ವಿಧಾನಸೌಧದ 2 ಮಹಡಿ, ಸುವರ್ಣಸೌಧ, ಇನ್ನು ವಿಧಾನಸಭೆ ಸಚಿವಾಲಯದ ಸ್ವತ್ತು


Team Udayavani, May 5, 2017, 11:10 AM IST

vidhana-soudha-750.jpg

ಬೆಂಗಳೂರು: ಸಾಕಷ್ಟು ವಿರೋಧದ ನಡುವೆಯೂ ವಿಧಾನಸೌಧದ ನೆಲಮಹಡಿ, ಮೊದಲ ಮಹಡಿ, ಬೆಳಗಾವಿಯ ಸುವರ್ಣ ವಿಧಾನಸೌಧ, ಶಾಸಕರ ಭವನದ ನಿರ್ವಹಣೆ ಮತ್ತು ಕಾಮಗಾರಿಗಳ ಜವಾಬ್ದಾರಿಯನ್ನು ವಿಧಾನಸಭೆ ಸಚಿವಾಲಯ ತನ್ನ ವಶಕ್ಕೆ ತೆಗೆದುಕೊಂಡಿದೆ. ಇದುವರೆಗೆ ಲೋಕೋಪಯೋಗಿ ಇಲಾಖೆ ಈ ಕಟ್ಟಡಗಳ ನಿರ್ವಹಣೆ ಮಾಡುತ್ತಿತ್ತು. ಆದರೆ, ಶಕ್ತಿ ಕೇಂದ್ರದ 2ನೇ ಮತ್ತು 3ನೇ ಮಹಡಿಯ ನಿರ್ವಹಣೆಯನ್ನು ಮೊದಲಿನಂತೆ ಲೋಕೋಪಯೋಗಿ ಇಲಾಖೆಯೇ ನಡೆಸಲಿದೆ.

ಇದಲ್ಲದೆ, ಲಾಲ್‌ಬಾಗ್‌ ಸಿದ್ದಾಪುರ ಹಾಗೂ ಕ್ರೆಸೆಂಟ್‌ ರಸ್ತೆಯಲ್ಲಿರುವ ವಾಹನ ಚಾಲಕರ ವಸತಿಗೃಹಗಳನ್ನೂ ತನ್ನ ವಶಕ್ಕೆ ತೆಗೆದುಕೊಂಡು ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ. ಇದರೊಂದಿಗೆ ಈ ಸ್ಥಳಗಳಲ್ಲಿ ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿದ್ದ ಸಿವಿಲ್‌ ಮತ್ತು ಎಲೆಕ್ಟ್ರಿಕಲ್‌ ಕಾಮಗಾರಿಗಳ ಜವಾಬ್ದಾರಿಯನ್ನು  ಇನ್ನು ಮುಂದೆ ಸಚಿವಾಲಯ ನಿರ್ವಹಿಸಲಿದೆ.

ವಿಧಾನ ಪರಿಷತ್‌ ಸಭಾಪತಿ, ವಿಧಾನಸಭೆ ಅಧ್ಯಕ್ಷ, ಎರಡೂ ಸಚಿವಾಲಯದ ಕಾರ್ಯದರ್ಶಿಗಳು, ಲೋಕೋಪಯೋಗಿ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಎಚ್‌.ಎಸ್‌.ಕಸ್ತೂರಿ ಅವರು ಬುಧವಾರ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಲೋಕೋಪಯೋಗಿ ಇಲಾಖೆ ನಿರ್ವಹಣೆ ಸಂವಿಧಾನಬಾಹಿರ! 
ವಿಧಾನ ಮಂಡಲದ ಉಭಯ ಸದನಗಳ ವ್ಯಾಪ್ತಿಯ ಕಾಮಗಾರಿಗಳನ್ನು ಇದುವರೆಗೆ ಲೋಕೋಪಯೋಗಿ ಇಲಾಖೆ ನಿರ್ವಹಣೆ ಮಾಡುತ್ತಿದ್ದುದು ಸಂವಿಧಾನ ಬಾಹಿರ ಮತ್ತು ಕಾನೂನು ಬಾಹಿರವಾಗಿದೆ..!ಹೌದು, 1984ರಲ್ಲಿ ಶಾಸಕಾಂಗದ ಸಚಿವಾಲಯಕ್ಕೆ ಆಡಳಿತಾತ್ಮಕ ಅಧಿಕಾರಗಳನ್ನು ಹಂಚಿಕೆ ಮಾಡಿ ಸರ್ಕಾರ ಅದನ್ನು ಸ್ವಾಯತ್ತಗೊಳಿಸಿತ್ತು. ಭಾರತದ ಸಂವಿಧಾನದಲ್ಲಿ ಶಾಸಕಾಂಗಕ್ಕೆ ಪ್ರತ್ಯೇಕ ಸ್ವಾಯತ್ತತೆ ಮತ್ತು ಸಾರ್ವಭೌಮತ್ವ ಇದೆ. 

