ಇಂದಿರಾ ಕ್ಯಾಂಟೀನ್‌ಗೆ ಸಚಿವ ಕೆ.ಜೆ.ಜಾರ್ಜ್ ಮೇಲುಸ್ತುವಾರಿ
Team Udayavani, May 5, 2017, 11:32 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ ರಿಯಾಯಿತಿ ದರದಲ್ಲಿ ಊಟ, ಉಪಹಾರ ಒದಗಿಸುವ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ.
ಜಾರ್ಜ್ ಅಧ್ಯಕ್ಷತೆಯ ಈ ಸಮಿತಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಮೇಯರ್ ಜಿ.ಪದ್ಮಾವತಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಜಲಮಂಡಳಿ ಅಧ್ಯಕ್ಷ, ಬಿಬಿಎಂಪಿ ಆಯುಕ್ತ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು), ನಗರಾಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ-3 ಅವರು ಸದಸ್ಯರಾಗಿರುತ್ತಾರೆ.
ಈ ಮಧ್ಯೆ ಗುರುವಾರ ವಿಧಾನಸೌಧದಲ್ಲಿ ಇಂದಿರಾ ಕ್ಯಾಂಟೀನ್ ಅನುಷ್ಠಾನ ಕುರಿತಂತೆ ಸಚಿವ ಕೆ.ಜೆ.ಜಾರ್ಜ್ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಆ. 15ರ ಸ್ವಾತಂತ್ರ ದಿನದಂದು ಏಕಕಾಲದಲ್ಲಿ ಕ್ಯಾಂಟೀನ್‌ಗಳು ಆರಂಭವಾಗಲಿವೆ. ಎಲ್ಲಾ ಕ್ಯಾಂಟೀನ್‌ಗಳು ಒಂದೇ ರೀತಿ ಇರಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರವಾರು ವಿಕೇಂದ್ರೀಕೃತ ಅಡುಗೆ ಮನೆಗಳನ್ನು ನಿರ್ಮಿಸಲಾಗುತ್ತದೆ. ಜತೆಗೆ ಕ್ಯಾಂಟೀನ್ ಕಟ್ಟಡದ ವ್ಯವಸ್ಥೆಯೂ ಆಗಬೇಕಿದ್ದು, ಇವುಗಳ ಅನುಷ್ಠಾನಕ್ಕೆ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ ಎಂದರು.
ಕ್ಯಾಂಟೀನ್ ಕಟ್ಟಡ ನಿರ್ಮಾಣ ಕಾರ್ಯವನ್ನು ಲ್ಯಾಂಡ್ ಆರ್ಮಿ ಮೂಲಕ ಕೈಗೊಳ್ಳಲಾಗುತ್ತಿದೆ. ಈಗಾಗಲೇ ತಮಿಳುನಾಡಿನ ಕೃಷ್ಣಗಿರಿಯ ಕಾರ್ಖಾನೆಯಲ್ಲಿ ಕ್ಯಾಂಟೀನ್ ಮಾದರಿಗಳನ್ನು ತಯಾರಿಸುತ್ತಿದ್ದು, ಪುಣೆ ಮೂಲದ ಕಂಪನಿ ಕೂಡ ಮಾದರಿ ಕ್ಯಾಂಟೀನ್ ಒದಗಿಸಲು ಮುಂದೆ ಬಂದಿದೆ. ಮುಖ್ಯಮಂತ್ರಿಗಳು ವೀಕ್ಷಿಸಿದ ಬಳಿಕ ಅಂತಿಮ ಮಾದರಿಯನ್ನು ಆಯ್ಕೆ ಮಾಡಲಾಗುವುದು ಎಂದರು.
ಸರ್ಕಾರ ನಿಗದಿಪಡಿಸುವ ಆಹಾರ ಪದಾರ್ಥಗಳನ್ನು ಒಳಗೊಂಡ ಅಡುಗೆ ತಯಾರಿಸಲು ಮಹಿಳಾ ಸ್ವಸಹಾಯ ಸಂಘಗಳೂ ಸೇರಿ ಆಸಕ್ತರಿಂದ ಟೆಂಡರ್ ಆಹ್ವಾನಿಸಲಾಗಿದೆ. ಸರ್ಕಾರದ ಷರತ್ತಿನಂತೆ ಈರುಳ್ಳಿ-ಬೆಳ್ಳುಳ್ಳಿ ಬಳಸಿ ಅಡುಗೆ ತಯಾರಿಸುವುದಾದರೆ ಇಸ್ಕಾನ್ ಕೂಡ ಟೆಂಡರ್‌ನಲ್ಲಿ ಭಾಗವಹಿಸಬಹುದು. ಸದ್ಯ ತಿಂಡಿಗೆ ಇಡ್ಲಿ, ವಡೆ, ಸಾಂಬಾರ್, ಉಪ್ಪಿಟ್ಟು, ಮಧ್ಯಾಹ್ನ ಮತ್ತು ರಾತ್ರಿಗೆ ಊಟ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.