ಮಧ್ಯಪ್ರದೇಶದಲ್ಲಿ ಜನವರಿ- ಡಿಸೆಂಬರ್ ವಿತ್ತೀಯ ವರ್ಷ
Team Udayavani, May 3, 2017, 9:59 AM IST
ಭೋಪಾಲ: ಕೇಂದ್ರ ಸರ್ಕಾರದಲ್ಲಿ ವಿತ್ತೀಯ ವರ್ಷವನ್ನು ಜನವರಿಂದ ಡಿಸೆಂಬರ್ಗೆ ಬದಲು ಮಾಡಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೀತಿ ಆಯೋಗದ ಸಭೆಯಲ್ಲಿ ಪ್ರಸ್ತಾಪಿಸಿದ್ದರು.
ಅದನ್ನೇ ಮಧ್ಯಪ್ರದೇಶದಲ್ಲಿ ಅನುಷ್ಠಾನಕ್ಕೆ ತರಲು ನಿರ್ಧರಿಸಲಾಗಿದೆ. ಹೀಗಾಗಿ ಮುಂದಿನ ವರ್ಷದ ಬಜೆಟ್ ಈ ವರ್ಷದ ಡಿಸೆಂಬರ್ನಲ್ಲಿ ನಡೆಯಲಿದೆ. ಈ ಬಗ್ಗೆ ಮಂಗಳವಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. 2017-18ನೇ ಹಣಕಾಸು ವರ್ಷಕ್ಕೆ ಸಂಬಂಧಿಸಿದ ಯೋಜನೆಗಳನ್ನು ಡಿಸೆಂಬರ್ ಅಂತ್ಯಕ್ಕೇ ಮುಕ್ತಾಯಗೊಳಿಸುತ್ತೇವೆ ಎಂದು ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
ಈ ಕ್ರಮದಿಂದಾಗಿ ತೆರಿಗೆ ಪಾವತಿ ವರ್ಷ ಮತ್ತಿತರ ವಿಚಾರಗಳಲ್ಲಿಯೂ ಆಮೂಲಾಗ್ರ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದಲ್ಲಿಯೂ ಕೂಡ ಬಜೆಟ್ ಮಂಡನೆಯ ದಿನಾಂಕವನ್ನು ಸಂಪ್ರದಾಯ ಮುರಿದು ಫೆ.1ರಂದೇ ಮಂಡಿಸಲಾಗಿತ್ತು. ಮಾರ್ಚ್ ಅಂತ್ಯದ ಒಳಗಾಗಿ ಬಜೆಟ್ ಅಂಗೀಕಾರವನ್ನೂ ಮಾಡಲಾಗಿತ್ತು. ಕೃಷಿ ಆಧಾರಿತ ದೇಶವಾಗಿರುವ ಹಿನ್ನೆಲೆಯಲ್ಲಿ ರೈತರ ಕೈಗೆ ಫಸಲು ಬರುತ್ತಿದಂತೆಯೇ, ಅವರಿಗೆ ಅನುಕೂಲವಾಗುವಂಥ ಯೋಜನೆಗಳು ಜಾರಿಗೊಳ್ಳಬೇಕೆಂದು ಪ್ರಧಾನಿ ಮೋದಿ ಇತ್ತೀಚೆಗೆ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.