ಪ್ರೀತಿ-ವಿಶ್ವಾಸದಿಂದ ಜೀವನ ಸಾಗಿಸಿ
Team Udayavani, Apr 30, 2017, 12:51 PM IST
ಮಲೇಬೆನ್ನೂರು: ತಂದೆ-ತಾಯಿ, ಅತ್ತೆ-ಮಾವ, ಎಲ್ಲ ಬಂಧು-ಬಾಂಧವರ ಮತ್ತು ಪರಿವಾರದಡಿಯಾಗಿ ಜೀವನ ಸಾಗಿಸಿದಾಗ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ ಎಂದು ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ಪಟ್ಟಣದ ನಂದಿಗುಡಿ ರಸ್ತೆಯಲ್ಲಿರುವ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ ಶ್ರೀ ಬಸವಜಯಂತಿ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ 12ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಅವರು ಮಾತನಾಡಿದರು.
ವಿರೋಧ, ವಾದ ಮತ್ತು ಹಗೆತನ ದೂರಮಾಡಿ. ಸಾಮರಸ್ಯ ಬದುಕಿಗೆ ಪ್ರೇಮ, ಪ್ರೀತಿ, ವಿಶ್ವಾಸಗಳನ್ನು ಮೈಗೂಡಿಸಿಕೊಂಡು ಸುಖ ಶಾಂತಿಯಿಂದ ಜೀವನ ಸಾಗಿಸಿ ಎಂದು 21 ಜೋಡಿ ನವ ದಂಪತಿಗಳಿಗೆ ಶುಭ ಹಾರೈಸಿದರು.
ಜಾತಿ, ಮತ, ಪಂಥ ಇವುಗಳ ಬೇಧವಿಲ್ಲದೆ ಐಕ್ಯಮತ್ಯದಿಂದ ಇಂತಹ ಸರಳ ಸಾಮೂಹಿಕ ವಿವಾಹಗಳು ಜರುಗಬೇಕು. ಈ ಕಲ್ಪನೆಯು 12ನೇ ಶತನಮಾನದಲ್ಲೇ ಭಕ್ತ ಭಂಡಾರಿ ಬಸವಣ್ಣನವರ ಪರಿಕಲ್ಪನೆಯಾಗಿತ್ತು ಎಂದರು.
ಅರೆ ಮಾದೇನಹಳ್ಳಿಮಠದ ಶ್ರೀ ಶಿವ ಸುಜ್ಞಾನತೀರ್ಥ ಮಹಾಸ್ವಾಮೀಜಿ ಮಾತನಾಡಿ, ಜಗಜ್ಯೋತಿ ಬಸವೇಶ್ವರರು ಮನುಕುಲವನ್ನು ಒಂದೇ ವೇದಿಕೆಯಲ್ಲಿ ಕಾಣಬೇಕೆಂದುಕೊಂಡಿದ್ದು, ಧಾರ್ಮಿಕ ಏಕತೆ ಸಾರುತ್ತಿರುವ ಇಂತಹ ಕಾಯಕ್ರಮ ಹೆಚ್ಚು ನಡೆಯಬೇಕು ಎಂದರು.
ಶಾಸಕ ಎಚ್.ಎಸ್. ಶಿವಶಂಕರ್, ಕಾಂಗ್ರೆಸ್ ಮುಖಂಡ ಎಸ್. ರಾಮಪ್ಪ, ಎಪಿಎಂಸಿ ಸದಸ್ಯರ ಮಂಜುನಾಥ್ ಪಟೇಲ್, ಮಾಜಿ ಕುಲಪತಿ ದೀಟೂರು ಮಹೇಶ್ವರಪ್ಪ, ಮಾಗನಹಳ್ಳಿ ಹಾಲಪ್ಪ ಮುಂತಾದವರು ಮಾತನಾಡಿದರು.
ಹುಲಿಕಂತಿ ಮಠದ ಶ್ರೀ ಸಿದ್ದಯಸ್ವಾಮಿ, ಮಾಜಿ ಶಾಸಕ ಬಿ.ಪಿ. ಹರೀಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ. ಚಿದಾನಂದಪ್ಪ, ವಿಎಸ್‌ಎಸ್‌ಎನ್ ಅಧ್ಯಕ್ಷ ಕೆ.ಪಿ. ಗಂಗಾಧರ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿಗಳಿ ಆನಂದಪ್ಪ, ಯಕ್ಕನಹಳ್ಳಿ ಬಸವರಾಜಪ್ಪ,
ಭೋವಿಕುಮಾರ್, ಬೆಸ್ಕಾಂ ಇಂಜಿನಿಯರ್ ಶ್ರೀನಿವಾಸ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಿ. ಸುರೇಶ್, ಸದಸ್ಯರಾದ ಯೂಸೂಫ್ ಖಾನ್, ಸುಬ್ಬಿರಾಜಪ್ಪ, ಮುಖಂಡರಾದ ಎಂ. ಮಂಜುನಾಥ್, ಕಣ್ಣಾಳ್ ಪರಶಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.