ಕನ್ನಡ- ನೇಪಾಳಿ ಕವಿತೆ ಭಾಷಾಂತರ ಒಪ್ಪಂದ
Team Udayavani, May 6, 2017, 12:02 PM IST
ಬೆಂಗಳೂರು: ಕನ್ನಡದ 50 ಕವಿಗಳ 50 ಕವನಗಳನ್ನು ನೇಪಾಳಿ ಭಾಷೆಗೆ ಭಾಷಾಂತರಗೊಳಿಸುವ ಒಪ್ಪಂದವೊಂದಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೇಪಾಳಿ ಕಲಾ ಡಾಟ್ ಕಾಂ ಪ್ರತಿಷ್ಠಾನ ಗುರುವಾರ ಸಹಿ ಹಾಕಿವೆ.
ನೇಪಾಳಿಯಲ್ಲಿನ 50 ಕವಿತೆಗಳನ್ನು ಕನ್ನಡಕ್ಕೆ ಭಾಷಾಂತರಿಸುವುದು ಹಾಗೆಯೇ ಕನ್ನಡದ 50 ಕವಿಗಳ 50 ಕವನಗಳನ್ನು ನೇಪಾಳಿ ಣಭಾಷೆಗೆ ಅನುವಾದಿಸುವುದು ಈ ಒಪ್ಪಂದದ ಮುಖ್ಯ ಉದ್ದೇಶ. ಜತೆಗೆ ಪರಸ್ಪರ ದೇಶ, ರಾಜ್ಯಗಳ ಬರಹಗಾರರ ಸಾಹಿತ್ಯಗಳನ್ನು ಭಾಷಾಂತರಿಸಿ ಪ್ರಕಟಿಸಲು ಉಭಯತ್ರಯರು ಒಪ್ಪಿಗೆ ಸೂಚಿಸಿ ಒಪ್ಪಂದಕ್ಕೆ ಸಹಿ ಮಾಡಿದ್ದಾರೆ.
ಭಾಷಾ ಬೆಳವಣಿಗೆಗೆ ಹಾಗೂ ಸಾಹಿತ್ಯ, ಸಂಸ್ಕೃತಿಯನ್ನು ವಿದೇಶಗಳಲ್ಲೂ ಪ್ರಚಾರ ಮಾಡುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತು ಪ್ರಪ್ರಥಮವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಪ್ಪಂದಕ್ಕೆ ಸಹಿ ಮಾಡಿದೆ ಎಂದು ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿ ಈ ಬೆಳವಣಿಗೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.