ಸಿಎಂ, ಸಚಿವರು-ಶಾಸಕರ ವಿರುದ್ಧ ಲೋಕಾಕ್ಕೆ ದೂರು
Team Udayavani, May 5, 2017, 11:32 AM IST
ಬೆಂಗಳೂರು: ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಅಧಿಕಾರ ದುರ್ಬಳಕೆ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 27 ಮಾಜಿ ಹಾಗೂ ಹಾಲಿ ಸಚಿವರ ವಿರುದ್ಧ ಲೋಕಾಯುಕ್ತದಲ್ಲಿ ಗುರುವಾರ ದೂರು ದಾಖಲಾಗಿದೆ.
2014-15ನೇ ಸಾಲಿನ ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಸಿಎಂ ಸೇರಿದಂತೆ ಎಲ್ಲ ಸಚಿವರು ಅಧಿಕಾರ ದುರ್ಬಳಕೆ ಮಾಡಿಕೊಂಡು,ತಮಗೆ ಹತ್ತಿರವಾಗಿರುವ ಅಧಿಕಾರಿಗಳನ್ನು ಆಯಕಟ್ಟಿನ ಜಾಗಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಶಿಫಾರಸು ಪತ್ರಗಳನ್ನು ನೀಡಿದ್ದಾರೆ. ಅಲ್ಲದೆ ವರ್ಗಾವಣೆ ವಿಚಾರದಲ್ಲಿ ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡಬಾರದೆಂಬ ಸುಪ್ರೀಂಕೋರ್ಟ್ ನಿರ್ದೇಶನವನ್ನೂ ಉಲ್ಲಂ ಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸೇರಿ ಸಚಿವರ ಹಸ್ತಕ್ಷೇಪದ ವಿರುದಟಛಿ ಸಮಗ್ರ ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಕೋರಿ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ.ಶಶಿಧರ್ ದೂರು ನೀಡಿದ್ದಾರೆ.
ಈ ಮೊದಲು ದೂರುದಾರ ಶಶಿಧರ್, ಸಿಎಂ ಹಾಗೂ ಸಚಿವರ ವಿರುದಟಛಿ ಅಧಿಕಾರ ದುರ್ಬಳಕೆ ಸಂಬಂಧ ಕಳೆದ ವರ್ಷ ಎಸಿಬಿಗೆ ದೂರು ನೀಡಿದ್ದರು.
ಈ ದೂರು ತಿರಸ್ಕರಿಸಿದ್ದ ಎಸಿಬಿ ಇದು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಮಜಾಯಿಷಿ ನೀಡಿತ್ತು. ಈ ಕ್ರಮ ಪ್ರಶ್ನಿಸಿ ಶಶಿಧರ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಈ ಕುರಿತು ಲೋಕಾಯುಕ್ತರಿಗೆ
ದೂರು ನೀಡುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಶಶಿಧರ್ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ.
ಯಾರ ವಿರುದ್ಧ ದೂರು?
ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್.ಸಿ . ಮಹದೇವಪ್ಪ, ಕೆ.ಜೆ.ಜಾರ್ಜ್, ಯು.ಟಿ.ಖಾದರ್, ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಎಚ್. ಆಂಜನೇಯ, ರಾಮಲಿಂಗಾರೆಡ್ಡಿ, ರಮಾನಾಥ್ ರೈ, ಎಂ.ಬಿ.ಪಾಟೀಲ್, ಉಮಾಶ್ರೀ, ಶರಣಪ್ರಕಾಶ್
ಪಾಟೀಲ…, ಎಚ್.ಕೆ ಪಾಟೀಲ್, ಮಾಜಿ ಸಚಿವರಾದ ದಿನೇಶ್ ಗುಂಡೂರಾವ್, ಕಿಮ್ಮನೆ ರತ್ನಾಕರ, ಶ್ರೀನಿವಾಸ್ ಪ್ರಸಾದ್, ಶಾಮನೂರು ಶಿವಶಂಕರಪ್ಪ, ಪಿ.ಟಿ.ಪರಮೇಶ್ವರ ನಾಯಕ್, ಬಾಬೂರಾವ್ ಚಿಂಚನಸೂರ, ವಿನಯ್ ಕುಮಾರ್ ಸೊರಕೆ, ಅಂಬರೀಶ್, ಖಮರುಲ್ ಇಸ್ಲಾಂ, ಅಭಯ್ ಚಂದ್ರ ಜೈನ್ ಸೇರಿದಂತೆ 27 ಮಂದಿ ವಿರುದ್ಧ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.