ಸರ್ಕಾರಿ ಪ್ರಾಧ್ಯಾಪಕರ ವಿದೇಶಿ ಪ್ರವಾಸಕ್ಕೆ ನಿಯಮಾವಳಿ ಕಠಿಣ


Team Udayavani, May 9, 2017, 3:45 AM IST

college-08.jpg

ಬೆಂಗಳೂರು : ಸರ್ಕಾರಿ ಕಾಲೇಜಿನ ಉಪನ್ಯಾಸಕರು, ಪ್ರಾಧ್ಯಾಪಕರು ಶೈಕ್ಷಣಿಕ ಸಂಬಂಧಿತ ವಿದೇಶಿ ಪ್ರವಾಸಕ್ಕೆ ತೆರಳುವ ಮುನ್ನ ಸರ್ಕಾರದ ಅನುಮತಿ ಪಡೆಯುವುದರ ಜತೆಗೆ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಂಡಿದ್ದರೂ, ಉಳಿತಾಯ ಖಾತೆಯ ವಿವರ ಹಾಗೂ ಮೂರು ವರ್ಷದ ಆಸ್ತಿ ಹೊಣೆಗಾರಿಕೆ ಪಟ್ಟಿಯನ್ನು ಕಡ್ಡಾಯವಾಗಿ ಸರ್ಕಾರಕ್ಕೆ ಸಲ್ಲಿಸಬೇಕು.

ಸರಕಾರಿ,ಅನುದಾನಿತ ಕಾಲೇಜುಗಳ ಈಪ್ರಾಂಶುಪಾಲರು, ಪ್ರಾಧ್ಯಾಪಕರು, ಉಪನ್ಯಾಸಕರು ಹಾಗು ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರುಗಳು ಶೈಕ್ಷಣಿಕ ಉದ್ದೇಶದ  ವಿದೇಶ ಪ್ರವಾಸ ಕೈಗೊಳ್ಳುವುದಕ್ಕೆ ಇರುವ ಕಾನೂನು-ಕಟ್ಟಳೆಗಳನ್ನ ಮತ್ತಷ್ಟು ಕಠಿಣಗೊಳಿಸಿ ರಾಜ್ಯ ಸರಕಾರ ಮೂಗುದಾರ ಹಾಕಿದೆ.

ವಿದೇಶ ಪ್ರವಾಸ ಕೈಗೊಳ್ಳುವವರು ಸರಕಾರಕ್ಕೆ ಹಲವಾರು ಮಾಹಿತಿ ಮುಚ್ಚಿಟ್ಟು ಅಪೂರ್ಣ ಮಾಹಿತಿ ನೀಡಿ ಸರಕಾರ,ಕಾಲೇಜು ಆಡಳಿತ ಮಂಡಳಿಗಳನ್ನ ಹಲವಾರು ಮಾಹಿತಿಗಳಿಂದ ಕತ್ತಲೆಯಲ್ಲಿಡುತ್ತಿದ್ದುದರಿಂದ ವಿದೇಶ ಪ್ರವಾಸದ ನಿಯಮಾವಳಿಗಳನ್ನ ಸರಕಾರ ಬಿಗಿಗೊಳಿಸಿದೆ.

ರಾಜು ಖಾರ್ವಿ ಕೊಡೇರಿ ಸರ್ಕಾರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ ಸಿಬ್ಬಂದಿ ವಿದೇಶದಲ್ಲಿ ನಡೆಯುವ ಅಂತಾರಾಷ್ಟ್ರೀಯ ಸಮ್ಮೇಳನ, ವಿಚಾರ ಸಂಕಿರಣ, ಕಾರ್ಯಾಗಾರ ಅಥವಾ ಸಮಾರಂಭ ಮೊದಲಾದ ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಗೂ ಪ್ರಬಂಧ ಮಂಡನೆಗೆ ವಿದೇಶ ಪ್ರವಾಸ ಮಾಡಲು ಪ್ರಾಧ್ಯಾಪಕರಿಂದ ಇಲಾಖೆಗೆ ಬರುವ ಪ್ರಸ್ತಾವನೆಯನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು ಕಡ್ಡಾಯವಾಗಿ ದ್ವಿ-ಪ್ರತಿಯಲ್ಲಿ ಪಡೆಯಬೇಕು. ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಒಂದು ತಿಂಗಳು ಮುಂಚಿತವಾಗಿಯೇ ಸಲ್ಲಿಸಿ ಅನುಮತಿ ಪಡೆಯುವಂತೆ ನಿರ್ದೇಶಿಸಿದೆ.

