ಬ್ಯಾಡ್ಮಿಂಟನ್ ಶ್ರೇಯಾಂಕ: ಸೈನಾ ನೆಹ್ವಾಲ್, ಪಿ.ವಿ.ಸಿಂಧು ಕುಸಿತ
Team Udayavani, May 5, 2017, 12:46 PM IST
ನವದೆಹಲಿ: ಹೊಸದಾಗಿ ಬ್ಯಾಡ್ಮಿಂಟನ್ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು, ಭಾರತೀಯ ಸ್ಟಾರ್ ಆಟಗಾರ್ತಿಯರಾದ
ಪಿ.ವಿ.ಸಿಂಧು ಮತ್ತು ಸೈನಾ ನೆಹ್ವಾಲ್ ಸಿಂಗಲ್ಸ್ನಲ್ಲಿ ತಲಾ ಒಂದು ಸ್ಥಾನ ಕುಸಿದಿದ್ದಾರೆ. ಈ ಮುನ್ನ 3ನೇ ಶ್ರೇಯಾಂಕದಲ್ಲಿದ್ದ ಸಿಂಧು 4ನೇ ಸ್ಥಾನಕ್ಕೆ ಕುಸಿದಿದ್ದಾರೆ.
8ನೇ ಶ್ರೇಯಾಂಕದಲ್ಲಿದ್ದ ಸೈನಾ 9ನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ಇಬ್ಬರು ಆಟಗಾರ್ತಿಯರು ಇತ್ತೀಚೆಗೆ ಚೀನಾದಲ್ಲಿ ನಡೆದ
ಏಷ್ಯನ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲುಂಡಿದ್ದರು. ಇದು ಶ್ರೇಯಾಂಕ ಕುಸಿತಕ್ಕೆ ಕಾರಣವಾಗಿದೆ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಅಜಯ್ ಜಯರಾಮ್ 13ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಇದು ಭಾರತದ ಮಟ್ಟಿಗೆ ಪುರುಷರ ವಿಭಾಗದಲ್ಲಿ ಅಗ್ರ ಶ್ರೇಯಾಂಕವಾಗಿದೆ. ಉಳಿದಂತೆ 1 ಸ್ಥಾನ ಏರಿಕೆ ಕಂಡಿರುವ ಸಾಯಿ ಪ್ರಣೀತ್ 22ನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.