ಕೈಗಾರಿಕೆಗಳಿಗೇಕಿಲ್ಲ ಕಡಿವಾಣ?

Team Udayavani, May 9, 2017, 11:57 AM IST

BELLANDUR.jpg

ಬೆಂಗಳೂರು: ಬೆಳ್ಳಂದೂರು ಕೆರೆ ಮಲಿನಕ್ಕೆ ಕಾರಣವಾದ ಹಾಗೂ ಕೆರೆಯ ದಂಡೆಯಲ್ಲಿರುವ ಕೈಗಾರಿಕೆಗಳನ್ನು ಮುಚ್ಚಿಸಿ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್‌ಜಿಟಿ) ಆದೇಶ ಹೊರಡಿಸಿ 20 ದಿನಗಳು ಕಳೆದಿವೆ. ಆದರೆ, ತ್ಯಾಜ್ಯ ನೀರು ಹರಿಸುತ್ತಿರುವ ಕೈಗಾರಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಿಲ್ಲ.

ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಎನ್‌ಜಿಟಿ ಒಂದು ತಿಂಗಳೊಳಗೆ ಕೆರೆಯನ್ನು ಸ್ವತ್ಛಗೊಳಿಸಬೇಕು ಮತ್ತು ಕೆರೆಯ ಮಲಿನಕ್ಕೆ ಕಾರಣವಾದ ಕೆರೆಯ ಸುತ್ತಲಿನ ಕೈಗಾರಿಕೆಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಏ.19ರಂದು ಆದೇಶ ಹೊರಡಿಸಿತ್ತು. ಎನ್‌ಜಿಟಿ ನೀಡಿದ ಆದೇಶ ಪ್ರತಿ ಸರ್ಕಾರದ ಕೈಸೇರಿ ವಾರದ ಕಳೆದರೂ, ಅಧಿಕಾರಿಗಳು ಮಾತ್ರ ಕೈಗಾರಿಕೆಗಳ ವಿರುದ್ಧ ಮೃದು ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಬೆಳ್ಳಂದೂರು ದಂಡೆಯಲ್ಲಿರುವಂತಹ ಕೈಗಾರಿಕೆ­ಗಳನ್ನು ಸ್ಥಗಿತಗೊಳಿಸುವ ಜವಾಬ್ದಾರಿಯನ್ನು ಎನ್‌ಜಿಟಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ವಹಿಸಿತ್ತು. ಜತೆಗೆ ಮಂಡಳಿಗೆ ಕೈಗಾರಿಕೆ ಮುಚ್ಚಿಸಲು ಬೇಕಾದಂತಹ ಅಗತ್ಯ ಸಹಕಾರ ಹಾಗೂ ಭದ್ರತೆಯನ್ನು ಸಂಬಂಧಿಸಿದ ಇಲಾಖೆಗಳು ನೀಡಬೇಕು ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಇಷ್ಟಾದರೂ ಕೋರಮಂಗಲ ಕಣಿವೆಗೆ ಕೈಗಾರಿಕೆಗಳ ತ್ಯಾಜ್ಯ ನೀರು ಹರಿಸುತ್ತಿದ್ದರೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಹೇಳಲಾಗಿದೆ.

ಎನ್‌ಜಿಟಿ ಆದೇಶದ ಪ್ರತಿ ಮೇ 4ರಂದು ರಾಜ್ಯ ಸರ್ಕಾರದ ಕೈಸೇರಿದ್ದು, ಅಂದೇ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್‌ ಅವರು ಬೆಳ್ಳಂದೂರು ದಂಡೆಯಲ್ಲಿರುವ 488 ಕೈಗಾರಿಕೆಗಳನ್ನು ಸ್ಥಗಿತಗೊಳಿಸುವ ಕುರಿತಂತೆ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು. ಜತೆಗೆ ಒಂದೊಂದು ಕೈಗಾರಿಕೆಗಳಿಗೆ ನೋಟಿಸ್‌ ನೀಡುವ ಬದಲಿಗೆ ಸಾರ್ವಜನಿಕ ಪ್ರಕಟಣೆ ನೀಡುವುದಾಗಿ ತಿಳಿಸಿದ್ದರು. 

