ನ್ಯಾ| ಕರ್ಣನ್‌ ವೈದ್ಯಕೀಯ ಪರೀಕ್ಷೆಗೆ ಸುಪ್ರೀಂ ಕೋರ್ಟ್‌ ಆದೇಶ

Team Udayavani, May 2, 2017, 3:45 AM IST

BIG-1.jpg

ಹೊಸದಿಲ್ಲಿ: ನ್ಯಾಯಮೂರ್ತಿ ಕರ್ಣನ್‌ ಮತ್ತು ಸರ್ವೋಚ್ಚ ನ್ಯಾಯಾಲಯದ ನಡುವಿನ ಸಂಘರ್ಷ ಮತ್ತೂಂದು ಘಟ್ಟ ತಲುಪಿದೆ. ಸುಪ್ರೀಂ ಕೋರ್ಟ್‌ ಜಡ್ಜ್ಗಳ ವಿರುದ್ಧವೇ ಭ್ರಷ್ಟಾಚಾರ ಆರೋಪ ಹೊರಿಸಿ ನ್ಯಾಯಾಂಗ ನಿಂದನೆಗೆ ಗುರಿಯಾ ಗಿರುವ ಕೋಲ್ಕತಾ ಹೈಕೋರ್ಟ್‌ ನ್ಯಾಯಮೂರ್ತಿ ಸಿ. ಎಸ್‌. ಕರ್ಣನ್‌ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಆದೇಶ ನೀಡಿದೆ.

ಕೋಲ್ಕತಾ ಸರಕಾರಿ ಆಸ್ಪತ್ರೆಯಲ್ಲಿ  ವೈದ್ಯರ ಮಂಡಳಿ ರಚಿಸಿ, ನ್ಯಾ| ಕರ್ಣನ್‌ ಅವರು ಮಾನಸಿಕ ವಾಗಿ ಸ್ಥಿರವಾಗಿದ್ದಾರೆಯೇ ಎಂಬ ಬಗ್ಗೆ ಮೇ 4ರಂದು ಪರೀಕ್ಷೆ ನಡೆಸಿ ಮೇ 8ರೊಳಗೆ ವರದಿ ನೀಡಿ ಎಂದು ಪಶ್ಚಿಮ ಬಂಗಾಲ ಪೊಲೀಸ್‌ ಮಹಾನಿರ್ದೇಶಕರಿಗೆ ಸಿಜೆಐ ಜೆ.ಎಸ್‌. ಖೇಹರ್‌ ನೇತೃತ್ವದ 7 ಮಂದಿ ನ್ಯಾಯಮೂರ್ತಿಗಳ ಪೀಠ ಆದೇಶಿಸಿದೆ.

ಸುಪ್ರೀಂ ಆದೇಶ ಹೊರಬೀಳುತ್ತಿದ್ದಂತೆಯೇ ಕೆಂಡಾಮಂಡಲರಾಗಿರುವ ನ್ಯಾ| ಕರ್ಣನ್‌, “ನನ್ನನ್ನೇನಾದರೂ ಪರೀಕ್ಷಿಸಲು ಬಂದರೆ, ಪಶ್ಚಿಮ ಬಂಗಾಲ ಡಿಜಿಪಿಯನ್ನೇ ಅಮಾನತು ಮಾಡಿ ಆದೇಶ ಹೊರಡಿಸುತ್ತೇನೆ’ ಎಂದಿದ್ದಾರೆ. ಜತೆಗೆ ತನ್ನ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿದ ಸುಪ್ರೀಂ ಕೋರ್ಟ್‌ನ 7 ಮಂದಿ ನ್ಯಾಯಮೂರ್ತಿಗಳನ್ನೇ ಮಾನಸಿಕ ತಪಾಸಣೆಗೆ ಒಳಪಡಿಸುವಂತೆ ಡಿಜಿಪಿ ಮತ್ತು ಕೇಂದ್ರ ಸರಕಾರಕ್ಕೆ ಸೂಚಿಸಿ ಹೊಸ ಆದೇಶ ಹೊರಡಿಸಿದ್ದಾರೆ.

