಇನ್ನಷ್ಟು ವೈದ್ಯಕೀಯ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ. ರಾಜ್ಯ ಸರ್ಕಾರ ಹಸ್ತಾಂತರಕ್ಕೆ ಸಿದ್ಧವಿದ್ದು, ಈ ದಿಸೆಯಲ್ಲಿ ಕ್ರಮ ಕೈಗೊಳ್ಳಬೇಕು.
ಸಂಘಟಿತ ಕಾರ್ಮಿಕರಿಗೆ ಸೌಲಭ್ಯಗಳು ಸಿಗುತ್ತಿವೆ. ಆದರೆ ಅಸಂಘಟಿತ ಕಾರ್ಮಿಕರಿಗೂ ಸೌಲಭ್ಯಗಳು ಸಿಗುವಂತಾಗಬೇಕು. ಅಸಂಘಟಿತ ಕಾರ್ಮಿಕರ ನೋಂದಣಿಯಾದರೆ ಅವರ ಒಳಿತಿಗಾಗಿ ಸರ್ಕಾರದಲ್ಲಿರುವ ಸಹಸ್ರಾರು ಕೋಟಿ ರೂ. ಹಣ ಸದ್ಬಳಕೆ ಮಾಡಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ, ಮಹಾಪೌರ ಡಿ.ಕೆ.ಚವ್ಹಾಣ, ಉಪಮಹಾಪೌರ ಲಕ್ಷ್ಮಿ ಬಿಜವಾಡ, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.