ಆರ್‌ಸಿ ಹರ್ಷ ಗುಪ್ತಾ ನಗರ ಪ್ರದಕ್ಷಿಣೆ
Team Udayavani, May 10, 2017, 5:01 PM IST
ಕಲಬುರಗಿ: ಪ್ರಾದೇಶಿಕ ಆಯುಕ್ತ ಹರ್ಷಗುಪ್ತಾ ಮಂಗಳವಾರ ಸಂಜೆ ನಗರದಲ್ಲಿ ದಿಢೀರ್ ಪ್ರದಕ್ಷಿಣೆ ಹಾಕಿ ಒತ್ತುವರಿ ಹಾಗೂ ಅಕ್ರಮ ಕಟ್ಟಡಗಳನ್ನು ವೀಕ್ಷಿಸಿ ಪಾರ್ಕಿಂಗ್‌ಗೆ ಜಾಗ ಕಲ್ಪಿಸಲು ಅಕ್ರಮ ಕಟ್ಟಡದಾರರಿಗೆ ಸೂಚನೆ ನೀಡಿದರು.
ಹೀರಾಪುರ, ಆರ್‌ಟಿಒ ಕ್ರಾಸ್, ಸೇಡಂ ರಸ್ತೆ, ಮುಸ್ಲಿಂ ಚೌಕ್, ಹುಮನಾಬಾದ ಬೇಸ್, ನೆಹರು ಗಂಜ್ ಸೇರಿದಂತೆ ಇತರ ಪ್ರದೇಶಗಳಲ್ಲಿ ಪ್ರದಕ್ಷಿಣೆ ಹಾಕಿ, ಪಾರ್ಕಿಂಗ್ ಸಲುವಾಗಿ ಜಾಗ ಬಿಡದಿರುವ ಕಟ್ಟಡಗಳನ್ನು ವೀಕ್ಷಿಸಿದರು. ಈಗಾಗಲೇ ನೋಟಿಸ್ ನೀಡಲಾಗಿದೆ. ಸ್ವಯಂ ಆಗಿ ತೆರವುಗೊಳಿಸಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಒಂದು ವೇಳೆ ಪಾರ್ಕಿಂಗ್, ಶೆಟ್‌ಬ್ಯಾಕ್ ಕಲ್ಪಿಸದಿದ್ದರೆ ತದನಂತರ ಜಿಲ್ಲಾಡಳಿತವೇ ಕಾರ್ಯಾಚರಣೆಗೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನೊಟೀಸ್‌ಗೆ ಹೆದ್ದರಿದ್ದ ಅಕ್ರಮ ಒತ್ತುವರಿಗಾರರು ಹಾಗೂ ಅಕ್ರಮ ಕಟ್ಟಡದಾರರು, ಆರ್‌ಸಿಯವರ ಈ ಎಚ್ಚರಿಕೆಯಿಂದ ಅಕ್ಷರಶ ಗಾಬರಿಯಾದಂತೆ ಕಂಡು ಬಂತು. ಇಂತಿಷ್ಟು ಸಮಯದೊಳಗೆ ಕಟ್ಟಡದ ಕೆಳಗಿನ ಭಾಗದಲ್ಲಿ ಪಾರ್ಕಿಂಗ್‌ಗೆ ಅವಕಾಶ ನೀಡದಿದ್ದಲ್ಲಿ ತಾವೇ ಜೆಸಿಬಿ ತಂದು ಒಡೆಯಿರಿ ಎಂದು ಕೆಲವರು ಆರ್‌ಸಿ ಅವರಲ್ಲಿ ವಿನಂತಿಸಿ ಸಮಯಾವಕಾಶ ಕೇಳಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ನಗರದಲ್ಲಿ 500ಕ್ಕೂ ಹೆಚ್ಚು ಕಟ್ಟಡದಾರರಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಒತ್ತುವರಿ ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿದೆ. ಈಗಾಗಲೇ ಕೆಲವರು ಸ್ವಯಂ ಪ್ರೇರಿತವಾಗಿ ತೆರವಿಗೆ ಮುಂದಾಗಿದ್ದಾರೆ. ಇನ್ನಷ್ಟು ದಿನ ಜಿಲ್ಲಾಡಳಿತ ಕಾಯ್ದು ನೋಡಲಿದ್ದು, ತದನಂತರ ಕಾರ್ಯಾಚರಣೆಗೆ ಇಳಿಯಲಿದೆ ಎಂದು ಸ್ಪಷ್ಟಪಡಿಸಿದರು. ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಹಾಗೂ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.