ಪ್ರಾಧ್ಯಾಪಕರಿಗೆ ಸೂಚನೆ :
ವಿದೇಶದಲ್ಲಿ ನಡೆಯುವ ಶೈಕ್ಷಣಿಕ ಸಂಬಂಧಿ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಅಥವಾ ಆಹ್ವಾನಿಸಿರುವ ಬಗ್ಗೆ ಸಂಬಂಧಪಟ್ಟ ಸಂಸ್ಥೆಯ ಅಧಿಸೂಚನೆ, ಆದೇಶದ ಪ್ರತಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಯಾವ ದೇಶಕ್ಕೆ ಪ್ರಯಾಣ, ಹೊರಡುವ ದಿನಾಂಕ, ನಿರ್ಧಿಷ್ಟ ಸ್ಥಳ ಹಾಗೂ ಹಿಂದಿರುಗುವ ದಿನಾಂಕ ಸೇರಿದಂತೆ ಎಷ್ಟು ದಿನದ ಪ್ರವಾಸ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖೀಸಬೇಕು. ವಿದೇಶಕ್ಕೆ ಹೊರಡುವ ಬೋಧಕ ಸಿಬ್ಬಂದಿ ಯಾವ ರಜೆಯನ್ನು ಬಳಸಿಕೊಂಡಿದ್ದಾರೆ ಮತ್ತು ಅವರ ಹಕ್ಕಿನಲ್ಲಿರುವ ರಜೆಯ ವಿವರ ಕಡ್ಡಾಯವಾಗಿ ನೀಡಲು ಸೂಚಿಸಿದೆ.

ಖಾತೆಯ ವಿವರ :
ಪ್ರಾಧ್ಯಾಪಕರು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗಹಿಸಲು ತಗಲುವ ಒಟ್ಟು ವೆಚ್ಚ ಹಾಗೂ ಈ ವೆಚ್ಚ ಭರಿಸುವ ವಿಧಾನದ ಬಗ್ಗೆ ಮಾಹಿತಿ ಒದಗಿಸಿ, ಸ್ವಂತ ಖರ್ಚಿನಲ್ಲಿ ವಿದೇಶಿ ಪ್ರಯಾಣ ಕೈಗೊಂಡಿದ್ದಲ್ಲಿ ಉಳಿತಾಯ ಖಾತೆಯ ವಿವರ ಹಾಗೂ ಮೂರು ವರ್ಷದ ಆಸ್ತಿ ಹೊಣೆಗಾರಿಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿ, ನಂತರವೇ ಪ್ರವಾಸ ಮುಂದುವರಿಸಬೇಕು ಎಂಬ ಕಟ್ಟಪ್ಪಣೆ ಮಾಡಿದೆ.

ವಿದೇಶಕ್ಕೆ ತೆರಳಿದ ಪ್ರಾಧ್ಯಾಪಕರ ವಿದೇಶಿ ವಾಸ್ತವ್ಯದ ವಿಳಾಸ, ಪಾಸ್‌ಪೋರ್ಟ್‌ ದೃಢೀಕೃತ ಪ್ರತಿ, ಸೇವಾ ಪೂರ್ವ ಅವಧಿ ಘೋಷಣಾ ಆದೇಶ ಪ್ರತಿಯ ಜತೆಗೆ ಪ್ರಾಧ್ಯಾಪಕ ವಿದೇಶದಲ್ಲಿ ಮಂಡಿಸಿದ ಪ್ರಬಂಧದ ವಿಷಯ ಹಾಗೂ ಆ ಪ್ರಬಂಧ ಕಾಲೇಜಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅನುಕೂಲವಾಗಿದೆಯೇ ಎಂಬ ಬಗ್ಗೆ ಪ್ರಾಂಶುಪಾಲರಿಂದ ಅಧಿಕೃತ ಶಿಫಾರಸ್ಸು ಪಡೆಯಲೇ ಬೇಕು.

