ಜಯಾ ವಿಲ್‌ಗಾಗಿ ಎಸ್ಟೇಟ್ ಕಾವಲುಗಾರನ ಹತ್ಯೆ?
Team Udayavani, May 3, 2017, 10:39 AM IST
ಚೆನ್ನೈ: ಮಾಜಿ ಮುಖ್ಯಮಂತ್ರಿ, ದಿವಂಗತ ಜೆ. ಜಯಲಲಿತಾ ಅವರ ವಿಲ್‌ಗಾಗಿ ಕೊಡನಾಡ್ ಎಸ್ಟೇಟ್ ಕಾವಲುಗಾರನ ಹತ್ಯೆ ನಡೆದಿರಬಹುದು ಎಂದು ತಮಿಳುನಾಡು ಪೊಲೀಸರು ಶಂಕಿಸಿದ್ದಾರೆ. ಹತ್ಯೆ ಮಾಡಿ ಎಸ್ಟೇಟ್‌ನಲ್ಲಿರುವ ಮನೆಗಳಲ್ಲಿ ಹುಡುಕಾಟ ನಡೆಸಿರುವುದನ್ನೆಲ್ಲ ಗಮನಿಸಿದಾಗ ಈ ಅನುಮಾನ ಬಲವಾಗಿಯೇ ಕಾಡುತ್ತಿರುವುದಾಗಿ ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಹಾಗೂ ಪ್ರಮುಖ ಸಾಕ್ಷಿದಾರನೂ ಆಗಿರುವ ಕೆ.ವಿ.ಸಯಾನ್ ವಿಚಾರಣೆ ನಡೆಸಿರುವ ಪೊಲೀಸರಿಗೆ ಜಯಾ ಅವರ ವಿಲ್‌ಗಾಗಿಯೇ ಈ ಹತ್ಯೆ ನಡೆದಿರಬಹುದು, ಇದರ ಹುಡುಕಾಟದ ವೇಳೆ ಕೈಗೆ ಸಿಕ್ಕ ನಗದು ದೋಚಿರಬಹುದು. ಜಯಲಲಿತಾ ಅವರಿಗೆ ಸೇರಿದ ಆಸ್ತಿ ದಾಖಲೆಗಳೂ ಕಾಣಿಸದೇ ಇರುವುದು ಈ ಅನುಮಾನವನ್ನು ಇನ್ನಷ್ಟು ಬಲಗೊಳಿಸುತ್ತದೆ ಎಂದು ಪೊಲೀಸ್ ಮೂಲಗಳು ಹೇಳಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆ ನಡೆಯುತ್ತಿದ್ದು, ಈಗಾಗಲೇ ಸಿಕ್ಕಿರುವ ಮಾಹಿತಿಯನ್ನಾಧರಿಸಿ ತಮಿಳುನಾಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎನ್ನಲಾಗಿದೆ. ಏಪ್ರಿಲ್ 23ರಂದು ಮೂರು ವಾಹನಗಳಲ್ಲಿ ಎಸ್ಟೇಟ್‌ಗೆ ನುಗ್ಗಿದ 11ಕ್ಕೂ ಹೆಚ್ಚು ಮಂದಿ ಇದ್ದ ಗುಂಪು ಈ ಕೃತ್ಯವೆಸಗಿ ಪರಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.