ನನ್ನ ಭಾವ ಇನ್ನಿಲ್ಲ,ಮಿಶ್ರಾ ಓರ್ವ ಮೂರ್ಖ:ಕೇಜ್ರಿ ಪತ್ನಿ ಆಕ್ರೋಶ
Team Udayavani, May 9, 2017, 9:59 AM IST
ಹೊಸದಿಲ್ಲಿ :ಜಮೀನು ಖರೀದಿ ಡೀಲ್ಗೆ 50 ಕೋಟಿ ರೂ.ನಿಗದಿಗೊಳಿಸ ಲಾಗಿತ್ತು ಎಂದು ಮಾಜಿ ಸಚಿವ ಕಪಿಲ್ ಮಿಶ್ರಾ ಆರೋಪಿಸಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ರ ಭಾವ ಸುರೀಂದರ್ ಕುಮಾರ್ ಬನ್ಸಾಲ್ ನಿಧನ ಹೊಂದಿರುವುದಾಗಿ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮಂಗಳವಾರ ಟ್ವೀಟ್ ಮಾಡಿದ್ದಾರೆ.
ಟ್ವೀಟ್ನಲ್ಲಿ ಆಪ್ನಿಂದ ಉಚ್ಚಾಟನೆಗೊಂಡಿರುವ ಕಪಿಲ್ ಮಿಶ್ರಾ ವಿರುದ್ಧ ಆಕ್ರೋಶ ಹೊರ ಹಾಕಿರುವ ಸುನಿತಾ ‘ನನ್ನ ಭಾವ ನಿಧನ ಹೊಂದಿದ್ದಾರೆ. ಮೂರ್ಖನಾಗಿರುವ ಮಿಶ್ರಾ ಯಾವುದೇ ಆಧಾರವಿಲ್ಲದೆ ಬರೆದುಕೊಟ್ಟ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.
ಸುರೀಂದರ್ ಕುಮಾರ್ ಬನ್ಸಾಲ್ ಅವರು ಅಧಿಕ ಮಧುಮೇಹದಿಂದ ಗುರ್ಗಾಂವ್ನ ಅಸ್ಪತ್ರೆಯಲ್ಲಿ ನಿಧನ ಹೊಂದಿರುವುದಾಗಿ ಮೂಲಗಳು ತಿಳಿಸಿವೆ.
ದಿಲ್ಲಿಯ ಆರೋಗ್ಯ ಸತ್ಯೇಂದ್ರ ಜೈನ್ ಸಿಎಂ ಕೇಜ್ರಿವಾಲ್ರ ಬಂಧು ಬನ್ಸಾಲ್ ಖರೀದಿಸಿಲು ಉದ್ದೇಶಿಸಿದ್ದ ಏಳು ಎಕರೆ ಜಮೀನು ವಹಿವಾಟನ್ನು ಇತ್ಯರ್ಥಪಡಿಸಲು 50 ಕೋಟಿ ರೂ. ಮೊತ್ತ ನಿಗದಿ ಮಾಡಿದ್ದರೆಂದು ಮಿಶ್ರಾ ಆರೋಪಿಸಿದ್ದರು. ಇದರ ಜತೆಗೆ ಪಂಜಾಬ್ ಚುನಾವಣೆ ವೇಳೆ ಕೇಜ್ರಿವಾಲ್ ಸಂಬಂಧಿ ಪರವಾಗಿ ಬೋಗಸ್ ಬಿಲ್ಗಳನ್ನು ಸೃಷ್ಟಿಸಿ 10 ಕೋಟಿ ರೂ. ಸಂಗ್ರಹಿಸಲಾಗಿತ್ತೆಂದು ದೂರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.