ಮಲ್ಟಿಪ್ಲೆಕ್ಸ್‌ ವಿರುದ್ಧ ಮುನಿದ “ಮಾಸ್ತಿಗುಡಿ’


Team Udayavani, May 12, 2017, 12:03 PM IST

multiplex.jpg

ಬೆಂಗಳೂರು: ಮಲ್ಟಿಪ್ಲೆಕ್ಸ್‌ಗಳಲ್ಲಿ ಹೆಚ್ಚು ಸ್ಕ್ರೀನ್‌ ಸಿಗದಿದ್ದರಿಂದ ಮತ್ತು ಸಿಕ್ಕಿರುವ ಶೋಗಳು ಪ್ರೈಮ್‌ ಟೈಮ್‌ ಅಲ್ಲದ್ದರ ಹಿನ್ನೆಲೆಯಲ್ಲಿ “ಮಾಸ್ತಿಗುಡಿ’ ಚಿತ್ರತಂಡ ಮಲ್ಟಿಪ್ಲೆಕ್ಸ್‌ಗಳ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದೆ. ದುನಿಯಾ ವಿಜಯ್‌ ಅಭಿನಯದ “ಮಾಸ್ತಿಗುಡಿ’ ಚಿತ್ರ ಶುಕ್ರವಾರ ಬಿಡುಗಡೆಯಾಗುತ್ತಿದ್ದು, ಮಲ್ಟಿಪ್ಲೆಕ್ಸ್‌  ಗಳಲ್ಲಿ ಚಿತ್ರಕ್ಕೆ ಕೆಲವೇ ಕೆಲವು ಸ್ಕ್ರೀನ್‌ಗಳು ಸಿಕ್ಕಿವೆ.

ಅವುಗಳು ಕೂಡ ಹೆಚ್ಚು ಮಂದಿ ಕೂರದ ಚಿಕ್ಕ ಸ್ಕ್ರೀನ್‌ಗಳು ಎಂದು “ಮಾಸ್ತಿಗುಡಿ’ ತಂಡ ವಾಣಿಜ್ಯ ಮಂಡಳಿಗೆ ದೂರು ನೀಡಿದೆ. ಚಿತ್ರದ ನಾಯಕ ವಿಜಯ್‌, ನಿರ್ದೇಶಕ ನಾಗಶೇಖರ್‌ ಮಂಡಳಿಗೆ ತೆರಳಿ, ತಮಗೆ ಹೆಚ್ಚು ಸ್ಕ್ರೀನ್‌ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ನಿರ್ದೇಶಕ ನಾಗಶೇಖರ್‌, “ಕರ್ನಾಟಕದಲ್ಲಿ ಕನ್ನಡಿಗರಿಗೇ ಆದ್ಯತೆ ಇಲ್ಲ.

ಸಿನಿಮಾ ಮಾಡಿ ಮಲ್ಟಿಪ್ಲೆಕ್ಸ್‌ ಗಳ ಮುಂದೆ ಕೈ ಕಟ್ಟಿ ನಿಂತುಕೊಳ್ಳುವ ಪರಿಸ್ಥಿತಿಯಿದೆ. ಕನ್ನಡ ಸಿನಿಮಾಗಳು ಬಿಡುಗಡೆಯಾದಾಗ ಅವುಗಳಿಗೆ ಕೊಡಬೇಕಾದ ಕನಿಷ್ಠ ಆದ್ಯತೆಯನ್ನೂ ಮಲ್ಟಿಪ್ಲೆಕ್ಸ್‌ಗಳು ಕೊಡುತ್ತಿಲ್ಲ. ಹಾಗಾಗಿ, ಮಂಡಳಿಗೆ ದೂರು ನೀಡಿದ್ದೇವೆ. ಹೆಚ್ಚು ಸ್ಕ್ರೀನ್‌ ದೊರಕಿಸಿಕೊಡುವ ವಿಶ್ವಾಸ ನಮಗಿದೆ’ ಎಂದು ಹೇಳಿದರು.

