ಖಾಸಗಿ ಬಸ್ ಮಾಲಿಕರಿಗೆ ತಾತ್ಕಾಲಿಕ ರಿಲೀಫ್
Team Udayavani, May 4, 2017, 12:28 PM IST
ಬೆಂಗಳೂರು: ರಾಜ್ಯದ ರಾಷ್ಟ್ರೀಕೃತ ಮಾರ್ಗಗಳಲ್ಲಿ ಖಾಸಗಿ ಬಸ್‌ಗಳ ಸಂಚಾರಕ್ಕೆ ಹೊಸದಾಗಿ ಪರವಾನಗಿ ನೀಡಲು ನಿರಾಕರಿಸಿ ಸಾರಿಗೆ ಇಲಾಖೆ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿದೆ. ಇದರಿಂದ ಖಾಸಗಿ ಬಸ್ ಮಾಲೀಕರಿಗೆ ಬಿಗ್ ರಿಲೀಫ್ ದೊರೆತಿದೆ. 2015ರ ಆಗಸ್ಟ್ 5ರಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹೊರಡಿಸಿದ್ದ ಆದೇಶ ರದ್ದುಗೊಳಿಸುವಂತೆ ಕೋರಿ ಎರಡು ಗುಂಪುಗಳಲ್ಲಿ ಸುಮಾರು 1400ಕ್ಕೂ ಅಧಿಕ ಖಾಸಗಿ ಬಸ್ ಮಾಲೀಕರು ಸಲ್ಲಿಸಿದ್ದ ತಕರಾರು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಅರವಿಂದ ಅವರಿದ್ದ
ಏಕಸದಸ್ಯಪೀಠ ಬುಧವಾರ ತೀರ್ಪು ನೀಡಿತು.
ರಾಷ್ಟ್ರೀಕೃತ ಮಾರ್ಗಗಳಲ್ಲಿ ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ಕೋರಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನು
ರಾಜ್ಯ ಸರ್ಕಾರ ಅಥವಾ ಕರ್ನಾಟಕ ರಸ್ತೆ ಮೇಲ್ಮನವಿ ಪ್ರಾಧಿಕಾರ ಹೊಸದಾಗಿ ವಿಚಾರಣೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಬಹುದು ಎಂದು ನ್ಯಾಯಾಲಯ ನಿರ್ದೇಶಿಸಿದೆ.
ಖಾಸಗಿ ಬಸ್‌ಗಳಿಗೆ ಹೊಸದಾಗಿ ಪರವಾನಿಗೆ ನೀಡುವಂತೆ ಕರ್ನಾಟಕ ರಸ್ತೆ ಸಾರಿಗೆ ಮೇಲ್ಮನವಿ ನ್ಯಾಯಾಧೀಕರಣದ
ಮುಂದೆ ಸಲ್ಲಿಕೆಯಾಗಲಿರುವ ಅರ್ಜಿಗಳನ್ನು ಮೆರಿಟ್ ಆಧಾರದ ಮೇಲೆ ವಿಚಾರಣೆ ನಡೆಸಿ 10 ದಿನಗಳಲ್ಲಿ ಆದೇಶ
ಹೊರಡಿಸಬೇಕು ಎಂದು ಸಹ ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಈ ಅರ್ಜಿಗಳ ವಿಚಾರಣೆಯು ಹೈಕೋರ್ಟ್ ಹಾಗೂಸಾರಿಗೆ ನ್ಯಾಯಾಧೀಕರಣದಲ್ಲಿ ಇತ್ಯರ್ಥವಾಗುವ ತನಕ, ಶಾಶ್ವತ
ಪರವಾನಿಗೆ ಅಥವಾ ತಾತ್ಕಾಲಿಕ ಪರವಾನಿಗೆ ಹೊಂದಿರುವ ಖಾಸಗಿ ಬಸ್‌ಗಳು ಸಂಚಾರ ನಡೆಸಬಹುದು ಎಂದು
ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ನಿಗದಿತ ಮಾರ್ಗಗಳ ಸಂಚಾರಕ್ಕೆ ಪರವಾನಿಗೆ ಹೊಂದಿರುವ ನೂರಾರು
ಖಾಸಗಿ ಬಸ್‌ಗಳು ಕನಿಷ್ಟ ಮೂರು ತಿಂಗಳು ನಿರಾತಂಕವಾಗಿ ಸಂಚರಿಸಲು ಅನುಕೂಲವಾಗಲಿದೆ.
ಏನಿದು ಪ್ರಕರಣ?: 2015ರಲ್ಲಿ ರಾಜ್ಯ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಖಾಸಗಿ ಬಸ್ ಮಾಲೀಕ ಅತಾವುಲ್ಲಾ ಖಾನ್ ಹಾಗೂ ಮತ್ತಿತರರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದರ ಜೊತೆಗೆ ಕೆಲ ಖಾಸಗಿ ಬಸ್ ಮಾಲೀಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ನ್ಯಾಯಾಧೀಕರಣದ ಮುಂದೆ ಅರ್ಜಿ ಸಲ್ಲಿಸಿದ್ದರು. ಆದರೆ ಸಾರಿಗೆ ಮೇಲ್ಮನವಿ ಪ್ರಾಧಿಕಾರ ಪ್ರಧಾನ ಕಾರ್ಯದರ್ಶಿಯವರ ಆದೇಶ ಪುರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿದ್ದ ಅರ್ಜಿದಾರರೂ ಪುನ: ಹೈಕೋರ್ಟ್ ಮೊರೆಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.