ರಾಜ್ಯ ಸರ್ಕಾರಕ್ಕೆ ನಾಲ್ಕು ವರ್ಷದ ಸಂಭ್ರಮ

Team Udayavani, May 12, 2017, 12:36 PM IST

mys5.jpg

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಮೇ 13ಕ್ಕೆ ನಾಲ್ಕು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆ ಅಂದು ಮೈಸೂರಿನ ಕಲಾ ಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ವಿವಿಧ ಯೋಜನೆಗಳ ಫ‌ಲಾನುಭವಿಗಳ ಅನಿಸಿಕೆ ಆಲಿಸಲು ಲೋಕೋಪಯೋಗಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್‌.ಸಿ. ಮಹದೇವಪ್ಪರ ಅಧ್ಯಕ್ಷತೆಯಲ್ಲಿ ಜನ – ಮನ ಕಾರ್ಯಕ್ರಮ ಆಯೋಜಿಸಿದೆ.

ಜಿಲ್ಲಾಡಳಿತ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗ ದಲ್ಲಿ ನಡೆಯುವ ಈ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲಿಸಲು ಜಿಲ್ಲಾಧಿಕಾರಿ ಡಿ.ರಂದೀಪ್‌, ಗುರುವಾರ ಜಲದರ್ಶಿನಿ ಅತಿಥಿ ಗೃಹದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ರಾಜ್ಯ ಸರ್ಕಾರವು ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿ ಭಾಗ್ಯ, ಕ್ಷೀರಧಾರೆ, ಪಶು ಭಾಗ್ಯ, ವಿದ್ಯಾಸಿರಿ, ರಾಜೀವ್‌ ಆರೋಗ್ಯ ಭಾಗ್ಯ, ಶಾದಿ ಭಾಗ್ಯ, ಋಣಮುಕ್ತ, ಮುಖ್ಯಮಂತ್ರಿ ಸಾಂತ್ವನ ಹರೀಶ್‌ ಯೋಜನೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಗಳಲ್ಲಿ ಗರಿಷ್ಠ ಅಂಕ ಗಳಿಸಿದ ಪ.ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಯೋಜನೆ, ವಸತಿ ಭಾಗ್ಯ ಮುಂತಾದ ಯೋಜನೆಗಳನ್ನು ಪ್ರಯೋಜನ ಪಡೆದು ಫ‌ಲಾನುಭವಿಗಳು ಈ ಕಾರ್ಯಕ್ರಮದಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಲು ವೇದಿಕೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಳೆದ ವರ್ಷ ಆಯೋಜಿಸಿದ್ದ ಜನಮನ ಕಾರ್ಯ ಕ್ರಮದಲ್ಲಿ ಫ‌ಲಾನುಭವಿಗಳನ್ನು ಅನ್ನಭಾಗ್ಯ ಯೋಜನೆಯಡಿ ಪ್ರತಿ ಯೂನಿಟ್‌ಗೆ ಕೊಡುತ್ತಿರುವ 5 ಕೆ.ಜಿ ಅಕ್ಕಿ ಪ್ರಮಾಣವನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದರು. ಅದರಂತೆ ಸರ್ಕಾರ ಈ ಪ್ರಮಾಣವನ್ನು 7 ಕೆ.ಜಿ.ಗೆ ಹೆಚ್ಚಿಸಿದೆ. ಕ್ಷೀರಭಾಗ್ಯ ಯೋಜನೆಯಡಿ 3 ದಿನದ ಬದಲಿಗೆ 5 ದಿನ ಶಾಲೆಗಳಲ್ಲಿ ಮಕ್ಕಳಿಗೆ ಹಾಲು ನೀಡಲು ಈ ಸಾಲಿನ ರಾಜ್ಯ ಬಜೆಟ್‌ ನಲ್ಲಿ ಘೋಷಿಸಲಾಗಿದೆ. ಇದೆಲ್ಲವು ಜನ ಮನ ಕಾರ್ಯ ಕ್ರಮದ ಫ‌ಲಶೃತಿ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಡಾ.ಕಾ.ರಾಮೇಶ್ವರಪ್ಪ, ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ಪ್ರಸಾದ್‌ ಮೂರ್ತಿ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಂಜುನಾಥ್‌, ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಉದಯ್‌ ಕುಮಾರ್‌, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಭಾರತಿ, ಜಿಪಂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿ ಕಾರಿ ರಾಜುಗೋಪಾಲ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್‌. ರಾಜು ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮೇ 13ರಂದು ಬೆಳಗ್ಗೆ 11 ಗಂಟೆಗೆ ಕಲಾ ಮಂದಿರದಲ್ಲಿ ನಡೆಯಲಿರುವ ಜನ-ಮನ ಕಾರ್ಯ ಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಉದ್ಘಾಟಿಸಿ, ಫ‌ಲಾನು ಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.  ಶಾಸಕ ವಾಸು ಅಧ್ಯಕ್ಷತೆ ವಹಿಸುವರು.

ಟಾಪ್ ನ್ಯೂಸ್

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.