ಏಶ್ಯನ್ ಶೇರು ಪೇಟೆ ತೇಜಿ: ಮುಂಬಯಿ ಶೇರು ಪೇಟೆ 118 ಅಂಕ ಜಿಗಿತ
Team Udayavani, May 8, 2017, 10:58 AM IST
ಮುಂಬಯಿ : ಏಶ್ಯನ್ ಶೇರು ಮಾರಕಟ್ಟೆಗಳಲ್ಲಿ ದೃಢತೆಯ ಪ್ರವೃತ್ತಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 78 ಅಂಕಗಳ ಉತ್ತಮ ಏರಿಕೆಯನ್ನು ಕಂಡಿತು. ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9,300 ಅಂಕಗಳ ಗಡಿಯನ್ನು ದಾಟಿತು.
ಕಳೆದ ಶುಕ್ರವಾರ ಸೆನ್ಸೆಕ್ಸ್ 267.41 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಇಂದು ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಹೊಸ ಉತ್ತೇಜನ ತೋರಿಬಂದದ್ದೇ ಮುಂಬಯಿ ಶೇರು ಪೇಟೆಯ ಪುನಶ್ಚೇತನಕ್ಕೆ ಕಾರಣವಾಯಿತು.
ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 118.97 ಅಂಕಗಳ ಏರಿಕೆಯನ್ನು ಕಂಡು 29,977.77 ಅಂಕಗಳ ಮಟ್ಟದಲ್ಲೂ, ನಿಫ್ಟಿ 42.70 ಅಂಕಗಳ ಮುನ್ನಡೆಯನ್ನು ಕಂಡು 9,328.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಹೆಚ್ಚು ಕ್ರಿಯಾಶೀಲವಾಗಿದ್ದ ಶೇರುಗಳೆಂದರೆ ಅಂಬುಜಾ ಸಿಮೆಂಟ್ಸ್, ಐಸಿಐಸಿಐ ಬ್ಯಾಂಕ್, ರಿಲಯನ್ಸ್, ಎಸಿಸಿ, ಎಸ್ಬಿಐ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.