ಕಂಬಳ: ರಾಷ್ಟ್ರಪತಿಗೆ ಪರಿಷ್ಕೃತ ಮಸೂದೆ ರವಾನೆ

Team Udayavani, May 6, 2017, 9:46 AM IST

kambala-800.jpg

ಬೆಂಗಳೂರು: ಕರಾವಳಿ ಭಾಗದ ಕಂಬಳ ಹಾಗೂ ರಾಜ್ಯದ ವಿವಿಧೆಡೆ ಆಚರಣೆಯಲ್ಲಿರುವ ಎತ್ತಿನ ಓಟ, ಎತ್ತಿನಗಾಡಿ ಓಟ ಸ್ಪರ್ಧೆಗಳಿಗೆ ಸಂಬಂಧಿಸಿದ  ಪ್ರಾಣಿಗಳಿಗೆ ಹಿಂಸಾಚಾರ ಮಾಡುವುದನ್ನು ತಡೆಗಟ್ಟುವ (ಕರ್ನಾಟಕ ತಿದ್ದುಪಡಿ) ಮಸೂದೆ-2017ಕ್ಕೆ ಅಧಿಸೂಚನೆ ಹೊರಡಿಸುವ ಮೂಲಕ ಮಾರ್ಪಾಡು ಮಾಡುವ ತನಗಿದ್ದ ಅಧಿಕಾರವನ್ನು ರಾಜ್ಯ ಸರಕಾರ ವಾಪಸ್‌ ಪಡೆದುಕೊಂಡಿದೆ. 

ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಸಚಿವ ಟಿ.ಬಿ. ಜಯಚಂದ್ರ, ರಾಷ್ಟ್ರಪತಿಯವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೂಲ ಕಾಯ್ದೆಯ ಸೆಕ್ಷನ್‌-3ರಲ್ಲಿ ಹೆಚ್ಚುವರಿಯಾಗಿ ಸೇರಿಸಲಾಗಿದ್ದ ಅಂಶ ವನ್ನು ವಾಪಸ್‌ ಪಡೆದುಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು. 

ಕಂಬಳ, ಎತ್ತಿನ ಓಟ, ಎತ್ತಿನಗಾಡಿ ಓಟ ಸ್ಪರ್ಧೆಗೆ ಅವಕಾಶ ಮಾಡಿಕೊಡಲು  ಪ್ರಾಣಿಗಳಿಗೆ ಹಿಂಸಾಚಾರ ಮಾಡುವುದನ್ನು ತಡೆಗಟ್ಟುವ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಭವಿಷ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ಅಥವಾ ಸಂದರ್ಭಕ್ಕನುಸಾರವಾಗಿ ಮೂಲ ಕಾಯ್ದೆಯಲ್ಲಿ ಬದಲಾವಣೆ ಅಥವಾ ಮಾರ್ಪಾಡು ಮಾಡಬೇಕಾದ ಪ್ರಮೇಯ ಒದಗಿ ಬಂದಲ್ಲಿ ಅಧಿಸೂಚನೆ ಹೊರಡಿಸುವ ಮೂಲಕ ಮಾರ್ಪಾಡು ಅಥವಾ ಬದಲಾವಣೆ ಮಾಡುವ ಅಧಿಕಾರವನ್ನು ರಾಜ್ಯ ಸರಕಾರ ಇಟ್ಟುಕೊಳ್ಳುವ ಸಂಬಂಧ ಕಾಯ್ದೆಯ ಸೆಕ್ಷನ್‌ 3ರಲ್ಲಿ ಹೆಚ್ಚುವರಿ ಅಂಶವನ್ನು ಸೇರಿಸಲಾಗಿತ್ತು. ಆದರೆ, ರಾಷ್ಟ್ರಪತಿಯವರು ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಆದ್ದರಿಂದ ಹೆಚ್ಚುವರಿಯಾಗಿ ಸೇರಿಸಲಾಗಿದ್ದ ಅಂಶವನ್ನು ಕೈಬಿಡಲು ರಾಜ್ಯ ಸರಕಾರ ಒಪ್ಪಿದೆ.

ಅದರಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಯಚಂದ್ರ ತಿಳಿಸಿದರು. ರಾಷ್ಟ್ರಪತಿಯವರ ಸೂಚನೆ ಹಿನ್ನೆಲೆಯಲ್ಲಿ ಕಾಯ್ದೆಯ ಸೆಕ್ಷನ್‌ 3ರಲ್ಲಿ ಸೇರಿಸಲಾಗಿದ್ದ ಹೆಚ್ಚುವರಿ ಅಂಶವನ್ನು ಕೈಬಿಟ್ಟು ಪರಿಷ್ಕೃತ ಮಸೂದೆಯನ್ನು ಪುನಃ ರಾಷ್ಟ್ರಪತಿಯವರಿಗೆ ಕಳಿಸಿಕೊಡಲಾಗುವುದು. 

ರಾಷ್ಟ್ರಪತಿಯವರ ಅಂಕಿತದ ಬಳಿಕ ಕೇಂದ್ರ ಗೃಹ ಇಲಾಖೆಯ ಮೂಲಕ ಮಸೂದೆ ರಾಜ್ಯಪಾಲರಿಗೆ ಬರಲಿದೆ. ರಾಜ್ಯಪಾಲರಿಂದ ಅನುಮೋದನೆ ಪಡೆದ ಬಳಿಕ ಕಾಯ್ದೆ ಜಾರಿಗೆ ಬರಲಿದೆ. ಹೆಚ್ಚುವರಿಯಾಗಿ ಸೇರಿಸಲಾಗಿದ್ದ ಒಂದು ಅಂಶವನ್ನು ಮಾತ್ರ ಕೈಬಿಟ್ಟಿರುವುದರಿಂದ ಅದು ಕಾಯ್ದೆಗೆ ತಿದ್ದುಪಡಿ ಎಂದು ಪರಿಗಣಿಸಲಾಗುವುದಿಲ್ಲ. ಹಾಗಾಗಿ ಪುನಃ ಕಾಯ್ದೆಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸುವ ಅವಶ್ಯಕತೆ ಇರುವುದಿಲ್ಲ  ಎಂದು ಜಯಚಂದ್ರ ವಿವರಿಸಿದರು.

ಟಾಪ್ ನ್ಯೂಸ್

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಬೈಕ್‌ ಢಿಕ್ಕಿ: ಪಾದಚಾರಿ ಸಾವು

Mangaluru: ಬೈಕ್‌ ಢಿಕ್ಕಿ: ಪಾದಚಾರಿ ಸಾವು

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

hejjenu

Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.