ಕುಂದಾಪುರ: ಬಿಸಿಲ ತಾಪಕ್ಕೆ ಇನ್ನೋರ್ವ ಬಲಿ
Team Udayavani, May 8, 2017, 11:46 AM IST
ಕುಂದಾಪುರ: ತಾಲೂಕಿನಲ್ಲಿ ಬಿಸಿಲಿನ ಝಳ ದಿನದಿಂದ ದಿನಕ್ಕೆ ಏರುತ್ತಿದ್ದು. ಶನಿವಾರ ವ್ಯಕ್ತಿಯೋರ್ವರು ಬಿಸಿಲ ತಾಪದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಇದರೊಂದಿಗೆ ಕುಂದಾಪುರ ತಾಲೂಕಿನಲ್ಲಿ ತಿಂಗಳ ಅವಧಿಯಲ್ಲಿ ಬಿಸಿಲ ಝಳಕ್ಕೆ ಬಲಿಯಾದವರ ಸಂಖ್ಯೆ ಮೂರಕ್ಕೇರಿದೆ. ತಲ್ಲೂರು ಗ್ರಾಮದ ಕೋಟೆಬಾಗಿಲು ನಿವಾಸಿ ಕೃಷಿ ಕೂಲಿ ಕಾರ್ಮಿಕ ತಿಮ್ಮ (33) ಅವರು ಕೆಲಸ ನಿರ್ವಹಿಸುತ್ತಿದ್ದಾಗ ಬಿಸಿಲಿನ ತಾಪಕ್ಕೆ ತೀವ್ರ ಅಸ್ವಸ್ಥಗೊಂಡು ಮೃತಪಟ್ಟರು. ಎ. 3ರಂದು ಮರವಂತೆಯಲ್ಲಿ ದನ ಮೇಯಿಸಲು ತೆರಳಿದ್ದ ಕೃಷ್ಣ ದೇವಾಡಿಗ ಮತ್ತು ಎ. 9ರಂದು ಅಂಪಾರು ಗ್ರಾಮದ ಹಡಾಳಿ ಕೊಟ್ಟಿಗೆ ಮನೆ ನಿವಾಸಿ ವಸಂತ ಶೆಟ್ಟಿ ಅವರು ಗದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿರುವಾಗ ಬಿಸಿಲ ತಾಪಕ್ಕೆ ಮೃತಪಟ್ಟಿದ್ದರು.
ತಿಮ್ಮ ಅವರು ಶನಿವಾರ ಉಪ್ಪಿನಕುದ್ರು ಬಾಬು ಶೆಟ್ಟಿ ಅವರ ಜತೆಯಲ್ಲಿ ಕೂಲಿ ಕೆಲಸಕ್ಕೆಂದು ಹೋಗಿದ್ದು, ಮಧ್ಯಾಹ್ನದ ವೇಳೆ ಕೆಲಸದಲ್ಲಿದ್ದಾಗಲೇ ತೀವ್ರ ಅಸ್ವಸ್ಥಗೊಂಡು ಕುಸಿದರು. ತತ್‌ಕ್ಷಣ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ತಾಲೂಕಿನಲ್ಲಿ ತಾಪಮಾನ 37 ಡಿಗ್ರಿ ಸೆಲ್ಷಿಯಸ್‌ಗೆ ಏರಿರುವುದು ದಾಖಲೆಯಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 40 ಡಿಗ್ರಿ ಸೆ.ಗೇರಿದಾಗ ಸಾವುಗಳು ಸಂಭವಿಸಿದ ದಾಖಲೆ ಇದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಈ ಪರಿಸ್ಥಿತಿ ಕಳೆದ ವರ್ಷದ ತನಕ ಕಂಡು ಬಂದಿಲ್ಲ. ಆದರೆ ಕುಂದಾಪುರ ತಾಲೂಕಿನಲ್ಲಿ ಈ ಬಾರಿ ಮೂವರು ಬಿಸಿಲ ತಾಪಕ್ಕೆ ಮೃತಪಟ್ಟಿದ್ದಾರೆ ಎಂದು ಇಲಾಖೆ ವರದಿ ಮಾಡಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.