ಜನಪರ ಕಾಳಜಿಯೇ ಶ್ರೀರಕ್ಷೆ: ಪ್ರಮೋದ್
Team Udayavani, May 7, 2017, 3:15 PM IST
ಕೊಡಂಕೂರು ವಾರ್ಡ್ ಮಟ್ಟದ ಜನಸಂಪರ್ಕ ಸಭೆ
ಉಡುಪಿ: ರಾಜ್ಯ ಸರಕಾರದ ಎರಡು ಖಾತೆಗಳ ಸಚಿವ ಸ್ಥಾನದ ಜವಾಬ್ದಾರಿ ಹೊತ್ತ ನನಗೆ ರಾಜ್ಯಾದ್ಯಂತ ಪ್ರವಾಸ ಮಾಡುವುದು ಅನಿವಾರ್ಯ. ಇದರ ನಡುವೆ ಉಡುಪಿ ವಿಧಾನಸಭಾ ಕ್ಷೇತ್ರದ ಜನತೆಯ ಸಮಸ್ಯೆಗೆ ವಿಶೇಷವಾಗಿ ಸ್ಪಂದಿಸಲೇಬೇಕೆನ್ನುವ ಸದುದ್ದೇಶದಿಂದ “ಜನಸಂಪರ್ಕ ಸಭೆ’ ಎನ್ನುವ ಜನೋಪಯೋಗಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇನೆ. ಈ ನೆಲೆಯಲ್ಲಿ ನಾನಿಟ್ಟ ಜನಪರ ಕಾಳಜಿಯೇ ನನಗೆ ಶ್ರೀರಕ್ಷೆಯಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಹನುಮಂತನಗರ ಪ್ರೌಢಶಾಲೆ ನಿಟ್ಟೂರಿನಲ್ಲಿ ಶನಿವಾರ ನಡೆದ ಉಡುಪಿ ನಗರಸಭೆ ವ್ಯಾಪ್ತಿಯ ಕೊಡಂಕೂರು ವಾರ್ಡ್ ಮಟ್ಟದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಿದ್ದರಾಮಯ್ಯ ನೇತೃತ್ವದ ಸರಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನರ ಪ್ರೀತಿಗೆ ಪಾತ್ರವಾಗಿದ್ದು, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ವಿವಿಧ ಇಲಾಖೆಗಳ ಅನುದಾನದಿಂದ 1,769 ಕೋ.ರೂ. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆಗೆ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ 320 ಕೋ.ರೂ., ನಗರೋತ್ಥಾನ ಕಾರ್ಯಕ್ಕೆ 35 ಕೋ.ರೂ. ಮಂಜೂರಾಗಿದೆ. ರಾಜ್ಯದಲ್ಲಿ ದಿನದ 24 ಗಂಟೆಯೂ ವಿದ್ಯುತ್ ಇರುವ ಏಕೈಕ ಕ್ಷೇತ್ರವಿದ್ದರೆ ಅದು ಉಡುಪಿ ಕ್ಷೇತ್ರದಲ್ಲಿ ಮಾತ್ರ. ಪ್ರಾಮಾಣಿಕ, ಸ್ವತ್ಛ, ಶುದ್ಧ ಹಸ್ತದಿಂದ ಜನರ ಸೇವೆ ಮಾಡಲು ಸದಾ ಬದ್ಧ ಎಂದರು.
ಫಲಾನುಭವಿಗಳಿಗೆ ಸವಲತ್ತು ವಿತರಣೆ ಇದೇ ಸಂದರ್ಭ ಸಚಿವರು ಅರ್ಹ ಫಲಾನುಭವಿಗಳಿಗೆ ವಿವಿಧ ಪಿಂಚಣಿ, ಸವಲತ್ತು, ಸೌಲಭ್ಯಗಳನ್ನು ವಿತರಿಸಿದರು. ಗ್ರಾಮಸ್ಥರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದ ಸಚಿವರು ಬಹುತೇಕ ಅರ್ಜಿಗಳಿಗೆ ವಿವಿಧ ಇಲಾಖಾಧಿಕಾರಿಗಳ ಮುಖಾಂತರ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.
ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಕೆಡಿಪಿ ಜಿಲ್ಲಾ ಸದಸ್ಯ ಉಮೇಶ್ ನಾಯ್ಕ, ಕೊಡಂಕೂರು ವಾರ್ಡ್ ಸದಸ್ಯೆ ಜಾನಕಿ ಗಣಪತಿ ಶೆಟ್ಟಿಗಾರ್, ನಗರಸಭೆ ಸದಸ್ಯ ಜನಾರ್ದನ್ ಭಂಡಾರ್ಕರ್, ನಗರಸಭೆ ಮಾಜಿ ಸದಸ್ಯ ಗಣಪತಿ ಶೆಟ್ಟಿಗಾರ್, ಆರ್ಟಿಒ ಗುರುಮೂರ್ತಿ ಕುಲಕರ್ಣಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ದನ್, ಡಿವೈಎಸ್ಪಿ ಎಸ್.ಜೆ. ಕುಮಾರಸ್ವಾಮಿ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ನಗರಸಭೆ ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿ ಪ್ರಸ್ತಾವನೆಗೈದರು. ಸುಧಾಕರ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ ವಂದಿಸಿದರು.
ಜನರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದನೆ
ಒಟ್ಟು 65 ಜನಸಂಪರ್ಕ ಸಭೆಗಳನ್ನು ಅಕ್ಟೋಬರ್ ತಿಂಗಳೊಳಗೆ ಪೂರೈಸುವ ಗುರಿ ಹೊಂದಿದ್ದು,ಸಭೆಯ ಮೂಲಕ ಜನರ ಬಹುತೇಕ ಸಂಕಷ್ಟಗಳನ್ನು ಬಗೆಹರಿಸುವ ಪಣ ತೊಟ್ಟಿದ್ದೇನೆ. 800ರೂ. ಮಿತಿಯೊಳಗಿನ ವಿದ್ಯುತ್ ಬಿಲ್ ಪಾವತಿಸುವವರು ಬಿಪಿಎಲ್ ಕಾರ್ಡ್ ಪಡೆದು ಸರಕಾರದಿಂದ ಸಿಗುವ ಹಲವಾರು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಹೊಸ ಮನೆ ರಚಿಸುವ ಪ.ಜಾತಿ/ಪ.ಪಂ.ದವರಿಗೆ 3.30 ಲ.ರೂ. ಇತರ ವರ್ಗದವರಿಗೆ 2.70 ಲ.ರೂ. ಅನುದಾನವನ್ನು ನೀಡಲಾಗುವುದು. ಇದರ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲೆಯ ಗ್ರಾಮಾಂತರ ಭಾಗಗಳಿಗೆ 55 ನರ್ಮ್ ಬಸ್ಗಳಿಗೆ ಪರ್ಮಿಟ್ ದೊರಕಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.