ಭಾರತದ ತಿರುಗೇಟು; 60 ಸೆಕೆಂಡ್ಸ್ ನಲ್ಲಿ ಪಾಕ್ ಬಂಕರ್ ಉಡೀಸ್! watch
Team Udayavani, May 8, 2017, 11:33 AM IST
ನವದೆಹಲಿ: ಕಳೆದ ವಾರ ಭಾರತದ ಇಬ್ಬರು ಸೈನಿಕರನ್ನು ಹತ್ಯೆಗೈದು ದೇಹವನ್ನು ವಿರೂಪಗೊಳಿಸಿದ್ದ ಪಾಕಿಸ್ತಾನಕ್ಕೆ ತಕ್ಕ ಪಾಠ ಎಂಬಂತೆ ಪಾಕಿಸ್ತಾನದ ಗಡಿಭಾಗದಲ್ಲಿದ್ದ 2 ಬಂಕರ್ ಗಳನ್ನು ಮಿಸೈಲ್ ದಾಳಿ ನಡೆಸಿ ಭಾರತೀಯ ಮಿಲಿಟರಿ ಪಡೆ ಚಿಂದಿ ಉಡಾಯಿಸಿರುವ ಘಟನೆ ಸೋಮವಾರ ನಡೆದಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಇಂಡಿಯಾ ಟುಡೇಗೆ ಲಭ್ಯವಾಗಿರುವ ಎಕ್ಸ್ ಕ್ಲೂಸಿವ್ ವಿಡಿಯೋ ಫೂಟೇಜ್ ಪ್ರಸಾರ ಮಾಡಿದೆ. ಜಮ್ಮು ಕಾಶ್ಮೀರ ಸಮೀಪದ ಪೂಂಚ್ ಜಿಲ್ಲೆಯ ಕೃಷ್ಣಾ ಘಾಟಿ ಸೆಕ್ಟರ್ ನಿಂದ ಗಡಿಭಾಗದಲ್ಲಿದ್ದ ಪಾಕಿಸ್ತಾನದ ಬಂಕರ್ ಮೇಲೆ ಮಿಸೈಲ್ ದಾಳಿ ನಡೆಸಿ 60 ಸೆಕೆಂಡ್ ನೊಳಗೆ ನಾಶ ಮಾಡಿರುವುದಾಗಿ ವರದಿ ವಿವರಿಸಿದೆ.
ಮಿಸೈಲ್ ದಾಳಿ ಯಶಸ್ವಿಯಾಗಿರುವುದಾಗಿ ಭಾರತದ ಯೋಧರು ಸಂತಸವ್ಯಕ್ತಪಡಿಸಿದ್ದಾರೆ. ಸರ್…ನಮ್ಮ ಮಿಸೈಲ್ ಗುರಿ ತಲುಪಿದೆ. ನಾವು ಬಂಕರ್ ಅನ್ನು ನಾಶ ಮಾಡಿದ್ದೇವೆ ಎಂದು ಯೋಧರೊಬ್ಬರು ಹೇಳುತ್ತಿರುವ ಧ್ವನಿ ವಿಡಿಯೋದಲ್ಲಿ ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಟ್ಯಾಂಕ್ ನಿರೋಧಕ ಮಿಸೈಲ್ ಬಳಸಿ ಪಾಕಿಸ್ತಾನದ ಬಂಕರ್ ನಾಶ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ. ಇದು ಕಳೆದ ತಿಂಗಳು ನಡೆದ ಘಟನೆಯಾಗಿದ್ದು, ಯಾವ ಪ್ರದೇಶ ಎಂದು ನಿಖರವಾಗಿ ತಿಳಿದು ಬಂದಿಲ್ಲ ಎಂದು ಹೇಳಿದೆ. ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡುವ ನಿಟ್ಟಿನಲ್ಲಿ ಪಾಕ್ ಬಂಕರ್ ಮೇಲೆ ದಾಳಿ ನಡೆಸಿರುವ ವಿಡಿಯೋ ಇದಾಗಿದೆ ಎಂದು ವರದಿಯಾಗಿದೆ.
Indian Sikh Regiment destroys Pakistani bunkers at the LOC. @adgpi @SpokespersonMoD @danvir_chauhan @ID_Report @iitmweb pic.twitter.com/YNOmpmMRv5
— Ashutosh Bhatia (@ashutitikshu) May 8, 2017
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.