ಪಿಯು: 6 ವರ್ಷಗಳಲ್ಲೇ ಅತಿ ಕಡಿಮೆ ಫ‌ಲಿತಾಂಶ


Team Udayavani, May 12, 2017, 2:33 AM IST

Result-11-05.jpg

ಬೆಂಗಳೂರು: ವಿದ್ಯಾರ್ಥಿಗಳ ಪಾಲಿಗೆ ಮಹತ್ವದ್ದೆನಿಸಿದ್ದ ದ್ವಿತೀಯ ಪಿಯು ಫ‌ಲಿತಾಂಶ ಪ್ರಕಟವಾಗಿದ್ದು, ಕಳೆದ 6 ವರ್ಷಗಳಲ್ಲೇ ಅತೀ ಕಡಿಮೆ ಫ‌ಲಿತಾಂಶ ಈ ಬಾರಿ ಬಂದಿದೆ. ಶೇ.52.38ರಷ್ಟು ವಿದ್ಯಾರ್ಥಿಗಳು ಮಾತ್ರ ತೇರ್ಗಡೆಯಾಗಿದ್ದಾರೆ. ಎಂದಿ ನಂತೆ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ  ಶೇ.35.05ರಷ್ಟು ಮತ್ತು ಕನ್ನಡ ಮಾಧ್ಯಮದಲ್ಲಿ ಶೇ.40.68 ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ನಿರೀಕ್ಷೆಯಂತೆ ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳು ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದುಕೊಂಡಿವೆ. ಬೀದರ್‌ ಮತ್ತು ಯಾದಗಿರಿ ಜಿಲ್ಲೆಗಳು ಕ್ರಮವಾಗಿ ಕೊನೆಯ ಎರಡು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿವೆ.

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಎನ್‌.ಸೃಜನಾ ಮತ್ತು ಉಡುಪಿ ಜಿಲ್ಲೆಯ ಗಂಗೊಳ್ಳಿಯ ಎಸ್‌.ವಿ.ಪಿಯು ಕಾಲೇಜಿನ ಎನ್‌. ರಾಧಿಕಾ ಪೈ ತಲಾ 596 ಅಂಕ ಗಳಿಸುವ ಮೂಲಕ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ. ಅದೇ ರೀತಿ ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ವಿಜಯನಗರದ ಆರ್‌ಎನ್‌ಎಸ್‌ ಪಿಯು ಕಾಲೇಜಿನ ಪಿ.ಜಿ. ಶ್ರೀನಿಧಿ ಮತ್ತು ಅಳಿಕೆಯ ಸತ್ಯಸಾಯಿ ಲೋಕಸೇವಾ ಪಿಯು ಕಾಲೇಜಿನ ಸಾಯಿ ಸಮರ್ಥ್ ತಲಾ 595 ಅಂಕ ಪಡೆಯುವ ಮೂಲಕ ಇವರೂ ಮೊದಲ ಸ್ಥಾನ ಹಂಚಿಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಇಂದು ಪಿಯು ಕಾಲೇಜಿನ ಬಿ. ಚೈತ್ರಾ ಅವರು 589 ಅಂಕ ಗಳಿಸಿ ರಾಜ್ಯಕ್ಕೇ ಮೊದಲಿಗರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ ಶೇ.44.74ರಷ್ಟು ಬಾಲಕರು ಹಾಗೂ ಶೇ.60.28ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಬಾಲಕಿಯರ ತೇರ್ಗಡೆ ಫ‌ಲಿತಾಂಶ ಹುಡುಗರಿಗೆ ಹೋಲಿಸಿದರೆ ಶೇ. 15.54ರಷ್ಟು ಹೆಚ್ಚಿದೆ. ಮಲ್ಲೇಶ್ವರದ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ಫ‌ಲಿತಾಂಶ ಘೋಷಿಸಿದರು. ಎನ್‌ಸಿಆರ್‌ಟಿ ಪಠ್ಯಕ್ರಮದಿಂದ ಏನೂ ಸಮಸ್ಯೆಯಾಗಿಲ್ಲ. ಕರ್ನಾಟಕ ಸೆಕ್ಯೂರ್‌ ಎಕ್ಸಾಮಿನೇಷನ್‌ ಸಿಸ್ಟಮ್‌ ಜಾರಿ ಮಾಡಿದ ಅನಂತರ ಪರೀಕ್ಷಾ ಅಕ್ರಮ ಕಡಿಮೆಯಾಗಿದೆ ಎಂದರು.


ಕರಾವಳಿ ಜಿಲ್ಲೆಯ ಸಾಧನೆ

ಪ್ರತಿ ವರ್ಷದಂತೆ ಈ ವರ್ಷವೂ ಕರಾವಳಿಯ ಎರಡು ಜಿಲ್ಲೆಗಳು ಪಿಯುಸಿ ಫ‌ಲಿತಾಂಶದಲ್ಲಿ ಅಗ್ರಸ್ಥಾನದಲ್ಲಿವೆ. 2016ರ ಪಿಯುಸಿ ಫ‌ಲಿತಾಂಶದಲ್ಲಿ 2ನೇ ಸ್ಥಾನದಲ್ಲಿದ್ದ ಉಡುಪಿ ಈ ವರ್ಷ ಮೊದಲ ಸ್ಥಾನಕ್ಕೇರಿದೆ. ಹಾಗೆಯೇ ಮೊದಲ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ 2ನೇ ಸ್ಥಾನಕ್ಕೆ ಇಳಿದಿದೆ. ಕೊಡಗು ಮೂರನೇ ಸ್ಥಾನ ಉಳಿಸಿಕೊಂಡಿದೆ. ಉತ್ತರ ಕನ್ನಡ 4ನೇ ಸ್ಥಾನ ಉಳಿಸಿಕೊಂಡಿದೆ. ಚಿಕ್ಕಮಗಳೂರು 8ರಿಂದ ಐದಕ್ಕೆ ಏರಿದೆ. ಬೀದರ್‌ 27ರಿಂದ 31ನೇ ಸ್ಥಾನಕ್ಕೆ ಇಳಿದಿದೆ.

ಮರು ಪರೀಕ್ಷೆ 
ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನು ಜೂನ್‌ 28ರಿಂದ ಜುಲೈ 8ರ ತನಕ ನಡೆಸಲಾಗುತ್ತದೆ. ಪರೀಕ್ಷಾ ಶುಲ್ಕ ಪಾವತಿಸಲು ಮೇ 23 ಕೊನೆಯ ದಿನವಾಗಿರುತ್ತದೆ. ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಮೇ 24ರ ತನಕ ಕಾಲಾವಕಾಶವಿದ್ದು, ಇದಕ್ಕೆ ಯಾವುದೇ ಶುಲ್ಕ ಇರುವುದಿಲ್ಲ. ಇದರ ಫ‌ಲಿತಾಂಶವನ್ನು ಆಯಾ ದಿನವೇ ಪಿಯು ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.