ಪಕ್ಷದಲ್ಲಿ ಗೊಂದಲವಿಲ್ಲ, 150 ಸ್ಥಾನ ಗೆಲ್ಲುವುದೊಂದೇ ಗುರಿ: ಬಿಎಸ್
Team Udayavani, May 6, 2017, 12:46 PM IST
ಮೈಸೂರು: ನಮ್ಮ ಮುಂದಿರುವ ಗುರಿಯೊಂದೆ 150 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದ ರಾಜೇಂದ್ರ ಕಲಾಮಂದಿರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಪೂರ್ವ ಸಿದ್ಧತೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆ, ಮುಂದೆ ಸಾಗಬೇಕಾದ ಗುರಿಗಳ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗುವುದು.
ಕಳೆದ ಬಾರಿ ನಡೆದ ಕಾರ್ಯಕಾರಿಣಿ ಸಭೆಯ ತೀರ್ಮಾನದಂತೆ ಮೈಸೂರು ನಗರದಲ್ಲಿ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ. ಹಿಂದಿನ ಕಾರ್ಯಕಾರಿಣಿಗಿಂತಲೂ ಈ ಬಾರಿ ಅತ್ಯಂತ ಯಶಸ್ವಿಯಾಗಿ ಸಭೆ ನಡೆಯಲಿದೆ ಎಂದು ಅವರು ವಿಶ್ವಾಸವ್ಯಕ್ತಪಡಿಸಿದರು.
ರಾಜ್ಯದ ಸಂಸದರು, ಶಾಸಕರು, ರಾಜ್ಯಘಟಕದ ಪದಾಧಿಕಾರಿಗಳು, ವಿರೋಧ ಪಕ್ಷದ ಇಬ್ಬರೂ ನಾಯಕರು ಸೇರಿದಂತೆ ಕಾರ್ಯಕಾರಿಣಿ ಸದಸ್ಯರೆಲ್ಲÉರಿಗೂ ಆಹ್ವಾನ ನೀಡಲಾಗಿದೆ. ಈ ಬಾರಿ ಹಲವರನ್ನು ವಿಶೇಷ ಆಹ್ವಾನಿತರನ್ನಾಗಿ ಸೇರಿಸಿರುವುದರಿಂದ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರೂ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವೈಫಲ್ಯ ಕಂಡಿದೆ. ಈ ಸರ್ಕಾರದ ದುರಾಡಳಿತ, ವೈಫಲ್ಯಗಳ ಬಗ್ಗೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆಗಳ ಸಿದ್ಧಪಡಿಸಲಾಗುವುದು. ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೂರು ವರ್ಷದ ಆಡಳಿತದಲ್ಲಿ ಜಾರಿಗೆ ತಂದಿರುವ ಹಲವು ಜನಪರ ಕಾರ್ಯಕ್ರಮಗಳನ್ನು ಜನ ಸಾಮಾನ್ಯರಿಗೆ ತಲುಪಿಸಬೇಕಾಗಿದೆ.
ಅದಕ್ಕಾಗಿ ಯಾವ್ಯಾವ ರೀತಿಯಲ್ಲಿ ಯೋಜನೆ ರೂಪಿಸಬೇಕು ಎನ್ನುವುದರ ಕುರಿತು ಚರ್ಚೆ ನಡೆಯಲಿದೆ ಎಂದರು. ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ರಾಷ್ಟ್ರೀಯ ನಾಯಕರು ಕೊಟ್ಟಸೂಚನೆಯಂತೆ ಪಕ್ಷದ ಕೆಲಸ ಮಾಡುತ್ತೇವೆ. ಕಾರ್ಯಕಾರಿಣಿ ಯಶಸ್ವಿಯಾಗಿ ನಡೆದು ಉತ್ತಮ ನಿರ್ಣಯ ಕೈಗೊಂಡು ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.
ಈ ವೇಳೆ ಸಂಸದ ಪ್ರತಾಪ್ ಸಿಂಹ, ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ, ನಗರಾಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್, ವಿಭಾಗ ಪ್ರಭಾರಿ ಎಲ್.ನಾಗೇಂದ್ರ ಇನ್ನಿತರರು ಹಾಜರಿದ್ದರು.
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲದ ನಿರ್ವಹಣೆಯಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿನಿಮಾ ನೋಡುವುದು, ಹೋಟೆಲ್‌ಗಳಿಗೆ ಹೋಗಿ ಮಸಾಲೆ ದೋಸೆ ತಿನ್ನುವುದನ್ನೇ ಸಾಧನೆ ಎನ್ನುವಂತೆ ಬಿಂಬಿಸಿಕೊಳ್ಳುತ್ತಿದ್ದಾರೆ.
-ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.