ಮಂಡಳಿಯಿಂದ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕೆಲ ಕೈಗಾರಿಕೆಗಳು ತೋರಿಕೆಗೆ ಎಂಬಂತೆ ಶನಿವಾರ ಮತ್ತು ಭಾನುವಾರದ ಮಟ್ಟಿಗೆ ಕೈಗಾರಿಕೆಗಳನ್ನು ಸ್ಥಗಿತಗೊಳಿಸಿ, ಸೋಮವಾರದಿಂದ ಮತ್ತೆ ಕೈಗಾರಿಕೆಗಳನ್ನು ಆರಂಭಿಸಿದ್ದಾರೆ. ಎಂದಿನಂತೆ ಕೈಗಾರಿಕೆಗಳಲ್ಲಿ ಕಾರ್ಯ ಚಟುವಟಿಕೆಗಳು ನಡೆದು ತ್ಯಾಜ್ಯ ನೀರು ರಾಜಕಾಲುವೆಗೆ ಸೇರುತ್ತಿದೆ. ಆದರೆ, ಅಧಿಕಾರಿಗಳು ಮಾತ್ರ ಕೈಗಾರಿಕೆಗಳ ವಿರುದ್ಧ ಕ್ರಮಕ್ಕೆ ಮುಂದಾಗದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

ಹುಲ್ಲಿಗಾಗಿ ಕೆರೆಗೆ ಬೆಂಕಿ ಹಚ್ಚಿದ ಗೋಪಾಲಕರು!
ಬೆಳ್ಳಂದೂರು ಕೆರೆಯ ದಡದಲ್ಲಿ ಸೋಮವಾರವೂ ಬೆಂಕಿ ಕಾಣಿಸಿಕೊಂಡಿದ್ದ‌ರಿಂದ ಅದನ್ನು ನಂದಿಸಲು ಬಿಡಿಎ ಅಧಿಕಾರಿಗಳು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾನುವಾರ ಮಧ್ಯಾಹ್ನ ಹುಲ್ಲಿಗೆ ಬೆಂಕಿ ಹಚ್ಚಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಗೋಪಾಲಕರು, ಸೋಮವಾರವೂ ಹಚ್ಚಿದ್ದ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆವರಿಸಿಕೊಂಡಿತ್ತು.

ಬೆಂಕಿಯನ್ನು ನಂದಿಸಲು ಬಿಡಿಎ ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಇದರಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ಪದೇ ಪದೇ ಇಂತಹ ಘಟನೆ ಮರುಕಳಿಸುತ್ತಿರುವುದರಿಂದ ಈಗಾಗಲೇ ಪೊಲೀಸ್‌ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಮಂಗಳವಾರದಿಂದ ತಂತಿಬೇಲಿ ಅಳವಡಿಕೆ ಮಾಡಲಾಗುವುದು ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.

ಸ್ವತ್ಛತಾ ಕಾಮಗಾರಿ
ಬೆಳ್ಳಂದೂರು ಕೆರೆಯಲ್ಲಿ ಬಿಡಿಎ ವತಿಯಿಂದ ಕೈಗೆತ್ತಿಕೊಂಡಿರುವ ಸ್ವತ್ಛತಾ ಕಾಮಗಾರಿ ಮುಂದು­ವರಿಸಲಾಗಿದ್ದು, ಈವರೆಗೆ ಕೆರೆಯ ಸುಮಾರು 20 ಎಕರೆಯಲ್ಲಿ ಜೊಂಡು ಹಾಗೂ ಹುಲ್ಲು ತೆರವುಗೊಳಿ­ಸಲಾಗಿದೆ. ಇದರೊಂದಿಗೆ ಯಮಲೂರು ಭಾಗದ ಕಡೆಯ ಕೆರೆ ದಡದಲ್ಲಿ ಜೆಸಿಬಿ ಮೂಲಕ ತ್ಯಾಜ್ಯ ತೆರವುಗೊಳಿಸಲಾಗು­ತ್ತಿದ್ದು, ತೆರವುಗೊಳಿಸಿದ ತ್ಯಾಜ್ಯ ವಿಲೇವಾರಿಗೆ ಕೆರೆಯ ಸಮೀಪದಲ್ಲಿ ಜಾಗವನ್ನು ಗುರುತಿಸಲಾಗಿದೆ. ಇದರೊಂದಿಗೆ ಭಾನುವಾರ ಕೆರೆಯ ದಂಡೆಯಲ್ಲಿ ಕಾಣಿಸಿಕೊಂಡ ಬೆಂಕಿ ಪ್ರಕರಣದ ಕುರಿತು ಪೊಲೀಸರಿಗೆ ಬಿಡಿಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.