ಸತ್ಕರ್ಮಗಳಿಂದ ಭಗವಂತನ ಒಲುಮೆ: ಸೋದೆ ಶ್ರೀ
Team Udayavani, May 1, 2017, 2:53 PM IST
ಕಾಪು: ನಾವು ಸತ್ಕರ್ಮಗಳನ್ನು ಮಾಡುವ ಮೂಲಕ ಭಗವಂತನನ್ನು ಒಲಿಸಿಕೊಳ್ಳಬಹುದು. ಭಗವಂತ ನೀಡಿದ ಅವಕಾಶಗಳನ್ನು ಬಳಸಿಕೊಂಡು ಸತ್ಕರ್ಮ ಗಳನ್ನು ಮಾಡುವವನೇ ಆತನ ಅನುಗ್ರಹಕ್ಕೆ ಪಾತ್ರನಾಗಲು ಸಾಧ್ಯ ಎಂದು ಉಡುಪಿ ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಹೇಳಿದರು.
ಇನ್ನಂಜೆ – ಮಂಡೇಡಿಯಲ್ಲಿ ದಾನಿಗಳ ಸಹಕಾರದೊಂದಿಗೆ ಸುಮಾರು 25 ಲ. ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀದೇವಿ ಭಜನ ಮಂದಿರವನ್ನು ಉದ್ಘಾಟಿಸಿ, ಅವರು ಆಶೀರ್ವಚನ ನೀಡಿದರು.
ಶಾಸಕ ವಿನಯ ಕುಮಾರ್ ಸೊರಕೆ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳು ಸಂಸ್ಕಾರ ಮತ್ತು ಸಂಸ್ಕೃತಿ ಅನಾವರಣಗೊಳಿಸುವ ಕೇಂದ್ರಗಳಾಗಿವೆ. ಶ್ರೀ ದೇವಿ ಭಜನ ಮಂಡಳಿ ಇದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸು ವಂತಾಗಲಿ ಎಂದರು.
ಶ್ರೀ ದೇವಿ ಭಜನ ಭಜನ ಮಂಡಳಿಯ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ವಿ.ಜೆ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇನ್ನಂಜೆ ವೇ|ಮೂ| ಶ್ರೀಶ ಭಟ್ಟರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.
ಭಜನ ಮಂಡಳಿ ಗೌರವಾಧ್ಯಕ್ಷ ವಿಶ್ವನಾಥ ಶೆಟ್ಟಿ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಬಂಟರ ಸಂಘದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಸಾಯಿರಾಧಾ ಗ್ರೂಪ್ಸ್‌ನ ಮನೋಹರ ಶೆಟ್ಟಿ, ಉಡುಪಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಮೊಕ್ತೇಸರ ನಾಗೇಶ್ ಹೆಗ್ಡೆ, ಚಂದ್ರಹಾಸ ಗುರುಸ್ವಾಮಿ ಮುಂಬಯಿ, ಸಮಾಜರತ್ನ ಲೀಲಾಧರ ಶೆಟ್ಟಿ ಕಾಪು, ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ತಾ.ಪಂ. ಸದಸ್ಯ ರಾಜೇಶ್ ಶೆಟ್ಟಿ, ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ರೇಖಾ ಅನಿಲ್, ಗುತ್ತಿಗೆದಾರ ಅರುಣ್ ಪ್ರಕಾಶ್ ಶೆಟ್ಟಿ, ಮುಖ್ಯ ಅತಿಥಿಗಳಾಗಿದ್ದರು.
ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಮಂಡೇಡಿ, ಸ್ಥಾಪಕಾಧ್ಯಕ್ಷ ಜಯಕರ ಶೆಟ್ಟಿ, ಮುಂಬಯಿ ಸಮಿತಿ ಕಾರ್ಯದರ್ಶಿ ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.ಭಜನ ಮಂದಿರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮಂಡೇಡಿ ಸ್ವಾಗತಿಸಿದರು. ನಿರ್ಮಲಾ ಶೆಟ್ಟಿ ಪ್ರಸ್ತಾವನೆಗೈದರು. ಕಾರ್ಯದರ್ಶಿ ಲಕ್ಷ್ಮಣ ಶೆಟ್ಟಿ ಮಂಡೇಡಿ ವಂದಿಸಿದರು. ಕರಂದಾಡಿ ಶಾಲಾ ಮುಖ್ಯ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.