ಮಲ್ಟಿಪ್ಲೆಕ್ಸ್‌ಗಳಲ್ಲಿ ಗರಿಷ್ಠ 200 ರೂ. ದರ ನಿಗದಿ
Team Udayavani, May 3, 2017, 9:42 AM IST
ಗೋಲ್ಡ್ ಕ್ಲಾಸ್, ಐಮ್ಯಾಕ್ಸ್, 4ಡಿ ಎಕ್ಸ್‌ಗಳಿಗೆ ಅನ್ವಯಿಸಲ್ಲ
ಬೆಂಗಳೂರು: ರಾಜ್ಯದ ಮಲ್ಟಿಫ್ಲೆಕ್ಸ್‌ಗಳೂ ಸೇರಿ ಎಲ್ಲ ಚಿತ್ರಮಂದಿರಗಳಲ್ಲಿ ಗರಿಷ್ಠ 200 ರೂ. ಟಿಕೆಟ್ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2017-18 ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಸರ್ಕಾರ ಈ ಆದೇಶ ಹೊರಡಿಸಿದ್ದು, ಮಂಗಳವಾರದಿಂದಲೇ ಜಾರಿಗೆ ಬಂದಿದೆ. ಮಲ್ಟಿಫ್ಲೆಕ್ಸ್ ಮತ್ತು ಏಕ ತೆರೆ ಚಿತ್ರಮಂದಿರಗಳಿಗೆ ಈ ಆದೇಶ ಅನ್ವಯವಾಗಲಿದ್ದು, ತೆರಿಗೆ ಹೊರತುಪಡಿಸಿ ಗರಿಷ್ಠ ದರ 200 ರೂ.ನಿಗದಿ ಪಡಿಸಲಾಗಿದೆ. ಈ ಏಕರೂಪ ದರ ರಾಜ್ಯದಲ್ಲಿ ಪ್ರದರ್ಶನಗೊಳ್ಳುವ ಎಲ್ಲ ಭಾಷೆಯ ಚಿತ್ರಗಳಿಗೂ ಅನ್ವಯವಾಗಲಿದೆ.
ಆದರೆ, ಮಲ್ಟಿಫ್ಲೆಕ್ಸ್‌ಗಳಲ್ಲಿನ ಗೋಲ್ಡ್‌ಕ್ಲಾಸ್ ಸ್ಕ್ರೀನ್‌ಗಳು, ಐ-ಮ್ಯಾಕ್ಸ್ ಮತ್ತು 4ಡಿಎಕ್ಸ್ ಚಿತ್ರಮಂದಿರಗಳನ್ನೂ ಏಕದರ ನೀತಿಯಿಂದ ಹೊರಗಿಡಲಾಗಿದೆ. ಮಲ್ಟಿಫ್ಲೆಕ್ಸ್‌ಗಳಲ್ಲಿ ಒಂದು ಸ್ಕ್ರೀನ್‌ನ ಒಟ್ಟು ಸೀಟ್ ಗಳಲ್ಲಿ ಗೋಲ್ಡ್‌ಕ್ಲಾಸ್ ಸೀಟ್‌ಗಳು ಶೇ.10 ರಷ್ಟು ಮೀರದಂತೆ ಇರಬೇಕೆಂದು ಆದೇಶದಲ್ಲಿ ಸೂಚಿಸಲಾಗಿದೆ.
ರಾಜ್ಯ ಸರ್ಕಾರ ಬಜೆಟ್ ಘೋಷಣೆ ಮಾಡಿ ತಿಂಗಳು ಕಳೆದರೂ, ಮಲ್ಟಿಫ್ಲೆಕ್ಸ್‌ಗಳಲ್ಲಿ ಏಕ ರೂಪ ದರ ನಿಗದಿ ಪಡಿಸುವ ಕುರಿತು ಯಾವ ಇಲಾಖೆ ಆದೇಶ ಮಾಡಬೇಕೆಂಬ ಗೊಂದಲದ ಬಗ್ಗೆ ಸೋಮವಾರ “ಉದಯವಾಣಿ’ ವರದಿ ಮಾಡಿತ್ತು. ಈ ಬಗ್ಗೆ ತಕ್ಷಣ ಎಚ್ಚೆತ್ತುಕೊಂಡಿರುವ ಸರ್ಕಾರ ಕನ್ನಡ ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಮೂಲಕ ಆದೇಶ ಹೊರಡಿಸಿದೆ.
ಸೋಮವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಹುಬಲಿ-2 ಚಿತ್ರವನ್ನು ಓರಾಯನ್ ಮಾಲ್‌ನಲ್ಲಿ ದುಬಾರಿ ದರ ನೀಡಿ ವೀಕ್ಷಿಸಿದ್ದರು. ಇದೂ ಸಹ ಚರ್ಚೆಗೆ ಗ್ರಾಸವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಬಜೆಟ್‌ನಲ್ಲಿ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‌ನ ಗರಿಷ್ಠ ದರ 200 ರೂ. ನಿಗದಿ ಕುರಿತು ಘೋಷಿಸಿದ್ದರು.
ಆದೇಶದಲ್ಲಿ ಏನಿದೆ?
ರಾಜ್ಯದಲ್ಲಿನ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಒಂದು ಪರದೆಯಲ್ಲಿ ಮಧ್ಯಾನ್ನ 1.30 ರಿಂದ ಸಂಜೆ 7.30 ರವರೆಗಿನ ಪ್ರಮುಖ ಅವಧಿಯಲ್ಲಿ ಕನ್ನಡ ಹಾಗೂ ಪ್ರಾದೇಶಿಕ ಭಾಷೆಗಳ ಚಲನಚಿತ್ರಗಳ ಪ್ರದರ್ಶನ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಕನ್ನಡ ಹೊರತುಪಡಿಸಿ ಪ್ರಾದೇಶಿಕ ಭಾಷೆ ಎಂದರೆ ತುಳು, ಕೊಂಕಣಿ, ಕೊಡವ ಭಾಷೆಗಳ ಚಿತ್ರಗಳು.
ಇದು ಕನ್ನಡಚಿತ್ರರಂಗದ ಬಹಳ ದಿನದ ಬೇಡಿಕೆಯಾಗಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಮತ್ತು ಕನ್ನಡ ಚಿತ್ರರಂಗ ಈ ಕುರಿತು ಮನವಿ ಮಾಡಿದ್ದವು. ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಇದೊಂದು ದೊಡ್ಡ ಹೆಜ್ಜೆ. ಇಂಥದ್ದೊಂದು ಮಾಡಿಕೊಟ್ಟ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು.
– ಸಾ.ರಾ. ಗೋವಿಂದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.