26 ನವೋದ್ಯಮಿಗಳಿಗೆ 10 ಕೋಟಿ ಅನುದಾನ: ಪ್ರಿಯಾಂಕ್ ಖರ್ಗೆ
Team Udayavani, May 11, 2017, 11:06 AM IST
ಬೆಂಗಳೂರು: ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಅವಿಷ್ಕಾರಕ್ಕಾಗಿ ಒಟ್ಟು 26 ನವೋದ್ಯಮಗಳಿಗೆ ರಾಜ್ಯ ಸರ್ಕಾರ 10.70 ಕೋಟಿ ರೂ. ಅನುದಾನ ಬಿಡುಗಡೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯದ ನೂತನ ಸ್ಟಾರ್ಟ್‌ಅಪ್ (ನವೋದ್ಯಮ) ನೀತಿ-2015-10 ಅನ್ವಯ “ಐಡಿಯಾ ಟು ಪ್ರೂಫ್ ಆಫ್ ಕಾನ್ಸೆಪ್ಟ್ ಗ್ರಾಂಟ್ ಸ್ಕೀಮ್’ (ಐಡಿಯಾ2ಪಿಓಸಿ) ಪ್ರಕಾರ 26 ನವೋದ್ಯಮಗಳಿಗೆ ಅನುದಾನ ಬಿಡಗಡೆ ಮಾಡಲಾಗಿದೆ. ವಿವಿಧ ನವೋದ್ಯಮಗಳು 29 ರಿಂದ 40 ಲಕ್ಷ ರೂ.ವರೆಗೆ ಪ್ರೋತ್ಸಾಹಧನ ಪಡೆದುಕೊಂಡಿವೆ. ಆಯ್ಕೆಯಾದ ನವೋದ್ಯಮಗಳಿಗೆ ಸಚಿವರು ಬುಧವಾರ ಮೊದಲ ಕಂತಿನ 3.21 ಕೋಟಿ ರೂ. ಮೊತ್ತದ ಚೆಕ್ ಹಸ್ತಾಂತರಿಸಿದರು.
ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ವಿತರಿಸಿ ಮಾತನಾಡಿದ ಸಚಿವರು, ನವೋದ್ಯಮಕ್ಕೆ ರಾಜ್ಯದಲ್ಲಿ ಸಾಕಷ್ಟು ಅವಕಾಶಗಳಿದ್ದು, ಸರ್ಕಾರ ಅದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ನವೋದ್ಯಮ ಘಟಕ, ಕರ್ನಾಟಕ ಜೈವಿಕ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸೇವೆ (ಕೆಬಿಐಟಿಎಸ್) ಸಹಯೋಗದೊಂದಿಗೆ ಐಟಿ-ಬಿಟಿ ಇಲಾಖೆ ಐಡಿಯಾ2ಪಿಓಸಿ ಯೋಜನೆ ಜಾರಿಗೆ ತರುತ್ತಿದೆ ಎಂದರು.
ಜೈವಿಕ ತಂತ್ರಜ್ಞಾನ ಕ್ಷೇತ್ರದ ಅವಿಷ್ಕಾರಗಳನ್ನು ಪ್ರೋತ್ಸಾಹಿಸಿ ಮತ್ತು ನವೋದ್ಯಮಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಅಗತ್ಯ ಮಾರ್ಗದರ್ಶನ ನೀಡಲು ಅನುಕೂಲವಾಗುವಂತೆ ಐಡಿಯಾ2ಪಿಓಸಿ ಯೋಜನೆ ರೂಪಿಸಲಾಗಿದೆ. ಈಗಾಗಲೇ 26 ನವೋದ್ಯಮಗಳನ್ನು ಆಯ್ಕೆ ಮಾಡಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವರು ನವ ಉದ್ದಿಮೆದಾರರಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಐಟಿ-ಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.