ಪರ್ಯಾಯ ವ್ಯವಸ್ಥೆ ಅಗತ್ಯ :
ವಿದೇಶ ಪ್ರವಾಸ ಮಾಡುವ ಸಂದರ್ಭದಲ್ಲಿ ಕಾಲೇಜಿನ ದೈನಂದಿನ ಚಟುವಟಿಕೆ, ಪಾಠಪ್ರವಚನ, ಪರೀಕ್ಷಾ ಹಾಗೂ ಕಚೇರಿ ಕೆಲಸ ಇತ್ಯಾದಿಗೆ ಕುಂದುಂಟಾಗದಂತೆ ಪರ್ಯಾಯ ವ್ಯವಸ್ಥೆಯಾಗಿರುವ ಬಗ್ಗೆ ಪ್ರಾಂಶುಪಾಲರು ಷರಾ ನೀಡಬೇಕು. ಸಂಬಂಧಪಟ್ಟ ಪ್ರಾಧ್ಯಾಪಕರಿಂದಲೂ ಸ್ವಯಂ ದೃಢೀಕರಣ ಇರಬೇಕು. 

ವಿಶ್ವವಿದ್ಯಾಲಯದಿಂದಲೂ ವಿನಾಯತಿ ಪತ್ರ ಪಡೆಯುವುದರ ಜತೆಗೆ ವಿದೇಶಕ್ಕೆ ಹೋದ ಸಂದರ್ಭದಲ್ಲಿ ರಾಜೀನಾಮೆ ನೀಡುವುದಿಲ್ಲ, ಅನುಮತಿ ಪಡೆದ ಅವಧಿಗಿಂತ ಅಧಿಕಾಲ ಅಲ್ಲಿಯೇ ಉಳಿಯುವುದಿಲ್ಲ ಹಾಗೂ ರಜೆಯನ್ನು ಮುಂದುವರಿಸುವುದಿಲ್ಲ ಎಂಬ ಬಗ್ಗೆಯೂ ಸ್ವಯಂ ದೃಢೀಕರಣ ನೀಡಲೇ ಬೇಕು ಎಂಬ ನಿಯಮ ಸರ್ಕಾರ ರೂಪಿಸಿದೆ.

ವಿದೇಶಕ್ಕೆ ಹೊರಡುವ ಪ್ರಾಧ್ಯಾಪಕರ ಮೇಲೆ ಯಾವುದೇ ಪೇಬಾಕಿ ಅಥವಾ ಇಲಾಖೆ ವಿಚಾರಣೆ, ನ್ಯಾಯಾಂಗ ತನಿಖೆ, ಕ್ರಿಮಿನಲ್‌ ಮೊಕದ್ದಮೆ ಇರುವುದಿಲ್ಲ ಎಂಬ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರು ದೃಢೀಕರಿಸಿದ ನಂತರವೇ ವಿದೇಶಕ್ಕೆ ಹಾರಲು ಅನುಮತಿ ನೀಡಲಾಗುತ್ತದೆ.

ಸರ್ಕಾರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು, ಪ್ರಾಧ್ಯಾಪಕರು ಯಾವ ಉದ್ದೇಶಕ್ಕಾಗಿ ವಿದೇಶ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಅದರ ಖರ್ಚು, ವೆಚ್ಚದ ಬಗ್ಗೆ ಇಲಾಖೆ ಅಥವಾ ಸರ್ಕಾರಕ್ಕೆ ಅಪೂರ್ಣ ಮಾಹಿತಿ ಬರುತ್ತಿದ್ದು, ಪ್ರಾಧ್ಯಾಪಕರ ಪ್ರವಾಸದ ಸ್ಪಷ್ಟ ಮಾಹಿತಿಯ ಜತೆಗೆ ಯಾವುದೇ ಗೊಂದಲಕ್ಕೂ ಅವಕಾಶ ನೀಡದ ರೀತಿಯಲ್ಲಿ ನಿಯಮ ರೂಪಿಸಲಾಗಿದೆ.
– ಎಂ.ಶಿಲ್ಪ, ಪ್ರಭಾರ ನಿರ್ದೇಶಕಿ, ಕಾಲೇಜು ಶಿಕ್ಷಣ ಇಲಾಖೆ

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.