ಜನಪ್ರತಿನಿಧಿಗಳೇ ನೋಡಿ ಸ್ವಚ್ಛತೆಯಿಲ್ಲದ ಶಹಾಬಾದ


Team Udayavani, May 7, 2017, 3:50 PM IST

gul5.jpg

ಶಹಾಬಾದ: ನಗರದ ರಸ್ತೆಯ ಪಕ್ಕದಲ್ಲೆಡೆ ಕಸದ ರಾಶಿ, ಆ ಕಸದಲ್ಲಿಯೇ ಓಡಾಡುವ ಹಂದಿ, ನಾಯಿ, ದನಗಳ ದಂಡು. ಕಸದಿಂದ ತುಂಬಿಕೊಂಡಿರುವ ಚರಂಡಿ. ಸ್ವಚ್ಛತೆಯಿಲ್ಲದೇ ದಿನನಿತ್ಯ ಸಾರ್ವಜನಿಕರ ಶಾಪಕ್ಕೆ ಗುರಿಯಾಗುವ ನಗರಸಭೆ ಅಧಿಕಾರಿಗಳು.

ಇದು ಶಹಾಬಾದ ನಗರಸಭೆ ವ್ಯಾಪ್ತಿಯಲ್ಲಿ ಕಂಡು ಬರುವ ದೃಶ್ಯ. ನಗರದ ಬಹುತೇಕ ಬಡಾವಣೆಗಳಲ್ಲಿ ಎಲ್ಲೆಂದರಲ್ಲಿ ಕಸ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರೂ ಕೇಳುವರು ಇಲ್ಲದಂತಾಗಿದೆ. ಬೀದಿ ವ್ಯಾಪಾರಿಗಳು, ಹೋಟೆಲ್‌,ಲಾಡ್ಜ್ ಹಾಗೂ ಕಲ್ಯಾಣಮಂಟಪದವರು ಕಸವನ್ನು ಮನಬಂದಂತೆ ರಸ್ತೆ ಮೇಲೆ ಎಸೆಯುತ್ತಿದ್ದಾರೆ. 

ಕಸ ಸಂಗ್ರಹಣ ತೊಟ್ಟಿ ಸುತ್ತಮುತ್ತ ಸಾಕಷ್ಟು ಕಸ ಜಮಾವಣೆಗೊಂಡಿದ್ದರೂ ಕಸ ವಿಲೇವಾರಿ ಮಾಡುವಲ್ಲಿ ನಗರಸಭೆ ಮುಂದಾಗುತ್ತಿಲ್ಲ. ಎರಡು ದಿನಗಳ ಹಿಂದಷ್ಟೇ ಸುರಿದ ಮಳೆ ನೀರಿನಿಂದ ಕಸ ಕೊಳೆತು ದುರ್ನಾತ ಬೀರುತ್ತಿದ್ದು, ರೋಗಗಳಿಗೆ ಆಹ್ವಾನ ನೀಡಿದಂತಾಗಿದೆ.

ಸಾರ್ವಜನಿಕರು, ಪ್ರಯಾಣಿಕರು ನಿತ್ಯ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾದರೂ ಅಧಿಕಾರಿಗಳು ಮಾತ್ರ ಕಸದ ವಿಲೇವಾರಿ ಸಮರ್ಪಕ ರೀತಿಯಲ್ಲಿ ಮಾಡುತ್ತಿಲ್ಲ. ಇದರಿಂದ ನಗರದ ಅಂದ ಹಾಳಾಗುತ್ತಿದೆ. ಸ್ವಚ್ಛತೆ ಎಂಬುದು ಮಾಯವಾಗುತ್ತಿದೆ. 

ಒಮ್ಮೆ ನಗರದ ಚಿತ್ರಣ ನೋಡಿದರೆ ಇದು ಅನೈರ್ಮಲ್ಯದಿಂದ ಕೂಡಿದ ನಗರ ಎಂದು ನಂ.1 ಸ್ಥಾನ ಸಿಗುವ ದಿನಗಳು ದೂರವಿಲ್ಲವೆಂದೇ ಹೇಳಬಹುದು. ಹಂದಿಗಳು ಎಲ್ಲೆಂದರಲ್ಲಿ ಸ್ವೆಚ್ಛಾನುಸಾರ ಓಡಾಡಿಕೊಂಡಿವೆ. ಬೀಡಾಡಿ ದನಗಳು ಕಸದ ತೊಟ್ಟಿಯಲ್ಲಿ ಕಂಡ ಆಹಾರಕ್ಕಾಗಿ ಹಂದಿಗಳೊಂದಿಗೆ ಪೈಪೋಟಿಗಿಳಿದಿವೆ. 

ಇದರಿಂದ ನಗರದ ತುಂಬೆಲ್ಲಾ ಕಸ ಹರಡಿ ನಗರದ ಅಂದಕ್ಕೆ ಮಸಿ ಬಳಿಯುತ್ತಿದೆ. ಅಲ್ಲದೇ ಕಸದ ತೊಟ್ಟಿ ತುಂಬಿ ತುಳುಕಿ ಹೆಚ್ಚಾದ ಕಸ ಚರಂಡಿಯಲ್ಲಿ ಹೋಗಿ ಬೀಳುತ್ತಿದೆ. ಪ್ಲಾಸ್ಟಿಕ್‌ ತ್ಯಾಜ್ಯ ವಸ್ತುಗಳು ಸಂಗ್ರಹವಾಗಿ ಚರಂಡಿ ನೀರು ಸರಾಗವಾಗಿ ಹರಿಯದೇ ಜಮಾವಣೆಗೊಂಡು ದುರ್ವಾಸನೆ ಬೀರುತ್ತಿದೆ.

ಸೊಳ್ಳೆಗಳ ಸಂಖ್ಯೆ ಹೆಚ್ಚಾಗಿ ಮಲೇರಿಯಾ ರೋಗ ಕಾಣಿಸಿಕೊಳ್ಳುತ್ತಿದೆ. ಜಮಾವಣೆಗೊಂಡ ಕೊಳಚೆ ನೀರಿನಿಂದ ಇಲ್ಲಿನ ಜನರು ನಿತ್ಯ ನರಕಯಾತನೆ ಪಡುವಂಥಾಗಿದೆ.

* ಮಲ್ಲಿನಾಥ ಜಿ.ಪಾಟೀಲ

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.