ಉದಯ್‌-ಅನಿಲ್‌ ಕುಟುಂಬಕ್ಕೆ ಮಾಸ್ತಿಗುಡಿ ಚಿತ್ರತಂಡ  ನೆರವು: ಚಿತ್ರೀಕರಣದ ವೇಳೆ ದುರ್ಮರಣ­ವನ್ನಪ್ಪಿದ ಸಹನಟ ಉದಯ್‌ ಕುಟುಂಬಕ್ಕೆ “ಮಾಸ್ತಿಗುಡಿ’ ಚಿತ್ರತಂಡ 20 ಲಕ್ಷ ರೂ.ಮೊತ್ತದ ಬಾಂಡ್‌ ನೀಡಿದೆ. ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಉಪಸ್ಥಿತಿ­ಯಲ್ಲಿ ಗುರುವಾರ ಉದಯ್‌ ಕುಟುಂಬಕ್ಕೆ ಬಾಂಡ್‌ ವಿತರಿಸಿದ್ದು, ಮಾಸಿಕ 20 ಸಾವಿರ ರೂ.ಬಡ್ಡಿ ಬರಲಿದೆ.

ಇದೇ ವೇಳೆ “ಉದಯವಾಣಿ’ಜತೆ ಮಾತನಾಡಿದ ನಟ ದುನಿಯಾ ವಿಜಯ್‌, ದುರಂತದಲ್ಲಿ ಸಾವನ್ನಪ್ಪಿದ ಅನಿಲ್‌ ಮತ್ತು ಉದಯ್‌ ಜೀವವನ್ನು ಮತ್ತೆ ತರಲು ಸಾಧ್ಯವಿಲ್ಲ. ಈ ಹಿಂದೆ ಎರಡೂ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡಲಾಗಿತ್ತು.ಅಂತೆಯೇ, ಈಗ ಉದಯ್‌ ಕುಟುಂಬಕ್ಕೆ ನೀಡಲಾಗಿದೆ. ಅನಿಲ್‌ ಕುಟುಂಬಕ್ಕೂ 20 ಲಕ್ಷ ರೂ.ಮೌಲ್ಯದ ಬಾಂಡ್‌ ನೀಡಲಾಗುವುದು ಎಂದರು. ಇದೇ ವೇಳೆ ಸಾಹಸ ನಿರ್ದೇಶಕ ರವಿವರ್ಮಾ ಅವರು ಎರಡೂ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 5 ಲಕ್ಷ ರೂ. ನೆರವು ನೀಡಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಕೆಲವು ಸಿನಿಮಾಗಳು ಮಲ್ಟಿಪ್ಲೆಕ್ಸ್‌ ಗಳಲ್ಲಿ ಚೆನ್ನಾಗಿ ಹೋಗುತ್ತಿದೆ. ಚೆನ್ನಾಗಿ ಹೋಗುತ್ತಿರುವ ಸಿನಿಮಾಗಳಿಗೆ ತೊಂದರೆ ಕೊಡಬಾರದು ಎಂಬ ನಿಯಮವಿರುವುದರಿಂದ ಹೆಚ್ಚು ಸ್ಕ್ರೀನ್‌ಗಳು ಸಿಗುತ್ತಿಲ್ಲ. ಈಗಾಗಲೇ ಮಲ್ಟಿಪ್ಲೆಕ್ಸ್‌ನವರ ಜತೆ ಮಾತುಕತೆ ನಡೆಸಿದ್ದೇವೆ. ಒಂದಷ್ಟು ಸ್ಕ್ರೀನ್‌ಗಳು ಸಿಗಲಿವೆ
-ಸಾ ರಾ ಗೋವಿಂದು, ವಾಣಿಜ್ಯ ಮಂಡಳಿ ಅಧ್ಯಕ್ಷ

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.