ಕನಕನಿಗೆ ಸ್ಟೈಲಿಶ್ ಸಾಂಗ್
Team Udayavani, May 10, 2017, 11:20 AM IST
ಆರ್.ಚಂದ್ರು ನಿರ್ಮಾಣ, ನಿರ್ದೇಶನದ ದುನಿಯಾ ವಿಜಯ್ ಅಭಿನಯದ “ಕನಕ ‘ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇದೀಗ ವಿಶೇಷವಾದ ಹಾಡೊಂದನ್ನು ಅದ್ಧೂರಿಯಾಗಿ ಚಿತ್ರೀಕರಿಸಿಕೊಂಡಿದ್ದಾರೆ. ಇದು 25 ಫೈಟರುಗಳು ಸೇರಿದಂತೆ ನೂರು ಮಂದಿ ಡ್ಯಾನ್ಸರ್‌ಗಳನ್ನು ಒಳಗೊಂಡು ಮಾಡಿರುವ ವಿಶಿಷ್ಟವಾದ ವಾರಿಯರ್ ಶೈಲಿಯ ಹಾಡನ್ನು ಚಿತ್ರೀಕರಿಸಲಾಗಿದೆ.
ಈ ಹಾಡು ದೇವನಹಳ್ಳಿ ಬಳಿ ಹದಿನೈದೆಕರೆಯಷ್ಟು ವಿಶಾಲವಾದ ಕೆಂಪು ಹುಡಿ ಮಣ್ಣಿನ ಪ್ರದೇಶದಲ್ಲಿ ಚಿತ್ರೀಕರಣಗೊಂಡಿದೆ. ಮುರಳಿ ನೃತ್ಯ ನಿರ್ದೇಶನದ ಈ ವಿಶೇಷ ಹಾಡಿನ ಚಿತ್ರೀಕರಣದಲ್ಲಿ ವಿಜಯ್ ವಿಭಿನ್ನ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಮುಂಬೈಯ ಡ್ಯಾನ್ಸರ್, ಹತ್ತಾರು ಜನ ಬಾಡಿಗಾರ್ಡ್ಸ್, ಬೌನ್ಸರ್‌ಗಳು ಈ ಹಾಡಿನಲ್ಲಿ ಪಾಲ್ಗೊಂಡಿದ್ದಾರೆ.
ಈ ಹಾಡಿಗಾಗಿ 20ಲಕ್ಷ ರುಪಾಯಿ ವೆಚ್ಚದಲ್ಲಿ ವಿಶೇಷವಾದ ಕಾಸ್ಟೂಮ್‌ಗಳನ್ನು ಚೆನ್ನೈನಲ್ಲಿ ಸಿದ್ದಪಡಿಸಲಾಗಿದೆ. ಸತ್ಯ ಹೆಗ್ಡೆ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನವೀನ್ ಸಜ್ಜು ಸಂಗೀತ ನೀಡಿದ್ದಾರೆ. ಹರೀಶ್ ಸಂಕಲನ, ಮುರಳಿ, ಹರ್ಷ, ಇಮ್ರಾನ್ ನƒತ್ಯ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು, ರವಿವರ್ಮ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.