ಆದೇಶ ಪರಿಗಣಿಸದಂತೆ ಸೂಚನೆ: ಸೋಮವಾರ ಈ ಕುರಿತ ವಿಚಾರಣೆ ನಡೆಸಿದ ಸಿಜೆಐ ನೇತೃತ್ವದ ಪೀಠ, “ನ್ಯಾ| ಕರ್ಣನ್‌ರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲೇಬೇಕು. ಇದಕ್ಕಾಗಿ ಹೊಸ ವೈದ್ಯಕೀಯ ತಂಡವನ್ನು ರಚಿಸಿ. ಜತೆಗೆ ಅವರ ಪರೀಕ್ಷೆ ವೇಳೆ ವೈದ್ಯರಿಗೆ ನೆರವಾಗಲು ಪೊಲೀಸ್‌ ಅಧಿಕಾರಿಗಳ ತಂಡವನ್ನೂ ರಚಿಸಿ’ ಎಂದು ಡಿಜಿಪಿಗೆ ಸೂಚನೆ ನೀಡಿತು. ಇದೇ ವೇಳೆ “ಯಾವುದೇ ಆಡಳಿತಾತ್ಮಕ ಮತ್ತು ನ್ಯಾಯಾಂಗದ ಅಧಿಕಾರವನ್ನು ಚಲಾಯಿಸದಂತೆ ನ್ಯಾ| ಕರ್ಣನ್‌ ಅವರಿಗೆ ನಾವು ಈಗಾಗಲೇ ಆದೇಶಿಸಿದ್ದೇವೆ. ಹಾಗಾಗಿ, ಫೆ.8ರ ಬಳಿಕ ನ್ಯಾ| ಕರ್ಣನ್‌ ಅವರು ಹೊರಡಿಸಿದ ಯಾವುದೇ ಆದೇಶಗಳನ್ನು ಪರಿಗಣಿಸಬೇಕಾಗಿಲ್ಲ’ ಎಂದೂ ದೇಶದ ಎಲ್ಲ ನ್ಯಾಯಾಲಯಗಳು, ನ್ಯಾಯಮಂಡಳಿಗಳು ಹಾಗೂ ಆಯೋಗಕ್ಕೆ ನ್ಯಾಯಪೀಠ ಸೂಚಿಸಿತು.

ಮೇ 8ರೊಳಗೆ ಪ್ರತಿಕ್ರಿಯೆ ನೀಡಿ: ನ್ಯಾಯಾಂಗ ನಿಂದನೆ ನೋಟಿಸ್‌ಗೆ ಸಂಬಂಧಿಸಿ ಮೇ 8ರೊಳಗೆ ಪ್ರತಿಕ್ರಿಯೆ ನೀಡುವಂತೆ ನ್ಯಾ| ಕರ್ಣನ್‌ಗೆ ನ್ಯಾಯಪೀಠ ಆದೇಶಿಸಿದೆ. ಒಂದು ವೇಳೆ ಮೇ 8ರೊಳಗೆ ಪ್ರತಿಕ್ರಿಯೆ ನೀಡದೇ ಇದ್ದಲ್ಲಿ ನಿಮಗೆ ಹೇಳಲು ಏನೂ ಇಲ್ಲ ಎಂದು ಪರಿಗಣಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿ ಮೇ 9ಕ್ಕೆ ವಿಚಾರಣೆಯನ್ನು ಮುಂದೂಡಿತು. ಈ ಹಿಂದೆ, ಕೋರ್ಟ್‌ ಮುಂದೆ ಹಾಜರಾಗಿದ್ದ ನ್ಯಾ| ಕರ್ಣನ್‌, ತಮ್ಮ ಆಡಳಿತಾತ್ಮಕ ಹಾಗೂ ನ್ಯಾಯಾಂಗದ ಕರ್ತವ್ಯಗಳನ್ನು ಪೂರೈಸಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದರು. ಆದರೆ ಇದನ್ನು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಇದರಿಂದ ಕ್ರುದ್ಧರಾಗಿದ್ದ ನ್ಯಾ| ಕರ್ಣನ್‌, ಇನ್ನು ಮುಂದೆ ಕೋರ್ಟ್‌ ಮುಂದೆ ಹಾಜರಾಗುವುದಿಲ್ಲ ಎಂದು ಹೇಳಿ ಹೊರನಡೆದಿದ್ದರು.

ಬಲವಂತವಾಗಿ ನನ್ನನ್ನು ಪರೀಕ್ಷಿಸಲು ಬಂದರೆ ಡಿಜಿಪಿಯನ್ನೇ ಸಸ್ಪೆಂಡ್‌ ಮಾಡುತ್ತೇನೆ. ಏಮ್ಸ್‌ ವೈದ್ಯ ತಂಡದಿಂದ ಸುಪ್ರೀಂ ಕೋರ್ಟ್‌ನ 7 ಮಂದಿ ಜಡ್ಜ್ಗಳ ಮಾನಸಿಕ ಆರೋಗ್ಯವನ್ನು ಪರಿಶೀಲಿಸುವಂತೆ ಡಿಜಿಪಿ ಮತ್ತು ಕೇಂದ್ರ ಸರಕಾರಕ್ಕೆ ಆದೇಶಿಸುತ್ತೇನೆ.
ನ್ಯಾ| ಸಿ.ಎಸ್‌.ಕರ್ಣನ್‌, ಕೋಲ್ಕತಾ ಹೈಕೋರ್ಟ್‌ ನ್ಯಾಯಮೂರ್ತಿ

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.