ನಾಗನ ಮೂವರು ಸಹಚರರ ಬಂಧನ


Team Udayavani, May 5, 2017, 11:22 AM IST

bomb-nagaa.jpg

ಬೆಂಗಳೂರು: ಅಪಹರಣ, ಕೊಲೆ ಬೆದರಿಕೆ ಆರೋಪ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮಾಜಿ ಕಾರ್ಪೋರೇಟರ್‌ ನಾಗರಾಜುವಿನ ಸಹಚರರಾದ ಮೂವರು ಆರೋಪಿಗಳು ಕಡೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. 

ವಿಲ್ಸನ್‌ ಗಾರ್ಡ್‌ನ್‌ ನಿವಾಸಿ ಶರವಣ, ತಲಘಟ್ಟಪುರದ ಶ್ರೀನಿವಾಸ್‌, ಬೌನ್ಸರ್‌ ಕೆಲಸ ಮಾಡಿಕೊಂಡಿದ್ದ ಜಯ್‌ ಬಂಧಿತರು. ಪ್ರಕರಣದ ತನಿಖೆ ಜವಾಬ್ದಾರಿ ವಹಿಸಿಕೊಂಡಿರುವ ಕೆ.ಆರ್‌. ಪುರಂ ವಿಭಾಗದ ಎಸಿಪಿ ರವಿಕುಮಾರ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ. 

ವಿಚಾರಣೆ ವೇಳೆ ನಾಗನ ಜತೆ ಸೇರಿಕೊಂಡು ನಡೆಸಿದ ಅಕ್ರಮಗಳು ಹಾಗೂ ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆ ಸಂಬಂಧದ ದಾಖಲೆಗಳನ್ನು ವಶಪಡಿಸಿ ಕೊಂಡಿದ್ದಾರೆ. ಈ ಪ್ರಕರಣದ ಐದನೇ ಆರೋಪಿ ಯಾಗಿರುವ ವಿ. ನಾಗರಾಜು ಹಾಗೂ ಇನ್ನಿತರ ಆರೋಪಿಗಳ ಬಂಧನಕ್ಕೆ ಶೋಧ ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಪ್ರಕರಣದ ಮೊದಲ ಆರೋಪಿಯಾಗಿರುವ ಶರವಣ ಟಾಟಾ ಏಸ್‌ ಗಾಡಿ ಓಡಿಸಿಕೊಂಡಿದ್ದ. ನಾಗನ ಪರಿಚಯವಾದ ಬಳಿಕ ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆಯಲ್ಲಿ ತೊಡಗಿಸಿಕೊಂಡಿದ್ದ. ಹಳೇ ನೋಟುಗಳನ್ನು  ಹೊಂದಿದ್ದ ಗಿರಾಕಿಗಳನ್ನು ಕರೆದುಕೊಂಡು ಬರುತ್ತಿದ್ದ ಶರವಣ ನಾಗನಿಗೆ ಪರಿಚಯ ಮಾಡಿಸಿಕೊಟ್ಟು ದಂಧೆಗೆ ನೆರವಾಗುತ್ತಿದ್ದ. ಈ ಕೆಲಸಕ್ಕೆ 20ರಿಂದ ಮೂವತ್ತು ಪರ್ಸೆಂಟ್‌ ಕಮಿಷನ್‌ ಪಡೆದುಕೊಳ್ಳುತ್ತಿದ್ದ. ಅದೇ ರೀತಿ ಮತ್ತೋರ್ವ ಆರೋಪಿ ಶ್ರೀನಿವಾಸ್‌ ಹಾಗೂ ಬೌನ್ಸರ್‌ ಜಯ್‌ ಕೂಡ ನಾಗನ ಅಕ್ರಮ ದಂಧೆಗಳಿಗೆ ಸಾಥ್‌ ನೀಡುತ್ತಿದ್ದರೆಂದು ಅಧಿಕಾರಿ ಯೊಬ್ಬರು ತಿಳಿಸಿದರು.

ಚುನಾವಣೆಯಲ್ಲಿ ಸೋತಿದ್ದ: ತಲಘಟ್ಟಪುರದ ಶ್ರೀನಿವಾಸ್‌ ಸ್ವಂತ ವ್ಯವಹಾರ ನಡೆಸಿಕೊಂಡು ಪ್ರಭಾವಿ ರಾಜಕೀಯ ವ್ಯಕ್ತಿಗಳ ಸಂಪರ್ಕ ಇಟ್ಟುಕೊಂಡಿದ್ದಾನೆ. ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ಸುಧಾಮನಗರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಹಾಲಿ ಕಾಂಗ್ರೆಸ್‌ ಶಾಸಕ ರೊಬ್ಬರ ಮಗನ ವಿರುದ್ಧ ಸ್ಪರ್ಧಿಸಿದ್ದ ಶ್ರೀನಿವಾಸ್‌, 300 ಮತಗಳ ಅಂತರದಿಂದ ಪರಾಭವಗೊಂಡಿದ್ದ. ನಾಗರಾಜುವಿನ ಜತೆ ಹಳೇ ಸ್ನೇಹ ಹೊಂದಿರುವ ಶ್ರೀನಿವಾಸ್‌, ಬೆದರಿಕೆ, ಸುಲಿಗೆ, ಅಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಮಾಹಿತಿಯಿದ್ದು ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. 

ಜಾಮೀನು ಅರ್ಜಿ ವಿಚಾರಣೆ ಪೂರ್ಣ
ಮತ್ತೂಂದೆಡೆ ನಾಗ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣ ಗೊಳಿಸಿರುವ ಸೆಷನ್ಸ್‌ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ. ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು ನಾಗನಿಗೆ ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ಕೋರಿದರು. ಕಳೆದ 30 ದಿನಗ ಳಿಂದ ನಾಗರಾಜು ತಲೆಮರೆಸಿಕೊಂಡಿದ್ದಾನೆ. 1981ರಿಂದಲೂ ಆತನ ವಿರುದ್ಧ ದೂರುಗಳು ಬರುತ್ತಿವೆ. ಸಮಾಜ ಸೇವೆಯ ಬೋರ್ಡ್‌ ಹಾಕಿಕೊಂಡು ಅಕ್ರಮಗಳಲ್ಲಿ  ಭಾಗಿಯಾಗಿದ್ದಾನೆ.

ಪೊಲೀಸರ ದಾಳಿ ವೇಳೆ ಆತನ ಮನೆಯಲ್ಲಿ ಸಿಕ್ಕಿದ ಭಾರೀ ಪ್ರಮಾಣದ ಹಣ ಎಲ್ಲಿಂದ ಬಂದಿತ್ತು. ವಿಡಿಯೋದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದಾನೆ. ಹೀಗಾಗಿ ಆತನನ್ನು ಬಂಧಿಸಿ ಸಮಗ್ರ ತನಿಖೆ ನಡೆಸಬೇಕಿದೆ, ಯಾವುದೇ ಕಾರಣಕ್ಕೂ ಜಾಮೀನು ನೀಡ ಬಾರದು ಎಂದು ಬಲವಾಗಿ ಪ್ರತಿಪಾದಿಸಿದರು. ಸರ್ಕಾರಿ ಪರ ವಕೀಲರು ಹಾಗೂ ನಾಗನ ವಕೀ ಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ, ವಿಚಾರಣೆ ಪೂರ್ಣಗೊಳಿಸಿ ಶುಕ್ರವಾರಕ್ಕೆ ತೀರ್ಪು ಕಾಯ್ದಿರಿಸಿ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.