ಸಚಿವಾಲಯಕ್ಕೆ ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ಅಧಿಕಾರ ಇದ್ದರೂ ಉಭಯ ಸಚಿವಾಲಯಗಳ ವ್ಯಾಪ್ತಿಯ
ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ ನಿರ್ವಹಣೆ ಮಾಡುತ್ತಿರುವುದು ಸಂವಿಧಾನಬಾಹಿರ ಮತ್ತು ಕಾನೂನು ಬಾಹಿರ ಎಂದು ವಿಧಾನಸಭಾಧ್ಯಕ್ಷರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ಕೂಡಲೇ ಉಭಯ ಸದನಗಳ ಪೀಠಾಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ಕರೆಯುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಹಲವು ಸುತ್ತಿನ ಸಭೆ ನಡೆಸಿ ಲೋಕೋಪಯೋಗಿ ಇಲಾಖೆ ನಡೆಸುತ್ತಿದ್ದ ಕಾಮಗಾರಿಗಳನ್ನು ಸಚಿವಾಲಯವೇ ನಡೆಸಲು ತೀರ್ಮಾನಿಸಿದೆ.

ಆದೇಶದಲ್ಲಿ ಏನಿದೆ?
– ಬೆಂಗಳೂರಿನ ಶಾಸಕರ ಭವನ, ಲಾಲ್‌ಬಾಗ್‌, ಸಿದ್ದಾಪುರ ಮತ್ತು ಕ್ರೆಸೆಂಟ್‌ ರಸ್ತೆಯಲ್ಲಿರುವ ವಾಹನ ಚಾಲಕರ ವಸತಿಗೃಹಗಳ ಆಸ್ತಿಯ ಮಾಲಿಕತ್ವವನ್ನು ವಿಧಾನಸಭೆ ಸಚಿವಾಲಯ ಪಡೆಯುವುದು.
– ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದ ಹಿಂಭಾಗದಲ್ಲಿರುವ ಗ್ರೂಪ್‌ ಡಿ ನೌಕರರ ವಸತಿ ಗೃಹದ 2.2 ಎಕರೆ ಖಾಲಿ ಜಾಗದಲ್ಲಿ ಕಾನ್‌ಸ್ಟಿಟ್ಯೂಷನಲ್‌ ಕ್ಲಬ್‌ ನಿರ್ಮಾಣಕ್ಕೆ ಆಸ್ತಿಯ ಮಾಲೀಕತ್ವ ಪಡೆದು ಕಾನ್‌ಸ್ಟಿಟ್ಯೂಷನಲ್‌ ಕ್ಲಬ್‌ ನಿರ್ಮಿಸುವುದು.
– ಬೆಂಗಳೂರಿನಲ್ಲಿ ಲಭ್ಯವಿರುವ ಸ್ಥಳದಲ್ಲಿ ಕನಿಷ್ಠ 50ಕ್ಕಿಂತ ಹೆಚ್ಚು ಎಕರೆ ಸರ್ಕಾರಿ ಭೂಮಿಯನ್ನು ಸರ್ಕಾರದಿಂದ ಪಡೆದು ಅಲ್ಲಿ ಲೆಜಿಸ್ಲೇಚರ್‌ ಟೌನ್‌ಶಿಪ್‌ ನಿರ್ಮಾಣ.  ವಿಧಾನಸೌಧ ಕಟ್ಟಡದಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ಕೆಲವು ಭಾಗಗಳ ಹಾಗೂ ಶಾಸಕರ ಭವನದ ಸಿವಿಲ್‌ ಮತ್ತು ಎಲೆಕ್ಟ್ರಿಕಲ್‌ ಕಾಮಗಾರಿಗಳ ಜವಾಬ್ದಾರಿಯನ್ನು ನಿರ್ವಹಣೆ ಮಾಡುವುದು.
