7ನೇ ವೇತನ ಆಯೋಗ ರಚಿಸಿ

Team Udayavani, May 5, 2017, 12:31 PM IST

dvg4.jpg

ದಾವಣಗೆರೆ: ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಿ, 6 ತಿಂಗಳ ಒಳಗೆ ವರದಿ ಸಲ್ಲಿಸಲು ಕಾಲಾವಕಾಶ ನಿಗದಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಗುರುವಾರ ಸರ್ಕಾರಿ ನೌಕರರ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಸಾಲಿನ ತಮ್ಮ ಬಜೆಟ್‌ ಭಾಷಣದಲ್ಲಿ 7ನೇ ವೇತನ ಆಯೋಗ ರಚಿಸುವುದಾಗಿ ತಿಳಿಸಿದ್ದರು. ಈಗ ಐಎಎಸ್‌ ಅಧಿಕಾರಿ ನೇತೃತ್ವದ ಸಮಿತಿ ರಚಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಆಯೋಗದ ಬದಲಿಗೆ ಸಮಿತಿ ರಚಿಸುವುದರಿಂದ ನೌಕರರಿಗೆ ಅನ್ಯಾಯವಾಗಲಿದೆ.

ಸಮಿತಿಯ ಬದಲಿಗೆ ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿ, 6 ತಿಂಗಳ ಒಳಗೆ ವರದಿ ಸಲ್ಲಿಸುವ ಕಾಲಾವಕಾಶ ನೀಡಬೇಕು ಹಾಗೂ ಜನವರಿಯಿಂದ ಅನ್ವಯವಾಗುವಂತೆ ಶೇ.30 ರಷ್ಟು ಮಧ್ಯಂತರ ಪರಿಹಾರ ಘೋಷಿಸಬೇಕು ಎಂದು ಪದಾಧಿಕಾರಿಗಳು ಒತ್ತಾಯಿಸಿದರು. 

ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಆಯೋಗ ರಚನೆಯಾದರೆ ಎಲ್ಲಾ ರಾಜ್ಯಗಳಲ್ಲಿನ ಸರ್ಕಾರಿ ನೌಕರರ ವೇತನ ಹೋಲಿಕೆ ಮಾಡುವ ಜೊತೆಗೆ ಸಾಮಾನ್ಯ ನೌಕರರನಿಂದ ಅಭಿಪ್ರಾಯ ಪಡೆದು, ವೇತನ ನಿಗದಿ ಪಡಿಸುತ್ತದೆ. ಸರ್ಕಾರ ಸಮಿತಿ ಪ್ರಸ್ತಾಪ ಕೈ ಬಿಟ್ಟು ಆಯೋಗ ರಚಿಸಬೇಕು ಎಂದು ಒತ್ತಾಯಿಸಿದರು. 

ರಾಜ್ಯ ಸರ್ಕಾರಿ ನೌಕರರು ಈಗಾಗಲೇ 2 ವೇತನ ಆಯೋಗ ಕಳೆದುಕೊಂಡಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರಿ ನೌಕರರಿಗೂ ರಾಜ್ಯ ಸರ್ಕಾರಿ ನೌಕರರಿಗೆ ವೇತನ, ತುಟ್ಟಿಭತ್ಯೆಯಲ್ಲಿ ಸಾಕಷ್ಟು ಅಂತರ ಇದೆ. ಕೇಂದ್ರದ ನೌಕರರು ಶೇ. 72 ರಷ್ಟು ತುಟ್ಟಿಭತ್ಯೆ ಪಡೆದರೆ, ರಾಜ್ಯ ಸರ್ಕಾರಿ ನೌಕರರು ಶೇ. 30 ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದಾರೆ.

ಇನ್ನು ಸಮಿತಿ ರಚನೆಯಾದಲ್ಲಿ ಇನ್ನೂ ಅನ್ಯಾಯವಾಗಲಿದೆ. ಆದಷ್ಟು ಬೇಗ ವೇತನ ಆಯೋಗ ರಚಿಸಬೇಕು. ಹಳೆಯ ಪಿಂಚಣಿ ವ್ಯವಸ್ಥೆ ಮುಂದುವರೆಸಬೇಕು ಎಂದು ಒತ್ತಾಯಿಸಿದರು. ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯ ಎನ್‌.ಇ. ನಟರಾಜ್‌, ರಾಜ್ಯ ಕಾರ್ಯದರ್ಶಿ ಬಿ. ಶ್ರೀನಿವಾಸನಾಯಕ, ಜಿಲ್ಲಾ ಅಧ್ಯಕ್ಷ ಗೋವಿಂದಪ್ಪ ಸಾವಜ್ಜಿ, ಯು. ನಾಗೇಶ್‌, ವೀರಪ್ಪ, ಮೀರಾಬಾಯಿ, ಸಣ್ಣಪ್ಪ, ಎಚ್‌. ತ್ರಿಲೋಕ್‌ ಇತರರು ಇದ್ದರು. 

ಟಾಪ್ ನ್ಯೂಸ್

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Rashmika Mandanna gave hint of Pushpa 3

Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.