ಕೈಗಾರಿಕೆ ಬೆಳವಣಿಗೆ ಅರಸರ ಕೊಡುಗೆ

Team Udayavani, May 9, 2017, 12:05 PM IST

yaduveer.jpg

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಯಲ್ಲಿ ಮೈಸೂರು ಸಂಸ್ಥಾನದ ಅರಸರ ಕೊಡುಗೆ ಅಪಾರ ಎಂದು ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಎಫ್ಕೆಸಿಸಿಐ ಶತಮಾನೋತ್ಸವ ದಿನಾಚರಣೆ ಯಲ್ಲಿ ಮಾತನಾಡಿದ ಅವರು, ರಾಜ್ಯದ ಕೈಗಾರಿಕೆ ಗಳ ಬೆಳವಣಿಗೆಗೆ ಅಗತ್ಯವಾದ ಯೋಜನೆಗಳನ್ನು ಈ ಹಿಂದೆಯೇ ಮೈಸೂರು ಸಂಸ್ಥಾನದ ಅರಸರು ರೂಪಿಸಿದ್ದರು. ಅವರ ಆಲೋಚನೆ ಇಂದಿನ ಕೈಗಾರಿಕಾ ಸಾಧನೆಗೆ ತಳಹದಿ. ಪ್ರಸ್ತುತ ಇಡೀ ದೇಶದಲ್ಲಿಯೇ ಕರ್ನಾಟಕ ಕೈಗಾರಿಕಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದು ತಿಳಿಸಿದರು. 

ಮೈಸೂರು ಸಂಸ್ಥಾನದ ಜನಪರವಾದ ಯೋಜನೆಗಳು ಇಂದು ಸಾಕಷ್ಟು ಫ‌ಲನೀಡಿವೆ. ನಾಲ್ವಡಿ ಚಾಮರಾಜ ಒಡೆಯರ್‌ ಅವರು ಹಾಕಿಕೊಟ್ಟ ಹಾದಿಯಲ್ಲಿಯೇ ನಂತರದ ಎಲ್ಲ ಅರಸರು ನಡೆದರು. ಮಿರ್ಜಾ ಇಸ್ಮಾಯಿಲ್‌, ವಿಶ್ವೇಶ್ವರಯ್ಯ ಸೇರಿದಂತೆ ಅನೇಕ ತಜ್ಞರು ಸೂಕ್ತ ಮಾರ್ಗದರ್ಶನ, ಸಲಹೆ ನೀಡಿದ್ದರು. ನಾನು ಕೂಡ ನಮ್ಮ ಪೂರ್ವಿಕರು ಜನಹಿತಕ್ಕೋಸ್ಕರ ನಡೆದ ಮಾರ್ಗದಲ್ಲಿಯೇ ನಡೆಯುತ್ತೇನೆ ಎಂದರು.

ರಾಜ್ಯದಲ್ಲಿರುವ ಕೈಗಾರಿಕೆಗಳು ಮತ್ತಷ್ಟು ಅಭಿವೃದ್ಧಿ ಕಾಣುವ ನಿಟ್ಟಿನಲ್ಲಿ ಎಫ್ಕೆಸಿಸಿಐ ಅಗತ್ಯ ಯೋಜನೆಗಳನ್ನು ರೂಪಿಸಬೇಕು. ಇದರೊಂದಿಗೆ ರಾಜ್ಯ ಸರ್ಕಾರ ರೂಪಿಸುವ ಕೈಗಾರಿಕಾ ನಿಯಮಗಳ ಬಗ್ಗೆ, ಸಂಸ್ಥೆಯಿಂದ ಅಗತ್ಯ ಸಲಹೆ ಪಡೆಯಬೇಕು. ಇದು ರಾಜ್ಯದ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದು ಸಲಹೆ ನೀಡಿದರು.

ಎಫ್ಕೆಸಿಸಿಐ ಅಧ್ಯಕ್ಷ ಎಂ.ಸಿ ದಿನೇಶ್‌ ಮಾತನಾಡಿ, ಈ ಬಾರಿಯ ಬಜೆಟ್‌ನಲ್ಲಿ ಕೈಗಾರಿಕೋದ್ಯಮಿಗಳಿಗೆ ಸಹಾಯ ವಾಗುವ ನಿಟ್ಟಿನಲ್ಲಿ ಸರ್ಕಾರ ನೀಡಿರುವ ಅನೇಕ ಯೋಜನೆಗಳು ಸಹಕಾರಿಯಾಗಲಿದೆ. ಮುಖ್ಯಮಂತ್ರಿಗಳು ಮಹಿಳಾ ಕೈಗಾರಿಕೋದ್ಯಮಿಗಳಿಗೆ ಸಹಾಯವಾಗುವ ಯೋಜನೆಗಳನ್ನು ರೂಪಿಸಿದ್ದು, ಇದರಿಂದ ಅನೇಕ ಮಹಿಳೆಯರು ಕೈಗಾರಿಕಾ ಕ್ಷೇತ್ರಕ್ಕೆ ಬರಲು ಸಹಾಯಕವಾಗಲಿದೆ ಎಂದರು. 

ಟಾಪ್ ನ್ಯೂಸ್

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.