ಶರಣಾಗಲು ಪೊಲೀಸರಿಗೇ ಷರತ್ತು ಹಾಕಿದ ನಾಗರಾಜ

Team Udayavani, May 9, 2017, 11:55 AM IST

bomb-naga.jpg

ಬೆಂಗಳೂರು: ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿ­ಕೊಂಡಿರುವ ನಾಗರಾಜ್‌ ಬಂಧನದಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ತನ್ನ ಕಸರತ್ತು ಮುಂದುವರಿಸಿದ್ದಾನೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಸೋಮವಾರ ಬಾಣಸವಾಡಿ ವಿಭಾಗದ ಎಸಿಪಿ ಹಾಗೂ ಪ್ರಕರಣದ ತನಿಖಾಧಿ­ಕಾರಿ ರವಿಕುಮಾರ್‌ ಅವರನ್ನು ಭೇಟಿ­ಯಾದ ನಾಗರಾಜ್‌ ಪರ ವಕೀಲರಾದ ಶ್ರೀರಾಮರೆಡ್ಡಿ, ಕೆಲ ಷರತ್ತು ಹಾಕಿದ್ದಾರೆ.

ನಾಗರಾಜ್‌ ಪೊಲೀಸರ ಮುಂದೆ ಶರ­ಣಾಗಲು ಬಯಸಿದ್ದು, ಕೆಲವು ಷರ­ ತ್ತು­ಗಳನ್ನು ನ್ಯಾಯಾಲಯದ ಮೂಲಕ ಕೇಳಿಕೊಂಡಿದ್ದಾನೆ. ಅದಕ್ಕೆ ಪೊಲೀಸ್‌ ಇಲಾಖೆ ಸ್ಪಂದಿಸಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ. 

ಷರತ್ತುಗಳೇನು?: ನಾಗರಾಜ್‌ನನ್ನು ಎಂದಿನ ಪೊಲೀಸ್‌ ವರಸೆಯಲ್ಲಿ ಅಥವಾ ಮಾದರಿಯಲ್ಲಿ ವಿಚಾರಣೆ ನಡೆಸಬಾರದು. ನ್ಯಾಯವಾದಿಗಳ ಸಮ್ಮುಖದಲ್ಲೇ ವಿಚಾರಣೆ ನಡೆಸಬೇಕು. ಪ್ರಕರಣದಲ್ಲಿ ಅವರ ಮಕ್ಕಳಾದ ಗಾಂಧಿ, ಶಾಸಿ ಹೆಸರು ಕೈಬಿಡಬೇಕು.

ಆತನ ವಿರುದ್ಧದ ಸುಳ್ಳು ಪ್ರಕರಣಗಳನ್ನು ಕೈಬಿಡಬೇಕು ಎಂಬ ಷರತ್ತುಗಳನ್ನು ಆರೋಪಿ ನಾಗರಾಜ್‌ ವಿಧಿಸಿದ್ದಾನೆ. ಈ ಕುರಿತು ಪ್ರತಿಕ್ರಿಯಿಸಿರುವ ಎಸಿಪಿ ರವಿಕುಮಾರ್‌ ಅವರು, “ಇಂಥ ಅಸಂಬದ್ಧ ಷರತ್ತುಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ,’ ಎಂದು ಖಾರವಾಗಿಯೇ ಉತ್ತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೂಬ್ಬನ ಬಂಧನ
ಈ ಮಧ್ಯೆ, ನಾಗರಾಜ್‌ನ ಮತ್ತೂಬ್ಬ ಸಹಚರ ಹಾಗೂ ಬೌನ್ಸರ್‌ ಹರಿಕೃಷ್ಣನನ್ನು ಆಂಧ್ರದ ವೆಲ್ಲೂರಿನಲ್ಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಈ ಹಿಂದೆ ಬಂಧನವಾಗಿದ್ದ ಶ್ರೀಹರಿಯ ಸಹೋದರನಾಗಿರುವ ಹರಿಕೃಷ್ಣ, ನಾಗರಾಜ್‌ಗೆ ಬೌನ್ಸರ್‌ ಆಗಿದ್ದ. ಶರವಣ ಮತ್ತು ಶ್ರೀನಿವಾಸ್‌ ನೋಟುಗಳ ಬದಲಾವಣೆಗೆ ಉದ್ಯಮಿಗಳನ್ನು ಕರೆ ತರುತ್ತಿದ್ದರು. ಈ ವೇಳೆ ಸಹೋದರರು ಸಿಸಿಬಿ ಪೊಲೀಸರ ಸೋಗಿನಲ್ಲಿ ದಾಳಿ ಮಾಡಿ ಹಣ ದರೋಡೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಇದುವರೆಗೂ ಪ್ರಕರಣದಲ್ಲಿ ಒಟ್ಟು 8 ಆರೋಪಿಗಳ ಬಂಧನವಾಗಿದೆ.

ಇಂದು ಅಥವಾ ನಾಳೆ ಶರಣಾಗತಿ?
ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆ ಪ್ರಕರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಎಸಿಪಿ ರವಿಕುಮಾರ್‌, ಪ್ರಕರಣದ ರೂವಾರಿ ನಾಗನ ಬಂಧನಕ್ಕೆ ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಬಳಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಆರೋಪಿ ನಾಗರಾಜ್‌ ಮಂಗಳವಾರ ಇಲ್ಲವೇ ಬುಧವಾರ ಬೆಳಗ್ಗೆ ಪೊಲೀಸರಿಗೆ ಶರಣಾಗುವ ಸಾಧ್ಯತೆಯಿದೆ. ಒಂದೊಮ್ಮೆ ಆತ ಶರಣಾಗದಿದ್ದರೆ, ಮುಂದಿನ ನಾಲ್ಕೈದು ದಿನಗಳಲ್ಲಿ ಪೊಲೀಸರೇ ಆತನನ್ನು ಬಂಧಿಸಲಿದ್ದಾರೆ ಎನ್ನಲಾಗಿದೆ.

ನಾಗರಾಜ್‌ ಪರ ವಕೀಲರಾದ ಶ್ರೀರಾಮರೆಡ್ಡಿ ಸೋಮವಾರ ನನ್ನನ್ನು ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಷರತ್ತುಗಳನ್ನು ಹೇರಲು ಮುಂದಾದರು. ಆದರೆ, ಇದಕ್ಕೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದೇನೆ.
-ರವಿಕುಮಾರ್‌, ಎಸಿಪಿ, ಬಾಣಸವಾಡಿ ಉಪವಿಭಾಗ

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.