ಒಳ ಮೀಸಲಾತಿ ಜಾರಿಗೆ ಮನವಿ
Team Udayavani, May 9, 2017, 12:51 PM IST
ದಾವಣಗೆರೆ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಸೋಮವಾರ ಮಾದಿಗ ದಂಡೋರ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಯಲ್ಲಿ ಅತಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ಮಾದಿಗ ಸಮಾಜದ ಸಾಮಾಜಿಕ ಸೌಲಭ್ಯಕ್ಕಾಗಿ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ನಡೆಸಿದ ನಿರಂತರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ರಚಿಸಿತ್ತು.
ರಾಜ್ಯದಲ್ಲೆಡೆ ಸುತ್ತಾಡಿದ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿ, ಹಲವಾರು ವರ್ಷವೇ ಕಳೆದರೂ ಈವರೆಗೆ ಆಯೋಗದ ವರದಿ ಜಾರಿಗೆ ಬಂದಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಉದ್ಯೋಗ, ರಾಜಕೀಯ ಕ್ಷೇತ್ರದಲ್ಲಿ ತೀರಾ ಹಿಂದುಳಿದಿರುವ ಮಾದಿಗ ಸಮಾಜದ ಅಭಿವೃದ್ಧಿ
ಮತ್ತು ಮುಖ್ಯವಾಹಿನಿಗೆ ಬರುವಂತಾಗಲು ಅಗತ್ಯವಾಗಿರುವ ಒಳ ಮೀಸಲಾತಿ ಸೌಲಭ್ಯಕ್ಕಾಗಿ ರಾಜ್ಯ ಸರ್ಕಾರ ಕೂಡಲೇ ನ್ಯಾ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಹಾಗೂ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸಮಿತಿ ಜಿಲ್ಲಾ ಅಧ್ಯಕ್ಷ ಎಚ್.ಸಿ. ಗುಡ್ಡಪ್ಪ, ಕಡತಿ ಅಂಜಿನಪ್ಪ, ಟಿ. ಮರಿಯಪ್ಪ, ಎ.ಕೆ. ರೇವಣಸಿದ್ದಪ್ಪ, ಬಿ.ಎಸ್. ಕೃಷ್ಣಮೂರ್ತಿ, ನಾಗೇಂದ್ರಪ್ಪ, ಮಹೇಶ್, ಬಸವರಾಜ್, ಶೇಖರಪ್ಪ, ಬಾಬಣ್ಣ, ಆಂಜನೇಯ ಇತರರು ಮನವಿ ಸಲ್ಲಿಸಿದ ಸಂದರ್ಭದಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.