– 2017ರ ಏ.1ರಿಂದ ಪೂರ್ವಾನ್ವಯವಾಗುವಂತೆ ಬೆಳಗಾವಿಯ ಸುವರ್ಣ ವಿಧಾನಸೌಧದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿಯನ್ನು ವಿಧಾನಸಭೆ ಸಚಿವಾಲಯದಿಂದಲೇ ನಿರ್ವಹಿಸುವುದು.
– ಬೆಳಗಾವಿ ಸುವರ್ಣ ವಿಧಾನಸೌಧದ ನಿರ್ವಹಣೆ ಸಂಬಂಧ ಟೆಂಡರ್‌ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಹಾಲಿ ಇರುವ ವ್ಯವಸ್ಥೆ ಮುಂದುವರಿಸುವುದು. ಪ್ರಸ್ತುತ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರು/ ಹೊರ ಸಂಪನ್ಮೂಲದ ಸಿಬ್ಬಂದಿಗೆ ಹಣ ಪಾವತಿ/ ವೇತನ, ಭತ್ಯೆಗಳನ್ನು ಸಚಿವಾಲಯದ ವತಿಯಿಂದ ಪಾವತಿಸುವುದು.
– ಬೆಳಗಾವಿ ಸುವರ್ಣ ವಿಧಾನಸೌಧದ ಆಸ್ತಿ ಮಾಲಿಕತ್ವ, ರಕ್ಷಣೆ, ಸರ್ವ ರೀತಿಯ ಅಭಿವೃದ್ಧಿ ಇತ್ಯಾದಿ ಜವಾಬ್ದಾರಿಗಳನ್ನು ವಿಧಾನಸಭೆ ಸಚಿವಾಲಯವೇ ನಿರ್ವಹಿಸುವುದು.
– ಕರ್ನಾಟಕ ವಿಧಾನಸಭೆಯ ಸಚಿವಾಲಯಕ್ಕೆ ಅಗತ್ಯವಾದ ಅನುದಾನಗಳನ್ನು ಆರ್ಥಿಕ ಇಲಾಖೆಯಿಂದ ಪಡೆಯಲು ಸಂಪೂರ್ಣ ಅಧಿಕಾರ.
– ವಿಧಾನಸಭೆ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ರೀತಿಯ ಸಿವಿಲ್‌/ ವಿದ್ಯುತ್‌ ಸಂಬಂಧಿತ ಕಟ್ಟಡ ಕಾಮಗಾರಿಗಳ ನಿರ್ವಹಣೆ ಸಂಬಂಧ ತಾಂತ್ರಿಕ ಸಲಹೆ, ಸೂಚನೆ ಪಡೆಯಲು ಹೊರಗುತ್ತಿಗೆ ಆಧಾರದ ಮೇಲೆ ನುರಿತ ಯೋಜನೆ ನಿರ್ವಹಣಾ ಸಲಹೆಗಾರರ ಸೇವೆ ಪಡೆಯುವುದು.

ಟಾಪ್ ನ್ಯೂಸ್

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.